AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಕೊಲೆ ಪ್ರಕರಣ: ಫಯಾಜ್​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್​​ ತೆರೆದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದ ವಾದವಾದರೇ, ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂಬುವುದು ಮತ್ತೊಂದು ವರ್ಗದ ವಾದ. ಈ ನಡುವೆ ಕಿಡಿಗೇಡಿಗಳು ಫಯಾಜ್​​ನೇಹಾ ಅಂತ ಇನ್ಸ್ಟಾಗ್ರಾಮ್​ ಖಾತೆ ತೆರೆದಿದ್ದಾರೆ.

ನೇಹಾ ಕೊಲೆ ಪ್ರಕರಣ: ಫಯಾಜ್​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್​​ ತೆರೆದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು
ನೇಹಾ ಕೊಲೆ: ಫಯಾಜ್​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್ ಓಪನ್​
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on:Apr 21, 2024 | 12:42 PM

Share

ಹುಬ್ಬಳ್ಳಿ, ಏಪ್ರಿಲ್​ 21: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಇನ್ಸ್ಟ್‌ಗ್ರಾಮ್​ನಲ್ಲಿ (Instagram) ಫಯಾಜ್​ನೇಹಾ (FayazNeha) ಎಂಬ ಹೆಸರಿನಲ್ಲಿ ಅಕೌಂಟ್ ಓಪನ್ ಮಾಡಿ, ಕೊಲೆ ಆರೋಪಿ ಫಯಾಜ್ (Fayaz)​ ಮತ್ತು ನೇಹಾ ಜೊತೆಗಿರುವ ಫೋಟೋ, ವಿಡಿಯೋಗಳನ್ನು ಪೋಸ್ಟ್​ ಮಾಡಿದ್ದಾರೆ. ಅಲ್ಲದೆ “ನೇಹಾ, ಫಯಾಜ್​ ಅವರದ್ದು ನಿಜವಾದ ಪ್ರೀತಿ, ಪ್ರೀತಿಗೆ ನ್ಯಾಯ ಕೊಡಿಸಿ” ಎಂದು ಇಂಗ್ಲಿಷ್​ನಲ್ಲಿ ಬರೆದಿದ್ದಾರೆ. ಕಿಡಿಗೇಡಿಗಳು ಈ ರೀತಿಯಾಗಿ ಇಬ್ಬರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ, ತನಿಖೆಯ ಹಾದಿ ತಪ್ಪಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಈ ಬಗ್ಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್​ ಹಿರೇಮಠ ಮಾತನಾಡಿ, ಹಂತಕನ‌ ಬೆನ್ನಿಗೆ ‌ನಿಂತು ನನ್ನ ‌ಮಗಳ ಮೇಲೆ ಅಪವಾದ ಹೊರಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಎಚ್ಚೆತ್ತಕೊಂಡು ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ನನ್ನ ಪುತ್ರಿಯ ಸಾವಿಗೆ ನ್ಯಾಯ ಕೊಡಿ. ಇಲ್ಲದಿದ್ದರೆ ನಾನೇ ಸೈಬರ್ ಠಾಣೆಗೆ ‌ದೂರು ನೀಡುತ್ತೇನೆ ಎಂದು ಹೇಳಿದರು.

ಫಯಾಜ್​ನನ್ನು ಬಂಧಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ

ನೇಹಾರನ್ನು ಕೊಲೆ ಮಾಡಿದ ಆರೋಪಿ ಫಯಾಜ್​​ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್​ ತಂಡಕ್ಕೆ ಕಾಪ್ ಆಫ್ ದಿ ಮಂತ್ ಅವಾರ್ಡ ನೀಡಿ ಗೌರವಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ, 25 ಸಾವಿರ ರೂಪಾಯಿ ಬಹುಮಾನ ನೀಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರೇಣುಕಾ ಸುಕುಮಾರ ಶ್ಲಾಘನೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ತನ್ನ ಮುಖಕ್ಕೆ ಮಸಿ ಬಳಿದುಕೊಂಡ ಕಾಂಗ್ರೆಸ್ ಸರ್ಕಾರ

ಹಂತಕ ಫಯಾಜ್‌ ನೇಹಾರನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದನು. ಈ ಪ್ರಕರಣದ ಗಂಭೀರತೆಯನ್ನು ಅರಿತು ಆರೋಪಿಯನ್ನು ಪತ್ತೆ ಹಚ್ಚಲು ರೇಣುಕಾ ಸುಕುಮಾರ ವಿಶೇಷ ತಂಡವನ್ನು ರಚಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತವಾದ ತಂಡ, ಹಂತಕನ ಸುಳಿವನ್ನು ಬೆನ್ನತ್ತಿ ಕೃತ್ಯ ನಡೆದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಯಿತು. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಪ್ರಶಂಶಿಸಿದರು.

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ

ನೇಹಾಳ ಕುರಿತು ನೇಹಾ ಮನೆಯ ಮುಂಭಾಗದಲ್ಲಿರುವ ಮುಸ್ಲಿಂ ಕುಟುಂಬ ಮಾತನಾಡಿ, ಹಿಂದೂ ಮುಸ್ಲಿಂ ಬೇಧ ಬಾವ ಇಲ್ಲದೆ ನಾವಿದ್ದೇವೆ. ನೇಹಾ ತಾಯಿ ನಮ್ಮ ಜೊತೆ ವಾಕಿಂಗ್ ಬರುತ್ತಾ ಇದ್ದರು. ನೇಹಾ ನಮ್ಮ ಜೊತೆ ಬಹಳ ಚೆನ್ನಾಗಿ‌ ಮಾತಾಡತಿದ್ದರು. ಅವರ ಮನೆಯಲ್ಲಿ ಹಬ್ಬ ಇದ್ದರೆ ನಾವು ಹೋಗತಿದ್ವಿ. ನಮ್ಮ ಮನೆಯಲ್ಲಿ ಹಬ್ಬ ಇದ್ದರೆ ಅವರು ಬರುತ್ತಿದ್ದರು. ಎಲ್ಲರೊಂದಿಗೆ ನೇಹಾ ಚೆನ್ನಾಗಿದ್ದಳು ಎಂದು ಹೇಳಿದರು.

ಲವ್ ಆ ತರಹ ಏನೂ ಇರಲಿಲ್ಲ, ಒಳ್ಳೆ ಹುಡಗಿ. ನೇಹಾ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:25 am, Sun, 21 April 24