ಮತ್ತೆ ಆಪರೇಷನ್ ಕಮಲದ ಸುಳಿವು ನೀಡಿದ ಸಚಿವ ಡಾ. ಅಶ್ವತ್ಥ್ ನಾರಾಯಣ
ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯ, ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳುವ ಮೂಲಕ ಮತ್ತೆ ಆಪರೇಷನ್ ಕಮಲದ ಸುಳಿವನ್ನ ಸಚಿವ ಡಾ. ಅಶ್ವತ್ಥ್ ನಾರಾಯಣ ನೀಡಿದ್ದಾರೆ.
ಹುಬ್ಬಳ್ಳಿ: ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದು ಹೇಳುವ ಮೂಲಕ ಮತ್ತೆ ಆಪರೇಷನ್ ಕಮಲದ ಸುಳಿವನ್ನ ಸಚಿವ ಡಾ. ಅಶ್ವತ್ಥ್ ನಾರಾಯಣ ನೀಡಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಯಾರು ಬರ್ತಾರೆ ಎಂದು ಗೊತ್ತಾಗುತ್ತೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯ, ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ರಾಜ್ಯಸಭೆಯಲ್ಲಿ ಎ ಟೀಂ, ಬಿ ಟೀಂ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಹೆಚ್ಚಿದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Viral Video: ಹೆಚ್ಚು ಕಿರುಚಾಡಿದರೆ ಕೋಳಿಯಂತಾಗುವುದು ಕೇಳು ಮನುಜ, ಸಮಾಜಕ್ಕೊಂದು ಒಳ್ಳೆಯ ಪಾಠ
ನೂಪುರ್ ಶರ್ಮಾ ಹೇಳಿಕೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ:
ಉತ್ತರ ಪ್ರದೇಶದಲ್ಲಿ ಕಲ್ಲು ತೂರಾಟ, ಹಿಂಸಾಚಾರ ಪ್ರಕರಣಕ್ಕೆ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ಕೇವಲ ಒಂದು ಹೇಳಿಕೆಯನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ನೂಪುರ್ ಶರ್ಮಾ ಹೇಳಿಕೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಸಿಎಂ ಸಭೆ
ದೇಶದ ಹಲವೆಡೆ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಆಯಾ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರ ಸಭೆ ನಡೆಸಿ ಸೌಹಾರ್ದತೆ ಕಾಪಾಡುವಂತೆ ಸೂಚಿಸಿದ್ದೇನೆ. ಉತ್ತರ ಪ್ರದೇಶದಲ್ಲಿ ನಡೆದಂತಹ ಘಟನೆ ನಮ್ಮ ರಾಜ್ಯದಲ್ಲಿ ನಡೆದಿಲ್ಲ. ಶೂಟ್ ಅಟ್ ಸೈಟ್ ಕ್ರಮದ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ. ಬೆಂಗಳೂರಿನಲ್ಲಿ ಮತ್ತೆ ಆ್ಯಸಿಡ್ ದಾಳಿ ನಡೆದಿರುವುದು ದುರದೃಷ್ಟಕರ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ತೀರ್ಮಾನಿಸಲಾಗಿದೆ. ರಾಯಚೂರಲ್ಲಿ ಕಲುಷಿತ ನೀರು ಸೇವಿಸಿ ಸಾವು ಕೇಸ್ ಬಗ್ಗೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.