Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್​​

ಪತಿಯ ಆಧಾರ್‌ ಕಾರ್ಡ್‌ನಲ್ಲಿನ ಮಾಹಿತಿಯನ್ನು ಬಹಿರಂಗಪಡಿಸಲಾಗದು. ಇದನ್ನು ಆಧಾರ್‌ ಕಾಯಿದೆ ಸೆಕ್ಷನ್‌ 33ರ ಅಡಿ ಹೈಕೋರ್ಟ್‌ ನಿರ್ಧರಿಸಬೇಕಾಗುತ್ತದೆ ಎಂದು ಯುಐಡಿಎಐ 2021ರ ಫೆಬ್ರವರಿ 25ರಂದು ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆಕೆ ಹೈಕೋರ್ಟ್ ಕದತಟ್ಟಿದ್ದು, ಪತಿಗೆ ನೋಟಿಸ್‌ ಜಾರಿ ಮಾಡಿದ್ದ ನ್ಯಾಯಾಲಯವು ಆಕೆಯ ಅರ್ಜಿಯನ್ನು ಪರಿಗಣಿಸುವಂತೆ ಯುಐಡಿಎಐಗೆ 2023ರ ಫೆಬ್ರವರಿ 8ರಂದು ಆದೇಶಿಸಿತ್ತು. ಮುಂದೇನಾಯ್ತು ಓದಿ..,

ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್​​
ಧಾರವಾಡ ಹೈಕೋರ್ಟ್​
Follow us
ವಿವೇಕ ಬಿರಾದಾರ
|

Updated on: Nov 28, 2023 | 7:36 AM

ಬೆಂಗಳೂರು ನ.28: ವೈವಾಹಿಕ ಸಂಬಂಧದ ಆಧಾರದ ಮೇಲೆ ಪತ್ನಿಯು (Wife) ಪತಿಯ (Husband) ಆಧಾರ್ ಸಂಖ್ಯೆ (Adhar Number) ಅಥವಾ ಇನ್ನಾವುದೇ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್​​ನ (High Court) ಧಾರವಾಡ (Dharwad) ಪೀಠ ಹೇಳಿದೆ. ಕಾನೂನಿನ ಚೌಕಟ್ಟಿನೊಳಗೆ ಸ್ವಾಯತ್ತತೆ ಮತ್ತು ಗೌಪ್ಯತೆ ಹಕ್ಕುಗಳ ರಕ್ಷಣೆಯನ್ನು ಒತ್ತಿಹೇಳಿದೆ.

ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (UIDAI) ಉಪ ಮಹಾನಿರ್ದೇಶಕರು ಮತ್ತು ಎಫ್‌ಎಎ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಸ್‌ ಸುನಿಲ್‌ ದತ್‌ ಯಾದವ್ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಇತ್ಯರ್ಥಪಡಿಸಿದೆ.

ಹಾಲಿ ಪ್ರಕರಣದಲ್ಲಿ ಪತ್ನಿಯು ಪತಿಯ ಆಧಾರ್‌ ಕಾರ್ಡ್‌ನಲ್ಲಿನ ಮಾಹಿತಿ ಕೋರಿದ್ದರು. ಹುಬ್ಬಳ್ಳಿ ಮಹಾನಗರ ನಿವಾಸಿಯಾದ ಮಹಿಳೆಯು 2005ರ ನವೆಂಬರ್‌ನಲ್ಲಿ ವಿವಾಹವಾಗಿದ್ದರು. ದಂಪತಿಗೆ ಹೆಣ್ಣು ಮಗುವಿದೆ. ಪತಿಯ ವಿರುದ್ಧ ದಾವೆ ಹೂಡಿದ್ದ ಪತ್ನಿಗೆ ಕೌಟುಂಬಿಕ ನ್ಯಾಯಾಲಯವು 10,000 ಜೀವನಾಂಶ ಹಾಗೂ ಹೆಣ್ಣು ಮಗುವಿಗೆ 5,000 ಜೀವನಾಂಶ ನೀಡಲು ಆದೇಶಿಸಿತ್ತು. ಆದರೆ ಪತಿ ಎಲ್ಲಿದ್ದಾನೆ ಎಂಬುದನ್ನು ಪತ್ತೆಯಾಗಿದ್ದರಿಂದ  ನ್ಯಾಯಾಲಯದ ಈ ಆದೇಶವನ್ನು ಜಾರಿಗೊಳಿಸಿರಿರಲಿಲ್ಲ. ಹೀಗಾಗಿ, ಪತ್ನಿಯು ಆರ್‌ಟಿಐ ಕಾಯಿದೆ ಅಡಿ ಯುಐಡಿಎಐ ಮೆಟ್ಟಿಲೇರಿದ್ದರು.

ಪತಿಯ ಆಧಾರ್‌ ಕಾರ್ಡ್‌ನಲ್ಲಿನ ಮಾಹಿತಿಯನ್ನು ಬಹಿರಂಗಪಡಿಸಲಾಗದು. ಇದನ್ನು ಆಧಾರ್‌ ಕಾಯಿದೆ ಸೆಕ್ಷನ್‌ 33ರ ಅಡಿ ಹೈಕೋರ್ಟ್‌ ನಿರ್ಧರಿಸಬೇಕಾಗುತ್ತದೆ ಎಂದು ಯುಐಡಿಎಐ 2021ರ ಫೆಬ್ರವರಿ 25ರಂದು ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಆಕೆ ಹೈಕೋರ್ಟ್ ಕದತಟ್ಟಿದ್ದು, ಪತಿಗೆ ನೋಟಿಸ್‌ ಜಾರಿ ಮಾಡಿದ್ದ ನ್ಯಾಯಾಲಯವು ಆಕೆಯ ಅರ್ಜಿಯನ್ನು ಪರಿಗಣಿಸುವಂತೆ ಯುಐಡಿಎಐಗೆ 2023ರ ಫೆಬ್ರವರಿ 8ರಂದು ಆದೇಶಿಸಿತ್ತು.

ಇದನ್ನೂ ಓದಿ: ಬೆಂಗಳೂರು: ಮೃತ ಸರ್ಕಾರಿ ನೌಕರನ 2ನೇ ಪತ್ನಿಗೆ ಕುಟುಂಬ ಪಿಂಚಣಿ‌ ಅಧಿಕಾರವಿಲ್ಲ; ಹೈಕೋರ್ಟ್

ಈ ಆದೇಶ ಪ್ರಶ್ನಿಸಿ ಯುಐಡಿಎಐ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಆಧಾರ್‌ ಕಾಯಿದೆ ಸೆಕ್ಷನ್‌ 33 (1) ಅನ್ನು ಪಾಲಿಸುವುದು ಕಡ್ಡಾಯವಾಗಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಆದೇಶ ಮಾಡಿದ ಬಳಿಕ ಮಾತ್ರ ಮಾಹಿತಿ ಬಹಿರಂಗಪಡಿಸಬಹುದು ಎಂದು ಹೇಳಿದೆ ಎಂದು ವಾದಿಸಿತ್ತು.

ಮಹಿಳೆಯ ಪರವಾಗಿ ವಾದಿಸಿದ್ದ ವಕೀಲರು, ಮದುವೆಯ ಬಳಿಕ ಪತಿ-ಪತ್ನಿಯ ಗುರುತು ಒಂದಕ್ಕೊಂದು ಮಿಳಿತವಾಗಿರುತ್ತದೆ. ದಂಪತಿಯಲ್ಲಿ ಒಬ್ಬರು ಮತ್ತೊಬ್ಬರ ಮಾಹಿತಿ ಕೋರುವುದಕ್ಕೆ ಯಾವುದೇ ಆಕ್ಷೇಪ ಇರುವುದಿಲ್ಲ. ಮೂರನೇ ವ್ಯಕ್ತಿ ಮಾಹಿತಿ ಕೋರಿದಾಗ ನಿರ್ಬಂಧ ವಿಧಿಸುವುದನ್ನು ಹಾಲಿ ಪ್ರಕರಣಕ್ಕೆ ಅನ್ವಯಿಸಲಾಗದು ಎಂದು ವಾದಿಸಿದ್ದರು.

ವಾದ-ಪ್ರತಿವಾದ ಆಲಿಸಿದ್ದ ವಿಭಾಗೀಯ ಪೀಠವು ಸುಪ್ರೀಂ ಕೋರ್ಟ್‌ ಕೆ ಎಸ್‌ ಪುಟ್ಟಸ್ವಾಮಿ ಅವರ ಪ್ರಕರಣದಲ್ಲಿ ವ್ಯಕ್ತಿಯ ಮಾಹಿತಿ ಕೋರಿದರೆ ಅಂಥ ಮಾಹಿತಿ ಬಹಿರಂಗದ ವಿರುದ್ಧ ದಾವೆ ಹೂಡಲು ಆಧಾರ್‌ ಕಾಯಿದೆ ಸೆಕ್ಷನ್‌ 33(1)ರ ಅಡಿ ಆ ವ್ಯಕ್ತಿ ಹಕ್ಕು ಹೊಂದಿದ್ದಾರೆ ಎಂದು ಹೇಳಿದೆ ಎಂದಿತ್ತು.

ಆಧಾರ್ ಸಂಖ್ಯೆ ಹೊಂದಿರುವವರ ಗೌಪ್ಯತೆಯ ಹಕ್ಕು, ವ್ಯಕ್ತಿಯ ಗೌಪ್ಯತೆಯ ಹಕ್ಕಿನ ಸ್ವಾಯತ್ತತೆಯನ್ನು ಸಂರಕ್ಷಿಸುತ್ತದೆ, ಇದಕ್ಕೆ ಯಾವುದೇ ವಿನಾಯಿತಿ ಇರುವುದಿಲ್ಲ. ಮದುವೆಯಾಗುವುದರಿಂದ ವ್ಯಕ್ತಿಗತವಾಗಿರುವ ಖಾಸಗಿ ಹಕ್ಕನ್ನು ಮೊಟಕುಗೊಳ್ಳುವುದಿಲ್ಲ. ಇದು ಕಾಯ್ದಿಯ ಸೆಕ್ಷನ್‌ 33ರ ಅಡಿ ಆ ವ್ಯಕ್ತಿಗೆ ನೀಡಿರುವ ರಕ್ಷಣೆಯಾಗಿದೆ. ಮದುವೆ ಸಂಬಂಧದಿಂದ ಆಧಾರ್‌ ಕಾಯಿದೆ ಸೆಕ್ಷನ್‌ 33ರ ಮೊಟಕಗುಗೊಳ್ಳುವುದಿಲ್ಲ ಎಂದು ವಿಭಾಗೀಯ ಪೀಠ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್