AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ಜೋರು; ರಾಜ್ಯ ಸರ್ಕಾರಕ್ಕೆ ಬೆಲ್ಲದ ಎಚ್ಚರಿಕೆ

ಪ್ರತಿಭಟನಾಕಾರರು ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಆಯುಕ್ತರ ಕಚೇರಿಗೆ ನುಗ್ಗಿದ್ದಾರೆ. ಪಾಲಿಕೆ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿರುವ ಬಿಜೆಪಿ ಕಾರ್ಯಕರ್ತರು, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಮತಿ ನೀಡುವವರೆಗೆ ಸ್ಥಳದಿಂದ ತೆರಳಲ್ಲವೆಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ ಜೋರು; ರಾಜ್ಯ ಸರ್ಕಾರಕ್ಕೆ ಬೆಲ್ಲದ ಎಚ್ಚರಿಕೆ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಶಿವಕುಮಾರ್ ಪತ್ತಾರ್
| Edited By: |

Updated on: Sep 14, 2023 | 10:21 PM

Share

ಹುಬ್ಬಳ್ಳಿ, ಸೆಪ್ಟೆಂಬರ್​ 14: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ (Idgah Maidan) ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನಿರಾಕರಣೆ ವಿಚಾರವಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ (Arvind Bellad) ನೇತೃತ್ವದ ಪ್ರತಿಭಟನೆ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೇ ವೇಳೆ, ಮಾತನಾಡಿದ ಅರವಿಂದ ಬೆಲ್ಲದ, ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕೊಟ್ಟರೂ ಮಾಡುತ್ತೇವೆ. ಅನುಮತಿ ಕೊಡದೇ ಇದ್ದರೂ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ. ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದು ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ದಕ್ಕೆಯನ್ನುಂಟು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇಂತಹ ಜನವಿರೋಧಿ ನೀತಿಯನ್ನು ಸರ್ಕಾರ ಕೈ ಬಿಡಬೇಕು. ಸರ್ಕಾರದ ಕೈಗೊಂಬೆಯಾಗಿ ಕಮಿಷನರ್ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಆಯುಕ್ತರಿಗೆ ಅನುಮತಿ ಕೊಡಲು ಯಾವುದೇ ತೊಡಕಿಲ್ಲ. ಕಾನೂನಾತ್ಮಕ ತೊಡಕಿಲ್ಲ ಎಂದು ಬೆಲ್ಲದ ಹೇಳಿದ್ದಾರೆ.

ಈ ಮಧ್ಯೆ ಪ್ರತಿಭಟನಾಕಾರರು ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಆಯುಕ್ತರ ಕಚೇರಿಗೆ ನುಗ್ಗಿದ್ದಾರೆ. ಪಾಲಿಕೆ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿರುವ ಬಿಜೆಪಿ ಕಾರ್ಯಕರ್ತರು, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನುಮತಿ ನೀಡುವವರೆಗೆ ಸ್ಥಳದಿಂದ ತೆರಳಲ್ಲವೆಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ಅನುಮತಿ ನೀಡಬೇಕು; ಪ್ರಲ್ಹಾದ್ ಜೋಶಿ ಆಗ್ರಹ

ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಸಂಜೆ ಸರ್ಕಾರವನ್ನು ಆಗ್ರಹಿಸಿದ್ದರು. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ನಡೆಸಲು ಸರಕಾರ ಈ ಕೂಡಲೇ ಜಿಲ್ಲಾಡಳಿತಕ್ಕೆ ಸೂಚಿಸಿ ಅನುಮತಿ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?