AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ, ಪ್ರಧಾನಿ ಮೋದಿಯವರಿಂದ ಉದ್ಘಾಟನೆ : ಪ್ರಲ್ಹಾದ್ ಜೋಶಿ

national youth festival: ಸ್ವಾಮಿ ವಿವೇಕಾನಂದರ 160 ನೇ ಜನ್ಮ ಜಯಂತಿ ಅಂಗವಾಗಿ ನಡೆಯಲಿರುವ ಯುವಜನ ಮಹೋತ್ಸವವನ್ನು ರಾಜ್ಯದಲ್ಲಿ ಉದ್ಘಾಟಿಸಲು ಜನವರಿ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡರು.

ಹುಬ್ಬಳ್ಳಿ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ, ಪ್ರಧಾನಿ ಮೋದಿಯವರಿಂದ ಉದ್ಘಾಟನೆ : ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ, ಪ್ರಧಾನಿ ಮೋದಿಯವರಿಂದ ಉದ್ಘಾಟನೆ : ಪ್ರಲ್ಹಾದ್ ಜೋಶಿ
TV9 Web
| Edited By: |

Updated on: Dec 24, 2022 | 3:52 PM

Share

ಹುಬ್ಬಳ್ಳಿ : ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡದಲ್ಲಿ (Hubballi, Dharwad) ನಡೆಯಲಿರುವ 26 ನೇ ರಾಷ್ಟ್ರೀಯ ಯುವಜನೋತ್ಸವವನ್ನು (National Youth Festival) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಉದ್ಘಾಟನೆ ಮಾಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಈ ಬಾರಿ ಹುಬ್ಬಳ್ಳಿ ಧಾರವಾಡದಲ್ಲಿ ಯುವಜನೋತ್ಸವ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದರು.

ಜನವರಿ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಯುವಜನ ಮಹೋತ್ಸವ ನಡೆಯಲಿದೆ. ಸ್ವಾಮಿ ವಿವೇಕಾನಂದರ 160 ನೇ ಜನ್ಮ ಜಯಂತಿ ಅಂಗವಾಗಿ ನಡೆಯಲಿರುವ ಯುವಜನ ಮಹೋತ್ಸವವನ್ನು ರಾಜ್ಯದಲ್ಲಿ ಉದ್ಘಾಟಿಸಲು ಜನವರಿ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡರು.

ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಕ್ಕೆ ಈ ಬಾರಿಯ 26ನೇ ರಾಷ್ಟ್ರೀಯ ಯುವ ಜನೋತ್ಸವ ದೊರಕಿದ್ದು ರಾಜ್ಯಕ್ಕೆ ಹೆಮ್ಮೆಯ ವಿಚಾರ. ಉತ್ತರ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯಲಿರುವ ಯುವ ಜನರ ಈ ಹಬ್ಬದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಜನೋತ್ಸವದಲ್ಲಿ ಎಲ್ಲಾ ರಾಜ್ಯಗಳಿಂದ ಸುಮಾರು 7,500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿನಿಧಿಗಳಿಗೆ ಸರಿಯಾದ ವಸತಿ ಮತ್ತು ವಸತಿ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡಲು ಮತ್ತು ವೇದಿಕೆಗಳನ್ನು ಸಿದ್ಧಪಡಿಸಲು ಸೂಚನೆಗಳನ್ನು ನೀಡಲಾಗಿದೆ.

ಈ ಸುವರ್ಣಾವಕಾಶ ಕಲ್ಪಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ತ ಧಾರವಾಡ ಲೋಕಸಭಾ ಜನತೆಯ ಜನರ ಪರವಾಗಿ ಪ್ರಲ್ಹಾದ್ ಜೋಶಿ ಧನ್ಯವಾದಗಳನ್ನ ತಿಳಿಸಿದ್ದಾರೆ. ಈ ರಾಷ್ಟ್ರ‍ೀಯ ಯುವ ಜನೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಸನ್ನದ್ಧವಾಗಿ ದೇಶದ ಮೂಲೆ ಮೂಲೆಯಿಂದ ಆಗಮಿಸುವ ಎಲ್ಲ ಯುವಕರನ್ನು ಸ್ವಾಗತಿಸಲಿದೆ ಎಂದು ಪ್ರಲ್ಹಾದ ಜೋಶಿಯವರು ಇದೇ ವೇಳೆ ಸಂತಸ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್