AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಮೂರನೇ ಬಾರಿಗೆ ತಿರಸ್ಕರಿಸಿದೆ. 2024ರ ಏಪ್ರಿಲ್ 18ರಂದು ನಡೆದ ಈ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ
ನೇಹಾ ಹಿರೇಮಠ, ಆರೋಪಿ ಫಯಾಜ್Image Credit source: google
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 16, 2026 | 4:06 PM

Share

ಹುಬ್ಬಳ್ಳಿ, ಫೆಬ್ರವರಿ 16: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ (Neha Hiremath Murder Case) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 3ನೇ ಬಾರಿಗೆ ಧಾರವಾಡ ಹೈಕೋರ್ಟ್​ ಪೀಠ (Dharwad High Court) ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಫಯಾಕ್​​ಗೆ ಮತ್ತೆ ಜೈಲೇ ಗತಿ ಆಗಿದೆ.

ಪ್ರಕರಣ ಹಿನ್ನೆಲೆ

2024 ಏಪ್ರಿಲ್ 18ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ‌ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆಯಾಗಿತ್ತು. ಫಯಾಜ್ ಅನ್ನೋ ಆಕೆಯ ಸಹಪಾಠಿ ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. ಈ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅನೇಕ ಕಡೆ ಹೋರಾಟಗಳು ನಡೆದಿದ್ದವು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸರ್ಕಾರ, ಆದಷ್ಟು ಬೇಗ ಪ್ರಕರಣದ ತನಿಖೆ ಮುಗಿಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುತ್ತೇವೆ ಎಂದಿತ್ತು. ಇನ್ನು ಘಟನೆ ನಂತರ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಆರೋಪಿ ಫಯಾಜ್​​ನನ್ನು ಬಂಧಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ

ಇನ್ನು ಕಳೆದ ಆಗಸ್ಟ್​ನಲ್ಲಿ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಫಯಾಜ್ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯ ಆತನ ಜಾಮೀನು ಅರ್ಜಿ ತಿರಸ್ಕಾರ ಮಾಡಿತ್ತು. ನಂತರ ಆತ ಹೈಕೋರ್ಟ್ ಮೆಟ್ಟಿಲೇರಿದ್ದ. ಅಲ್ಲಿ ಕೂಡ ಆತನ ಜಾಮೀನು ಅರ್ಜಿ ತಿರಸ್ಕಾರವಾಗಿತ್ತು. ಸದ್ಯ ಆರೋಪಿ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಇನ್ನು ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರನ್ನು ಕೂಡ ನಿಯೋಜಿಸಿದೆ. ಆದರೆ ಪ್ರಕರಣದ ತನಿಖೆ ಮಾತ್ರ ಆರಂಭವಾಗಿರಲಿಲ್ಲ. ಇತ್ತೀಚೆಗೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸಂತ್ರ ನ್ಯಾಯಾಧೀಶರು, ಟ್ರಯಲ್​ಗೆ ದಿನಾಂಕ್ ಫಿಕ್ಸ್​ ಮಾಡಿದ್ದರು. ಅದರಂತೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ಇನ್ನು ಕಳೆದ ತಿಂಗಳು ಹುಬ್ಬಳ್ಳಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಟ್ರಯಲ್ ಆರಂಭಿಸಿದ್ದರು. ಸಾಕ್ಷಿಗಳ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
ಸೈಟ್ ವಿವಾದ; ಯಶ್ ತಾಯಿ ಪುಷ್ಪಾಗೆ ಮೊದಲ ಹಂತದ ಜಯ
VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ 'ಒಳ'ಜಗಳ
VIDEO: ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರ ನಡುವೆ 'ಒಳ'ಜಗಳ