ಶಾಸಕಿಯ ಮೈದುನನಿಂದ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ; ಆಡಿಯೋ ವೈರಲ್‌

ಗ್ರಾಮ ಪಂಚಾಯತಿ ಸದಸ್ಯ ರವಿ ಕುಂಬಾರ ಎಂಬುವವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿರುವ  ಷಣ್ಮುಖ ಶಿವಳ್ಳಿ, ಅಧಿಕಾರದ ದರ್ಪ ತೋರಿಸಿದ್ದಾರೆ. ಶಾಸಕಿಯ ಮೈದುನ ಎಂದಾಕ್ಷಣ ಷಣ್ಮುಖ ಶಿವಳ್ಳಿ ಹೀಗೆ ವರ್ತನೆ ಮಾಡುವುದು ಎಷ್ಟು ಸರಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕಿಯ ಮೈದುನನಿಂದ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ; ಆಡಿಯೋ ವೈರಲ್‌
ಷಣ್ಮಖ ಶಿವಳ್ಳಿ
Updated By: preethi shettigar

Updated on: Jan 01, 2022 | 1:06 PM

ಧಾರವಾಡ: ಶಾಸಕಿಯ ಮೈದುನ ಗ್ರಾಮ ಪಂಚಾಯತಿಯ (gram panchayat) ಸದಸ್ಯನಿಗೆ ಧಮ್ಕಿ ಹಾಕಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿಯವರ ಮೈದುನ ಷಣ್ಮುಖ ಶಿವಳ್ಳಿ ಯರಗುಪ್ಪಿ ಗ್ರಾಮ ಪಂಚಾಯತಿ ಸದಸ್ಯನಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಷಣ್ಮುಖ ಶಿವಳ್ಳಿ ಏಕ ಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸದ್ಯ ಗ್ರಾಮ ಪಂಚಾಯತಿ ಸದಸ್ಯರೋರ್ವರಿಗೆ ಮನಬಂದಂತೆ ಮಾತನಾಡಿರುವ ಆಡಿಯೋ ವೈರಲ್‌ (Audio Viral) ಆಗಿದೆ.

ಗ್ರಾಮ ಪಂಚಾಯತಿ ಸದಸ್ಯ ರವಿ ಕುಂಬಾರ ಎಂಬುವವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿರುವ  ಷಣ್ಮುಖ ಶಿವಳ್ಳಿ, ಪಂಚಾಯತಿಗೆ ಕೊಡುತ್ತೇವೆ ಎಂದು ಹೇಳುವ ಮೂಲಕ ಅಧಿಕಾರದ ದರ್ಪ ತೋರಿಸಿದ್ದಾರೆ. ಶಾಸಕಿಯ ಮೈದುನ ಎಂದಾಕ್ಷಣ ಷಣ್ಮುಖ ಶಿವಳ್ಳಿ ಹೀಗೆ ವರ್ತನೆ ಮಾಡುವುದು ಎಷ್ಟು ಸರಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳು ಅರೆಸ್ಟ್
ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಈ ಬಾರಿ ನ್ಯೂ ಇಯರ್ ಪಾರ್ಟಿಗೆ ನಿರ್ಬಂಧ ಹೇರಿದೆ. ಕೊರೊನಾ ವಿರುದ್ಧ ಹೋರಾಡಲು ಈ ನಿರ್ಬಂಧ ಅನಿವಾರ್ಯ. ಹೀಗಿದ್ದೂ ಕೆಲವರು ಮಾತ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ರೆಸಾರ್ಟ್​ನಲ್ಲಿ ಮಸ್ತ್ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಪಾರ್ಟಿ ಬಗ್ಗೆ ಪ್ರಶ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್​ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ನಡೆದಿದೆ.

ವೈಟ್ ನಿರ್ವಾಣ ಜಡೇ ರೆಸಾರ್ಟ್ ಮಾಲೀಕ ಮತ್ತು ಸಹಚರರು ಚಿಕ್ಕಬಳ್ಳಾಪುರ ಇನ್ಸ್​ಪೆಕ್ಟರ್​ ಪ್ರಶಾಂತ್ ಎಂಬುವವರನ್ನ ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಗಲಗುರ್ಕಿ ಬಳಿಯ ರೆಸಾರ್ಟ್​ನಲ್ಲಿ ರಾಜಾರೋಷವಾಗಿ ಡಿಜೆ ಹಾಕಿಕೊಂಡು ಪಾರ್ಟಿ ಮಾಡಿದ್ದಾರೆ. ಜೊತೆಗೆ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ:
ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು

ಸರ್ಕಾರದ ಆದೇಶ ಉಲ್ಲಂಘಿಸಿ ಚಿಕ್ಕಾಬಳ್ಳಾಪುರ ರೆಸಾರ್ಟ್​ಲ್​ನಲ್ಲಿ ಮಸ್ತ್ ಪಾರ್ಟಿ; ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳು ಅರೆಸ್ಟ್

Published On - 1:02 pm, Sat, 1 January 22