ಹುಬ್ಬಳ್ಳಿ, ನ.28: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(Prahlad Joshi) ಯವರು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಭೆ ಮಹತ್ವದ ಸಭೆ ನಡೆಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಿದ ಸಚಿವರು ‘ಈ ಯೋಜನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ‘ “ಸುಮಾರು 340 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಟರ್ಮಿನಲ್ ನಿರ್ಮಾಣವಾಗಲಿದ್ದು, ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸುವ ರೂಪುರೇಷೆ ಸಿದ್ಧಪಡಿಸಲಾಗಿದೆ. 2026 ರ ನಂತರದ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಈ ಯೋಜನೆ ರೂಪಿಸಲಾಗಿದ್ದು, ಒಟ್ಟು 15,950 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ ನಿರ್ಮಾಣವಾಗಲಿದೆ.
ಇದರಲ್ಲಿ 4 ಏರೋ ಬ್ರಿಡ್ಜ್ ಸಹಿತ ಏಕಕಾಲಕ್ಕೆ 2400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.
ಸ್ಥಳೀಯ ಕಲೆ ಸಂಸ್ಕೃತಿಯನ್ನು ಬಿಂಬಿಸುವ ಶೈಲಿಯಲ್ಲಿ ವಿಮಾನ ನಿಲ್ದಾಣದ ಹೊರನೋಟವನ್ನು ನಿರ್ಮಿಸುವ ಕುರಿತು ತಜ್ಞ ಸಂಸ್ಥೆಗಳ ನೆರವು ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ಇಂದು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಭೆ ನಡೆಸಿ, ಸಂಪೂರ್ಣ ಯೋಜನೆಯ ಮಾಹಿತಿ ಪಡೆದುಕೊಂಡೆನು.
ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣದ ಕುರಿತು ಇಂದು ಸಭೆಯಲ್ಲಿ ಚರ್ಚಿಸಿದ್ದು, 340 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಟರ್ಮಿನಲ್… pic.twitter.com/tGpLRINxlo
— Pralhad Joshi (@JoshiPralhad) November 28, 2023
ಇದೇ ವೇಳೆ ಕೇಂದ್ರ ಸಚಿವರ ಈ ಪ್ರಸ್ತಾವನೆಯನ್ನು ಪರಿಗಣಿಸಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿಗೆ ಅನುಮೋದನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:40 pm, Tue, 28 November 23