ಹುಬ್ಬಳ್ಳಿ: ಬಿ.ವೈ.ವಿಜಯೇಂದ್ರ ಸರ್ಕಾರದಲ್ಲಿ ಇನ್ನೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕಾವೇರಿಯಲ್ಲಿನ ಕೆಲವು ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇದೆ. ಇನ್ನೊಂದು ವಾರ ಕಾಯಿರಿ ಎಲ್ಲವನ್ನೂ ಹೇಳುವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹಠ ಬಿಟ್ಟುಕೊಡುವುದಿಲ್ಲ ಎಂಬ ಸುಳಿವು ನೀಡಿದರು. ಈಗ ಹಿಂದು ವಿರೋಧಿ ಸಿಎಂ ಆಗಿದ್ದಾರೆ ಎಂಬ ನೋವು ಕಾರ್ಯಕರ್ತರಲ್ಲಿದೆ. ಯಾರು ಹಿಂದೆ ಹೊಡಿಸಿದದ್ದರು, ಯಾರು ಹೊಡೆತ ತಿಂದಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಪಕ್ಷಕ್ಕೆ ಹಾನಿ ಆಗಬಾರದು ಎಂದು ಹೈಕಮಾಂಡ್ ಈ ನಿರ್ಣಯ ಕೈಗೊಂಡಿದೆ. ಹಿಂದೆ ಎಷ್ಟೋ ಜನ ಕಮ್ಯುನಿಷ್ಟ್ ಪಕ್ಷದಲ್ಲಿ ಇದ್ದವರು ಬಿಜೆಪಿಗೆ ಬಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ನಮ್ಮ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಿತ್ತು. ಈಗ ನಾಯಕತ್ವ ಬದಲಾವಣೆ ಆಗಿದೆ. ಒಬ್ಬ ನಾಯಕ ತನ್ನ ಛಾಪು ಇಟ್ಟುಕೊಳ್ಳಬೇಕು. ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಯಡಿಯೂರಪ್ಪ ಅವರ ನೆರಳು ಆಗಲ್ಲ. ಅವರಿಗೆ ಸ್ವಲ್ಪ ಸಮಯ ಕೊಡಿ ಎಂದು ಶಾಸನ ಬಸನಗೌಢ ಪಾಟಿಲ್ ಯತ್ನಾಳ್, ಹಿಂದೆ ಮೂರು ಜನ ಡಿಸಿಎಂ ಆಗಿದ್ರು ಅವರು ನಮ್ಮ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ ಅಂತಿದ್ರು. ಈಗ ಡಿಸಿಎಂ ಸ್ಥಾನವೇ ಇಲ್ಲ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾವೆಲ್ಲರೂ ಶೇ 100ರಷ್ಟು ಒಪ್ಪಿದ್ದೇವೆ: ಶಾಸಕ ಯತ್ನಾಳ್
(MLA Basanagouda Patil Yatnal says BY Vijayendra is still interfering with the government)
Published On - 5:41 pm, Thu, 12 August 21