AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಜಿಲ್ಲೆಯ 16 ಮುಖಂಡರನ್ನು ಉಚ್ಛಾಟಿಸಿದ ಬಿಜೆಪಿ

ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಫರ್ಧಿಸಿದ್ದಕ್ಕೆ ಉಚ್ಚಾಟನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಧಾರವಾಡ ಜಿಲ್ಲೆಯ 16 ಮುಖಂಡರನ್ನು ಉಚ್ಛಾಟಿಸಿದ ಬಿಜೆಪಿ
ಬಿಜೆಪಿ
TV9 Web
| Updated By: guruganesh bhat|

Updated on: Aug 30, 2021 | 6:49 PM

Share

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ಧಾರವಾಡ ಜಿಲ್ಲೆಯ ತನ್ನ 16 ಮುಖಂಡರನ್ನು ಬಿಜೆಪಿ ಉಚ್ಚಾಟಿಸಿದೆ. ಈ ಮುಖಂಡರನ್ನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಅರವಿಂದ ಬೆಲ್ಲದ್ ಆದೇಶಿಸಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಫರ್ಧಿಸಿದ್ದಕ್ಕೆ ಉಚ್ಚಾಟನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ.

ಈ ಮಧ್ಯೆ, ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದ ಅಭ್ಯರ್ಥಿಗಳನ್ನು ಸಹ ಉಚ್ಚಾಟನೆ ಮಾಡಲಾಗಿದೆ. 34 ಅಭ್ಯರ್ಥಿಗಳನ್ನು ಉಚ್ಚಾಟನೆ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಆದೇಶ ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣರಿಂದ ಆದೇಶ ಹೊರಡಿಸಲಾಗಿದೆ. ವಿವಿಧ ವಾರ್ಡುಗಳ 34 ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ನೀತಿ ವಿರುದ್ಧ ಬಂಡಾಯವೆದ್ದ ಅಭ್ಯರ್ಥಿಗಳ ಉಚ್ಚಾಟನೆ ಮಾಡಲಾಗಿದೆ. ಕೈ ನಾಯಕರ ಮನವೊಲಿಕೆಗೂ ಮಣಿಯದೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ.

ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣ ಮಾಡ್ತೇವೆ ಕಳೆದ ಬಾರಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಇನ್ನೊಮ್ಮೆ ಅಧಿಕಾರ ಕೊಟ್ಟರೆ ಕಾಮಗಾರಿಗಳು ಪೂರ್ಣ ಆಗಲಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣ ಮಾಡ್ತೇವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ಬಿಆರ್‌ಟಿಎಸ್ ಯೋಜನೆ ಕೈಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಯೋಜನೆ ಬಿಟ್ಟಿದ್ದಕ್ಕೆ ಫೇಲ್ಯೂರ್ ಅಂತಲ್ಲ. ಕೆಲವೊಂದು ಲೋಪದೋಷಗಳಾಗಿದೆ ಅಷ್ಟೇ. ಲೋಪ ದೋಷಗಳ ಬಗ್ಗೆ ಅರವಿಂದ ಬೆಲ್ಲದ್ ಹೇಳಿದ್ದರು. ಅದನ್ನು ಸರಿಪಡಿಸುವುದಾಗಿ ಶಾಸಕ ಬೆಲ್ಲದ್‌ಗೆ ಹೇಳಿದ್ದೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.

ಸೆಪ್ಟೆಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಪ್ರಣಾಳಿಕೆ ಬಿಡುಗಡೆ ಮಾಡಿವೆ. ಆಗಸ್ಟ್ 29ರಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಜಗದೀಶ್ ಶೆಟ್ಟರ್, ಸಚಿವ ಶ್ರೀರಾಮುಲು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ನಾವು ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದೇವೆ. ವಿಮಾನ ನಿಲ್ದಾಣ, ರೈಲು ನಿಲ್ದಾಣ ಮೇಲ್ದರ್ಜೆಗೇರಿಸಿದ್ದೇವೆ. ಈಗಾಗಲೇ ಗ್ಯಾಸ್ ಪೈಪ್‌ಲೈನ್ ಯೋಜನೆ ಪ್ರಗತಿಯಲ್ಲಿದೆ. ಕೊರೊನಾ ವೇಳೆ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. 70 ವರ್ಷ ಆಡಳಿತ ನಡೆಸಿದವರು ನಿನ್ನೆ ಮಾತನಾಡಿದ್ದಾರೆ. ಇವರು ಕುಡಿಯುವ ನೀರಿನ ಯೋಜನೆ ತಡೆ ಹಿಡಿದಿದ್ದರು. ಮತ್ತೆ ಅದನ್ನ ನಾವು ಪುನಾರಂಭ ಮಾಡಿದ್ದೇವೆ. ಹುಬ್ಬಳ್ಳಿಗೆ ಐಐಟಿ ಬೇಡ ಎಂದು ಸಿದ್ದರಾಮಯ್ಯರಿಂದ ಪತ್ರ ಬರೆದಿದ್ದರು. ಸಿದ್ದರಾಮಯ್ಯ ಪತ್ರ ಬರೆದಿದ್ದು ಕೈ ನಾಯಕರಿಗೆ ನೆನಪಿಲ್ವಾ? ಎಂದು ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನೆ ಕೇಳಿದ್ದಾರೆ.

ಸೆಪ್ಟಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ  ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್​​ರಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: 

ಹಳ್ಳಿಗಳನ್ನು ನಿರ್ಲಕ್ಷಿಸಿದ್ದು ದೊಡ್ಡ ತಪ್ಪಾಯ್ತು: ತಾಲಿಬಾನ್​ಗೆ ಶಕ್ತಿ ತುಂಬಿದ್ದು ಅಫ್ಘಾನ್ ಸರ್ಕಾರದ ತಪ್ಪು ಕೃಷಿ ನೀತಿಗಳು

ಹುಬ್ಬಳ್ಳಿ ಧಾರವಾಡ ಮೆಟ್ರೋ ರೈಲು ಮಾರ್ಗ ನಿರ್ಮಾಣ; ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

(MLA Dharwad BJP President ouster 16 BJP leaders in Dharwad district)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ