AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ: ರಿಪೋರ್ಟ್​ಗಾಗಿ ರೋಗಿಗಳ ಪರದಾಟ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಕ್ತ, ಕಫ ಸೇರಿದಂತೆ ವಿವಿಧ ಮಾದರಿಗಳನ್ನು ಸಿಬ್ಬಂದಿ ಸರಿಯಾಗಿ ಟೆಸ್ಟ್ ಮಾಡಿ ವರದಿ ನೀಡದೇ ನಿರ್ಲಕ್ಷ್ಯವಹಿಸುತ್ತಿರುವ ಆರೋಪ ಕೇಳಿಬಂದಿದೆ. ಇದು ರೋಗಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಫದ ಮಾದರಿ ನೀಡಿದ್ದ ಬಾಲಕನೋರ್ವ ರಿಪೋರ್ಟ್​ಗಾಗಿ ಮೂರ್ನಾಲ್ಕು ಬಾರಿ ಅಡ್ಡಾಡಿದ್ದಾನೆ. ಕೊನೆಗೆ, ಸ್ಯಾಂಪಲ್ಸ್ ಕಳೆದುಹೋಗಿದೆ ಮತ್ತೊಮ್ಮೆ ನೀಡಿ ಎಂದು ಸಿಬ್ಬಂದಿ ಹೇಳಿದ್ದಾರೆ.

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ: ರಿಪೋರ್ಟ್​ಗಾಗಿ ರೋಗಿಗಳ ಪರದಾಟ
ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ
ಸಂಜಯ್ಯಾ ಚಿಕ್ಕಮಠ
| Updated By: Ganapathi Sharma|

Updated on: Oct 24, 2025 | 1:54 PM

Share

ಹುಬ್ಬಳ್ಳಿ, ಅಕ್ಟೋಬರ್ 24: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ, ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಂದ ಪ್ರತಿನಿತ್ಯ ಈ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ನಂಬಿ ಬರುವ ರೋಗಿಗಳಿಗೆ ಇದೀಗ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪರದಾಡುವಂತಾಗಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಿಂದ ಅಕ್ಟೋಬರ್ 8 ರಂದು ಕಿರಣಕುಮಾರ್ ಎಂಬ ಬಾಲಕ ಕೆಮ್ಮು ಮತ್ತು ಜ್ವರದ ಚಿಕಿತ್ಸೆಗಾಗಿ ಕಿಮ್ಸ್​ಗೆ ಬಂದಿದ್ದ. ವೈದ್ಯರು ಆತನಿಗೆ ಕಫದ ಪರೀಕ್ಷೆ ಮಾಡಿಸುವಂತೆ ಹೇಳಿದ್ದರು. ಹೀಗಾಗಿ ಕಿಮ್ಸ್​ನಲ್ಲಿಯೇ ಇರುವ ಲ್ಯಾಬ್​ಗೆ ಕಫದ ಮಾದರಿಯನ್ನು ನೀಡಿದ್ದ. ಮೂರು ದಿನದಲ್ಲಿ ವರದಿ ನೀಡುವುದಾಗಿ ಸಿಬ್ಬಂದಿ ಹೇಳಿದ್ದರು. ಮೂರು ದಿನ ಬಿಟ್ಟು ಬಂದಾಗ ಇನ್ನೂ ವರದಿ ಬಂದಿಲ್ಲ ಎಂದಿದ್ದಾರೆ. ಮತ್ತೆರಡು ದಿನ ಬಿಟ್ಟು ಬಂದಾಗಲು ರಿಪೋರ್ಟ್ ಬಂದಿಲ್ಲಾ ಎಂದಿದ್ದಾರೆ. ಇದಾದ ನಂತರ ಮತ್ತೆ ಹೆತ್ತವರ ಜೊತೆ ಬಾಲಕ ಬಂದಾಗ, ‘ನೀನು ನೀಡಿದ ಸ್ಯಾಂಪಲ್ಸ್ ಕಳೆದಿದೆ. ಹೀಗಾಗಿ ರಿಪೋರ್ಟ್ ಇಲ್ಲ. ಮತ್ತೊಮ್ಮೆ ಸ್ಯಾಂಪಲ್ ಕೊಟ್ಟು ಹೋಗಿ’ ಎಂದಿದ್ದಾರೆ. ಇದು ಬಾಲಕನ ತಂದೆಯ ಆಕ್ರೋಶಕ್ಕೆ ಕಾರಣವಾಗಿದೆ. ಬಡವರೇ ಹೆಚ್ಚಾಗಿ ಕಿಮ್ಸ್​​​ಗೆ ಬರುತ್ತಾರೆ. ಆದರೆ, ಇಲ್ಲಿ ಬಡವರ ಜೊತೆ ಲ್ಯಾಬ್ ಸಿಬ್ಬಂದಿ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಗಿಗಳು ನೀಡುವ ರಕ್ತ ಮತ್ತು ಕಫ ಸೇರಿದಂತೆ ವಿವಿಧ ಸ್ಯಾಂಪಲ್ಸ್​ಗಳನ್ನು ಲ್ಯಾಬ್ ಸಿಬ್ಬಂದಿ ಸರಿಯಾಗಿ ಸಂಗ್ರಹಿಸದೇ ನಿರ್ಲಕ್ಷ್ಯ ವಹಿಸುವುದು ಇದು ಮೊದಲೇನಲ್ಲ. ಪ್ರತಿನಿತ್ಯ ಈ ರೀತಿಯ ಘಟನೆಗಳು ಹುಬ್ಬಳ್ಳಿ ಕಿಮ್ಸ್​ನಲ್ಲಿ ನಡೆಯುತ್ತಲೇ ಇರುತ್ತವೆ. ಸ್ಯಾಂಪಲ್ಸ್​ಗಳನ್ನು ಸರಿಯಾಗಿ ಸಂಗ್ರಹಿಸಿಡದೇ ಇರುವುದರಿಂದ ಅವು ಕಸದ ಬುಟ್ಟಿಗೆ ಹೋಗುತ್ತಿವೆ. ರಿಪೋರ್ಟ್ ಕೇಳಲು ಬಂದಾಗ ನಿಜ ಹೇಳದೆ ಮೊದಲು ಎರಡ್ಮೂರು ಸಲ ಅಡ್ಡಾಡಿಸುತ್ತಾರೆ. ನಂತರ ಸ್ಯಾಂಪಲ್ಸ್ ಕಳೆದಿದೆ, ಮತ್ತೊಮ್ಮೆ ನೀಡಿ ಎನ್ನುತ್ತಾರೆ.

ಇದನ್ನೂ ಓದಿ: ಜಗತ್ತಿನ ಅಪರೂಪದ ಪ್ರಕರಣಕ್ಕೆ ಸುಖಾಂತ್ಯ ಹಾಡಿದ ಕಿಮ್ಸ್ ವೈದ್ಯರು: ಮಗು ಮನೆಗೆ

ಹುಬ್ಬಳ್ಳಿ ಕಿಮ್ಸ್​ನಲ್ಲಿ ಲ್ಯಾಬ್ ನಿರ್ವಹಣೆಯನ್ನು ಖಾಸಗಿ ಏಜನ್ಸಿಗೆ ನೀಡಲಾಗಿದೆ. ಪ್ರತಿ ಪರೀಕ್ಷೆಗೆ ಇಂತಿಷ್ಟು ಹಣ ಎಂದು ಕಿಮ್ಸ್ ನೀಡುತ್ತದೆ. ಆದರೆ, ಗುತ್ತಿಗೆ ಪಡೆದಿರುವ ಏಜನ್ಸಿ ಸಿಬ್ಬಂಧಿ ನಿರ್ಲಕ್ಷ್ಯ ವಹಿಸುತ್ತಿರುವದರಿಂದ ರೋಗಗಳು ಸಕಾಲದಲ್ಲಿ ರಿಪೋರ್ಟ್ ಸಿಗದೇ ಪರದಾಡುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ