ಹುಬ್ಬಳ್ಳಿ: ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿಲ್ಲ. ಅನರ್ಹರು ಬಿಜೆಪಿಗೆ ಬಂದಿದ್ದಕ್ಕೆ ಅವರಿಗೆ ಟಿಕೆಟ್ ನೀಡಿ, ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಬೇಸರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವುದಾದ್ರೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ, ಯಾರೆ ಬಂದ್ರು ತೆಗೆದುಕೊಳ್ಳುತ್ತೇವೆ ಎಂದು ಟೀಕೆ ಮಾಡಿದ್ದಾರೆ.
Published On - 12:27 pm, Sun, 8 December 19