AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಬರೆದ ಪತ್ರದ ಹಿಂದಿನ ಕಾರಣವನ್ನು ರಿವೀಲ್​ ಮಾಡಿದ ಶಾಸಕ ಬಸವರಾಜ ರಾಯರೆಡ್ಡಿ

ಕಳೆದವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಬಸವರಾಜ ರಾಯರೆಡ್ಡಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಪತ್ರ ಬರೆದಿದ್ದರು. ಈ ಮೂಲಕ ಒಂದೇ‌ ತಿಂಗಳಿನಲ್ಲಿ ಸಿಎಂಗೆ ಬರೆದ ಎರಡನೇ ಪತ್ರ ಇದಾಗಿದೆ. ಈ ಮೂಲಕ ಶಾಸಕ ಬಸವರಾಜ ರಾಯರೆಡ್ಡಿ ತಮ್ಮದೇ ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನಗೊಂಡರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಕುರಿತು ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂಗೆ ಬರೆದ ಪತ್ರದ ಹಿಂದಿನ ಕಾರಣವನ್ನು ರಿವೀಲ್​ ಮಾಡಿದ ಶಾಸಕ ಬಸವರಾಜ ರಾಯರೆಡ್ಡಿ
ಶಾಸಕ ಬಸವರಾಜ ರಾಯರೆಡ್ಡಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ವಿವೇಕ ಬಿರಾದಾರ|

Updated on:Sep 04, 2023 | 12:01 PM

Share

ಧಾರವಾಡ ಸೆ.02: ಸಚಿವರ ಕಾರ್ಯವೈಖರಿಗೆ ಬೇಸತ್ತು ಕಾಂಗ್ರೆಸ್ (Congress)​​ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ನೇತೃತ್ವದಲ್ಲಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿತ್ತು. ಇದಾದ ಬಳಿಕ ಕಳೆದವಾರ ಮತ್ತೆ ಎರಡನೇ ಬಾರಿಗೆ ಜೆಸ್ಕಾಂ (GESCOM) ಅಧಿಕಾರಿಗಳ ಕಾರ್ಯವೈಕರಿ ವಿರುದ್ಧ ಬಸವರಾಜ ರಾಯರೆಡ್ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗವಾಗಿ ಪತ್ರ ಬರೆದಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಮೂಲಕ ಶಾಸಕ ಬಸವರಾಜ ರಾಯರೆಡ್ಡಿ ತಮ್ಮದೇ ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನಗೊಂಡರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಅಸಮಾಧಾನವನ್ನು ಶಮನಗೊಳಿಸಲು ಸಚಿವರಾದ ಶರಣ ಪ್ರಕಾಶ್ ಪಾಟೀಲ್​ (Sharan Prakash Patil)​​, ಡಾ.ಎಂ.ಸಿ.ಸುಧಾಕರ್ (MC Sudhakar) ಇಂದು (ಸೆ.04) ಧಾರವಾಡದ ಗೋವಾ ರಸ್ತೆಯಲ್ಲಿರುವ ರಾಯರೆಡ್ಡಿ ಫಾರ್ಮ್​ಹೌಸ್​​ನಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಕಳೆದವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಬಸವರಾಜ ರಾಯರೆಡ್ಡಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಪತ್ರ ಬರೆದಿದ್ದರು. ಈ ಮೂಲಕ ಒಂದೇ‌ ತಿಂಗಳಿನಲ್ಲಿ ಸಿಎಂಗೆ ಬರೆದ ಎರಡನೇ ಪತ್ರ ಇದಾಗಿದೆ. ಈ ಬಗ್ಗೆ ಶಾಸಕ ರಾಯರೆಡ್ಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಟಾರ್ನ್​ಫಾರ್ಮರ್​​​ಗಳು ಸುಟ್ಟುಹೋಗಿ ವಿದ್ಯುತ್​​​ ಸಮಸ್ಯೆ ಆಗಿದೆ. ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಲಬುರಗಿ ಜೆಸ್ಕಾಂ ವ್ಯಾಪ್ತಿಯಲ್ಲೇ ನಮ್ಮ ಜಿಲ್ಲೆ ಕೂಡ ಬರುತ್ತೆ. ಆದರೆ ಯಾವುದೇ ಅಧಿಕಾರಿಗಳು ನಮ್ಮ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಲಿಲ್ಲ. ಹೀಗಾಗಿ ಸಿಎಂಗೆ ಸಭೆ ಕರೆಯುವಂತೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಜನರಿಗೆ ಗೊತ್ತಾಗಲಿ ಅಂತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಸೆ.5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ಆದರೆ ಇದನ್ನು ನಕರಾತ್ಮಕವಾಗಿ ತೆಗೆದುಕೊಂಡರೆ ಹೇಗೆ ? ನನಗೆ ಕಾಂಗ್ರೆಸ್​ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ. ಆದರೆ ಬಿಜೆಪಿಯ ಸಿದ್ಧಾಂತಗಳು ನನಗೆ ಸರಿ ಹೊಂದುವುದಿಲ್ಲ. ಬಿಜೆಪಿಯವರು ನನ್ನನ್ನು ಕರೆದಿದ್ದಾರೆ ಅಂತಲ್ಲ. ಅವರು ಎಲ್ಲರನ್ನೂ ಕರೆಯುತ್ತಲೇ ಇರುತ್ತಾರೆ. ಆದರೆ ನಾನು ಸಿದ್ಧಾಂತ ಇಟ್ಟುಕೊಂಡು ರಾಜಕೀಯ ಮಾಡುವವನು ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ ಪ್ರಚಾರ ಸಮಿತಿ ಸಭೆಯಲ್ಲಿ ನಿಗಮ ಮಂಡಳಿ ನೇಮಕದ ಕೂಗು; ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ಆಗ್ರಹ 

ಸಿದ್ದರಾಮಯ್ಯ ಒಳ್ಳೆ ಮುಖ್ಯಮಂತ್ರಿ. ವೈಯಕ್ತಿಕವಾಗಿ ಸಿಎಂ ನನಗೆ ಬೇಕಾದವರು. ಸಿದ್ದರಾಮಯ್ಯ ಒಳ್ಳೆ ಜನನಾಯಕ. ಸಿದ್ದರಾಮಯ್ಯರಂಥ ರಾಜಕಾರಣಿಗಳು ಸಿಗುವುದಿಲ್ಲ. ನಾವೆಲ್ಲ ಒಟ್ಟಿಗೆ ರಾಜಕೀಯಕ್ಕೆ ಬಂದವರು. ನಾನು, ಸಿದ್ದರಾಮಯ್ಯ, ದೇಶಪಾಂಡೆ, ಖರ್ಗೆ ಎಲ್ಲರೂ ಒಂದೇ ಕಾಲಕ್ಕೆ ಬಂದವರು ಎಂದರು.

ಇನ್ನು ಶರಣ ಪ್ರಕಾಶ್ ಪಾಟೀಲ್​​​, ಡಾ.ಎಂ.ಸಿ.ಸುಧಾಕರ್ ಭೇಟಿ ವಿಚಾರವಾಗಿ ಮಾತನಾಡಿದ ಅವರು ಇಬ್ಬರೂ ಸಚಿವರನ್ನೂ ನಾನೇ ಕರೆದಿದ್ದೆ. ಕೊಪ್ಪಳದ ಕೆಲ ವಿಷಯವಾಗಿ ಕರೆದಿದ್ದೆ. ನನ್ನ ಕ್ಷೇತ್ರಕ್ಕೆ ಇವತ್ತು ಅವರನ್ನು ಕರೆದುಕೊಂಡು ಹೋಗುತ್ತಿದ್ದೇನೆ. ಹೀಗಾಗಿ ಇಲ್ಲಿಗೆ ಬಂದಿದ್ದಾರೆ. ಇಲ್ಲಿಂದ ಮೂವರೂ ಕೊಪ್ಪಳಕ್ಕೆ ಹೋಗುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕೀಯ ಮಾಡುವಾಗ ನಾವು ರಾಜಕೀಯ ಮಾಡುತ್ತೇವೆ. ಅಭಿವೃದ್ಧಿ ದೃಷ್ಟಿಕೋನದಿಂದ ಕೆಲಸ ಮಾಡುವ ವಿಚಾರವಾಗಿ ಸೇರಿದ್ದೇವೆ. ಕಾಂಗ್ರೆಸ್‌ನಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಏನೂ ಸರಿ ಇಲ್ಲ ಎಂದು ಹೇಳಿಕೊಂಡರೆ ಅಸಮಾಧಾನ ಆಗುವುದಿಲ್ಲ. ಪ್ರತಿ ಮನೆಯಲ್ಲಿಯೂ ಇಂಥ ವಿಚಾರಗಳು ಇರುತ್ತವೆ. ಇದು ಭಿನ್ನಾಭಿಪ್ರಾಯ ಅಂತ ಇಲ್ಲ ಯಾರಾರಿಗೋ ಲಕ್ ಇರುತ್ತದೆ.

ಇದಕ್ಕೆ ಸೂಕ್ತ ಉದಾಹರಣೆ ಬಿಜೆಪಿ ಭೀಷ್ಮ ಎಲ್​​ ಕೆ ಅಡ್ವಾಣಿ ಅವರು ಪ್ರಧಾನಿ ಆಗಬೇಕಿತ್ತು. ಅದು ಕೈತಪ್ಪಿತು. ಇನ್ನು ಕಾಂಗ್ರೆಸ್​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆಗಬೇಕಿತ್ತು. ಅದು ಸಹ ಕೈತಪ್ಪಿತು. ಕೆಲವೊಮ್ಮೆ ಹಾಗೆಯೇ ಆಗುತ್ತವೆ. ಹಿರಿಯ-ಕಿರಿಯ ಅಂತ ಇರೋದಿಲ್ಲ. ಲಕ್ ಇದ್ದಾಗ ಯಾರು ಬೇಕಾದರೂ ಏನಾದರೂ ಆಗಬಹುದು. ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಇಲ್ಲ. ಆದರೆ ನಮ್ಮನ್ನು ಉಪಯೋಗಿಸಿಕೊಳ್ಳುತ್ತಿಲ್ಲ ಅನ್ನುವ ಬೇಸರ ಇದೆ ಅಷ್ಟೆ. ನಾನು ಸದಾ ಕಾಲ ಕೆಲಸ ಮಾಡುವವನು. ಸುಮ್ಮನೆ ಕುಳಿತುಕೊಳ್ಳುವವನಲ್ಲ ಎಂದು ಹೇಳಿದ್ದಾರೆ.

ಗದಗ-ವಾಡಿ ರೈಲ್ವೆ ಸಭೆ ಕರೆದಿದ್ದೇನೆ. ಅದರ ಬಗ್ಗೆ ಸಿಎಂಗೂ ಪತ್ರ ಬರೆದಿದ್ದೇನೆ. ಇದಕ್ಕಾಗಿ ಎರಡ್ಮೂರು ಸಲ ಎಂ‌.ಬಿ. ಪಾಟೀಲರಿಗೆ ನೆನಪು ಮಾಡಿದ್ದೇನೆ. ಆದರೂ ಪ್ರತಿಕ್ರಿಯೆ ಬಂದಿಲ್ಲ. ಏಕೆಂದರೆ ಅವರು ಕೂಡ ಈಗ ಬ್ಯೂಜಿ ಮ್ಯಾನ್. ಅದರ ಬಗ್ಗೆ ಹೇಳಿಕೊಳ್ಳಬಹುದಿತ್ತು. ಆದರೆ ಹೇಳಿಕೊಂಡರೆ ಬೇರೆ ಥರ ಅರ್ಥ ಮಾಡಿಕೊಳ್ಳುತ್ತಾರೆ ಅಂತ ಸುಮ್ಮನಾದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತ ಪತ್ರ ಬರೆದಿದ್ದಾರೆ

ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸರಿಯಾದ ಪ್ರತಿಕ್ರಿಯೆ ಬರುತ್ತಿಲ್ಲ. ಇವೆಲ್ಲ ವಿಚಾರ ಇಟ್ಟುಕೊಂಡು ಸಿಎಂಗೆ ರಾಯರೆಡ್ಡಿ ಪತ್ರ ಬರೆದಿದ್ದಾರೆ. ಹೀಗಾಗಿ ಇದಕ್ಕೆ ಅನಾವಶ್ಯಕವಾಗಿ ಬೇರೆ ಅರ್ಥವನ್ನು ಕಲ್ಪಿಸುತ್ತಿದ್ದಾರೆ. ಯಲಬುರ್ಗಾ ಕ್ಷೇತ್ರದಲ್ಲಿ ವಿದ್ಯುತ್ ಟ್ರಾನ್ಸ್​ಫಾರ್ಮ್​​ಗಳ ಸಮಸ್ಯೆ ಇದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತ ಅವರೇ ಹೇಳಿದ್ದಾರೆ ಎಂದು ತಿಳಿಸಿದರು.

ಇನ್ನು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅನುದಾನ ನೀಡದ ವಿಚಾರವಾಗಿ ಮಾತನಾಡಿದ ಅವರು ಕರ್ನಾಟಕ ವಿಶ್ವವಿದ್ಯಾಲಯ ರಾಜ್ಯದಲ್ಲಿ ಹೆಸರುವಾಸಿಯಾಗಿರುವ ವಿಶ್ವವಿದ್ಯಾಲಯ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Mon, 4 September 23

ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ