AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ ಸರ್ಕಾರದಲ್ಲಿ ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ, ಹಿಂದೂ ವಿರೋಧಿ ಸಿಎಂ ಆಗಿದ್ದಾರೆ ಎಂಬ ಭಾವನೆ ಕಾರ್ಯಕರ್ತರಲ್ಲಿದೆ: ಶಾಸಕ ಯತ್ನಾಳ್

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ವಿಜಯೇಂದ್ರ ಸರ್ಕಾರದಲ್ಲಿ  ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ, ಹಿಂದೂ ವಿರೋಧಿ ಸಿಎಂ ಆಗಿದ್ದಾರೆ ಎಂಬ ಭಾವನೆ ಕಾರ್ಯಕರ್ತರಲ್ಲಿದೆ: ಶಾಸಕ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Updated By: guruganesh bhat|

Updated on:Aug 12, 2021 | 5:50 PM

Share

ಹುಬ್ಬಳ್ಳಿ: ಬಿ.ವೈ.ವಿಜಯೇಂದ್ರ ಸರ್ಕಾರದಲ್ಲಿ ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾವೇರಿಯಲ್ಲಿನ ಕೆಲವು ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇದೆ. ಇನ್ನೊಂದು ವಾರ ಕಾಯಿರಿ ಎಲ್ಲವನ್ನೂ ಹೇಳುವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹಠ ಬಿಟ್ಟುಕೊಡುವುದಿಲ್ಲ ಎಂಬ ಸುಳಿವು ನೀಡಿದರು. ಈಗ ಹಿಂದು ವಿರೋಧಿ ಸಿಎಂ‌ ಆಗಿದ್ದಾರೆ ಎಂಬ ನೋವು ಕಾರ್ಯಕರ್ತರಲ್ಲಿದೆ. ಯಾರು ಹಿಂದೆ ಹೊಡಿಸಿದದ್ದರು, ಯಾರು ಹೊಡೆತ ತಿಂದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಪಕ್ಷಕ್ಕೆ ಹಾನಿ ಆಗಬಾರದು ಎಂದು ಹೈಕಮಾಂಡ್ ಈ ನಿರ್ಣಯ ಕೈಗೊಂಡಿದೆ. ಹಿಂದೆ ಎಷ್ಟೋ ಜನ ಕಮ್ಯುನಿಷ್ಟ್ ಪಕ್ಷದಲ್ಲಿ ಇದ್ದವರು ಬಿಜೆಪಿಗೆ ಬಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ನಮ್ಮ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಿತ್ತು. ಈಗ ನಾಯಕತ್ವ ಬದಲಾವಣೆ ಆಗಿದೆ. ಒಬ್ಬ ನಾಯಕ ತನ್ನ ಛಾಪು ಇಟ್ಟುಕೊಳ್ಳಬೇಕು. ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಅವರ ನೆರಳು ಆಗಲ್ಲ. ಅವರಿಗೆ ಸ್ವಲ್ಪ ಸಮಯ ಕೊಡಿ ಎಂದು ಶಾಸನ ಬಸನಗೌಢ ಪಾಟಿಲ್ ಯತ್ನಾಳ್, ಹಿಂದೆ ಮೂರು ಜನ ಡಿಸಿಎಂ ಆಗಿದ್ರು ಅವರು ನಮ್ಮ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ ಅಂತಿದ್ರು. ಈಗ ಡಿಸಿಎಂ ಸ್ಥಾನವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:  

ಇದು ಶಿವಾಜಿ ಮಹಾರಾಜ ಶಿಕ್ಷಣ ಪಡೆದ ಪವಿತ್ರ ಭೂಮಿ; ಜಿಲ್ಲೆಗೆ ಸಚಿವ ಸ್ಥಾನ ಸಿಗದಿದ್ದರೆ ಮತ್ತೊಮ್ಮೆ ಕ್ರಾಂತಿ: ಬಸನಗೌಡ ಪಾಟೀಲ ಯತ್ನಾಳ್

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾವೆಲ್ಲರೂ ಶೇ 100ರಷ್ಟು ಒಪ್ಪಿದ್ದೇವೆ: ಶಾಸಕ ಯತ್ನಾಳ್

(MLA Basanagouda Patil Yatnal says BY Vijayendra is still interfering with the government)

Published On - 5:41 pm, Thu, 12 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ