AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರ ಚಿಂತನೆ; ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಭೆ ಮಹತ್ವದ ಸಭೆ ನಡೆಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರ ಚಿಂತನೆ; ಸಚಿವ ಪ್ರಲ್ಹಾದ ಜೋಶಿ
ಸಚಿವ ಪ್ರಲ್ಹಾದ ಜೋಶಿ
Follow us
ಕಿರಣ್ ಹನುಮಂತ್​ ಮಾದಾರ್
| Updated By: ಆಯೇಷಾ ಬಾನು

Updated on:Nov 29, 2023 | 7:06 AM

ಹುಬ್ಬಳ್ಳಿ, ನ.28: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(Prahlad Joshi) ಯವರು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಭೆ ಮಹತ್ವದ ಸಭೆ ನಡೆಸಿದರು. ಹುಬ್ಬಳ್ಳಿ ವಿಮಾನ‌ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಿದ ಸಚಿವರು ‘ಈ ಯೋಜನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ‘ “ಸುಮಾರು 340 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಟರ್ಮಿನಲ್ ನಿರ್ಮಾಣವಾಗಲಿದ್ದು, ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವ ರೂಪುರೇಷೆ ಸಿದ್ಧಪಡಿಸಲಾಗಿದೆ. 2026 ರ ನಂತರದ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಈ ಯೋಜನೆ ರೂಪಿಸಲಾಗಿದ್ದು, ಒಟ್ಟು 15,950 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ ನಿರ್ಮಾಣವಾಗಲಿದೆ.

ಇದನ್ನೂ ಓದಿ:ಕರ್ನಾಟಕದ ರೈತರಿಗಾಗಿ ಕೇಂದ್ರದಿಂದ 484 ಕೋಟಿ ರೂ ವೆಚ್ಚದ 167 ನೀರಾವರಿ ಯೋಜನೆ: ಶೀಘ್ರವೇ ಅನುಮೋದನೆ ಕೋರಿ ಜಲ ಸಚಿವ ಶೇಖಾವತ್ ಗೆ ಪ್ರಲ್ಹಾದ ಜೋಶಿ ಮನವಿ

ಇದರಲ್ಲಿ 4 ಏರೋ ಬ್ರಿಡ್ಜ್ ಸಹಿತ ಏಕಕಾಲಕ್ಕೆ 2400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಸ್ಥಳೀಯ ಕಲೆ ಸಂಸ್ಕೃತಿಯನ್ನು ಬಿಂಬಿಸುವ ಶೈಲಿಯಲ್ಲಿ ವಿಮಾನ ನಿಲ್ದಾಣದ ಹೊರನೋಟವನ್ನು ನಿರ್ಮಿಸುವ ಕುರಿತು ತಜ್ಞ ಸಂಸ್ಥೆಗಳ ನೆರವು ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವರ ಈ ಪ್ರಸ್ತಾವನೆಯನ್ನು ಪರಿಗಣಿಸಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Tue, 28 November 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್