ಹುಬ್ಬಳ್ಳಿ: ನಗರದ ಖಾಸಗಿ ಕಾಲೇಜು (College) ವಿದ್ಯಾರ್ಥಿಯೊಬ್ಬ (Student) ಹಿಂದೂ (Hindu) ಯುವತಿಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿ ಹಿಂದೂ ಯುವತಿಯರ ಪೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ. ಬಳಿಕ ದಮ್ ಇದ್ದರೆ ನನ್ನ ಹಿಡಿಯಿರಿ ಎಂದು ಹುಬ್ಬಳ್ಳಿಯ ಪೊಲೀಸರಿಗೆ ಚಾಲೆಂಜ್ ಹಾಕಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅಲರ್ಟ್ ಆದ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ
ಬಳಿಕ ಡಿಸಿಪಿ ಗೋಪಾಲ ಬ್ಯಾಕೋಡ್ ಕಾಲೇಜ ಪ್ರಾಂಶುಪಾಲರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಪೊಲೀಸರು ವಿದ್ಯಾರ್ಥಿಯ ವಿಚಾರಣೆ ನಡೆಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಥಳಿಸುತ್ತಿದ್ದ ಪತಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಹುಬ್ಬಳ್ಳಿಯ ಹೃದಯಭಾಗದಲ್ಲಿರುವ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ಬಳಿ ನಡೆದಿದೆ. ಸಾರ್ವಜನಿಕರು ವ್ಯಕ್ತಿಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ