ಐಸಿಸ್ ಜತೆ ನಂಟು ಇರುವ ವ್ಯಕ್ತಿ ಮುಸ್ಲಿಂ ಸಮಾವೇಶದಲ್ಲಿ ಭಾಗಿ ಆರೋಪ: ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ​ ಖಾದ್ರಿ ಸವಾಲ್

Hubballi Muslim convention: ಐಸಿಎಸ್ ಉಗ್ರ ಸಂಘಟನೆ ಜೊತೆ ನಂಟು ಹೊಂದಿರುವ ವ್ಯಕ್ತಿಯೋರ್ವ ಡಿಸೆಂಬರ್ 4ರಂದು ಹುಬ್ಬಳ್ಳಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಭಾಗಿಯಾಗಿದ್ದ ಎನ್ನುವ ಆರೋಪವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಆರೋಪಿಸಿದ್ದಾರೆ. ಇದೀಗ ಇದಕ್ಕೆ ಕಾರ್ಯಕ್ರಮದ ಆಯೋಜಕ, ಧರ್ಮಗುರು ಸೈಯದ್‌ ತಾಜುದ್ದೀನ್ ಎನ್ನುವ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಅವರ ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ ಸವಾಲು ಹಾಕಿದ್ದಾರೆ.

ಐಸಿಸ್ ಜತೆ ನಂಟು ಇರುವ ವ್ಯಕ್ತಿ ಮುಸ್ಲಿಂ ಸಮಾವೇಶದಲ್ಲಿ ಭಾಗಿ ಆರೋಪ: ಹೆಸರು ಬಹಿರಂಗಪಡಿಸುವಂತೆ ಯತ್ನಾಳ್​ಗೆ​ ಖಾದ್ರಿ ಸವಾಲ್
ಯತ್ನಾಳ್, ಸೈಯದ್‌ ತಾಜುದ್ದೀನ್ ಖಾದ್ರಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 06, 2023 | 1:59 PM

ಹುಬ್ಬಳ್ಳಿ, (ಡಿಸೆಂಬರ್ 06): ಮೊನ್ನೇ ಅಂದರೆ ಡಿಸೆಂಬರ್ 4ರಂದು ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ(Hubballi Muslim convention) ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿ ಭಾಗವಹಿಸಿದ್ದು, ಆತನ ಜತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಆರೋಪಿಸಿದ್ದಾರೆ. ಇದಕ್ಕೆ ಇದೀಗ ಸ್ವತಃ ಕಾರ್ಯಕ್ರಮ ಆಯೋಜಕ, ಬಾಷಾಪೀರ್ ದರ್ಗಾದ ಧರ್ಮಗುರು ಸೈಯದ್‌ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದು, ಐಸಿಸ್​ ಉಗ್ರರ ಜತೆ ಯಾರೆಲ್ಲಾ ನಂಟು ಇದ್ದರೆಂಬುದನ್ನು ಹೇಳಲಿ. ಉಗ್ರರ ಜತೆಗಿನ ನಂಟು ಇದ್ದವರ ಹೆಸರನ್ನು ಬಹಿರಂಗಪಡಿಸಲಿ ಎಂದು ಯತ್ನಾಳ್​ಗೆ ಸವಾಲು ಹಾಕಿದರು.

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಸೈಯದ್‌ ತಾಜುದ್ದೀನ್ ಖಾದ್ರಿ, ಅಂದು ಸಮಾವೇಶಕ್ಕೆ 150ಕ್ಕೂ ಹೆಚ್ಚು ಸೂಫಿಗಳಿಗೆ ಆಹ್ವಾನ ನೀಡಲಾಗಿತ್ತು. 100ಕ್ಕೂ ಹೆಚ್ಚು ಧರ್ಮ ಗುರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಯಾರೊಬ್ಬರೂ ಐಸಿಸ್​ ಉಗ್ರರ ಜತೆ ನಂಟು ಹೊಂದಿದ್ದವರು ಇಲ್ಲ. ಪೊಲೀಸ್ ಇಲಾಖೆ ಸೂಚನೆ ಮೇರೆಗೆ ವೇದಿಕೆಯ ಮೇಲೆ 25 ಜನರಿಗೆ ಅವಕಾಶ ನೀಡಲಾಗಿತ್ತು. ಯಾರೆಲ್ಲಾ ಭಾಗವಹಿಸಲಿದ್ದಾರೆಂಬ ಎಲ್ಲಾ ಮಾಹಿತಿಯನ್ನು ಪೊಲೀಸ್ ಇಲಾಖೆ, ಧಾರವಾಡ ಜಿಲ್ಲಾಡಳಿತಕ್ಕೆ ನಾವು ನೀಡಿದ್ದೆವು. ಐಸಿಸ್​ ಉಗ್ರರ ಜತೆ ಯಾರೆಲ್ಲಾ ನಂಟು ಇದ್ದರೆಂಬುದನ್ನು ಯತ್ನಾಳ್ ಹೇಳಲಿ ಎಂದರು.

ಇದನ್ನೂ ಓದಿ: ಮುಸ್ಲಿಂ ಸಮಾವೇಶ: ಐಸಿಸ್ ಸಂಪರ್ಕ ಇರುವವನ ಜತೆ ವೇದಿಕೆ ಹಂಚಿಕೊಂಡ್ರಾ ಸಿದ್ದರಾಮಯ್ಯ?

ಉಗ್ರರ ಜತೆಗಿನ ನಂಟು ಇದ್ದವರ ಹೆಸರನ್ನು ಶಾಸಕ ಯತ್ನಾಳ್ ಬಹಿರಂಗಪಡಿಸಲಿ ಸವಾಲು ಹಾಕಿದ ಸೈಯದ್‌ ತಾಜುದ್ದೀನ್ ಖಾದ್ರಿ, ಒಂದು ವೇಳೆ ಐಎಸ್ ಉಗ್ರರ ಜೊತೆಗೆ ನಂಟು ಇದ್ದಿದ್ದು ಆದ್ರೆ ಗುಪ್ತ ಇಲಾಖೆಗೆ ಮಾಹಿತಿ ಇರಬೇಕಾಗಿತ್ತು. ನಾವು ಎಲ್ಲಾ ತನಿಖೆಗೆ ಸಿದ್ಧರಾಗಿದ್ದೇವೆ. ಸರಿಯಾದ ರೀತಿಯಲ್ಲಿ ತನಿಖೆ ಆಗಲೆಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ