ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಇಂದು(ಏ.30) ಮರಳಿ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ನೇಹಾ ಕೊಲೆ ಪ್ರಕರಣ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 30, 2024 | 5:27 PM

ಹುಬ್ಬಳ್ಳಿ, ಏ.30: ಹುಬ್ಬಳ್ಳಿಯ(Hubli) ಕೆಎಎಲ್​ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ (Neha Hiremath murder case) ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ ಹಿನ್ನಲೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರು ದಿನಗಳ ಕಾಲ ವಿಚಾರಣೆಗೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಇಂದು(ಏ.30) ಮರಳಿ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಘಟನೆ ವಿವರ

ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದ. ಇದಾದ ಬಳಿಕ ಒಂದು ಗಂಟೆಯಲ್ಲಿಯೇ ಆತನನ್ನ ಬಂಧಿಸಲಾಗಿತ್ತು. ನಂತರ ಹುಬ್ಬಳ್ಳಿಯ ಒಂದನೇ JMFC ಕೋರ್ಟ್, ಫಯಾಜ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿತ್ತು. ಈ ಮದ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನಲೆ ಫಯಾಜ್​​ನನ್ನ ಆರು ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ವಿವಿಧ ಆಯಾಮಗಳಲ್ಲಿ ಫಯಾಜ್ ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ:ನೇಹಾ ಕೊಲೆ ಪ್ರಕರಣ; ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ

ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆರೋಪಿ ಫಯಾಜ್​​ ಜೊತೆಗೆ ಕ್ರೈಂ ನಡೆದ ಸ್ಥಳದಲ್ಲಿ ಮಹಜರು ಮಾಡುವ ಮೂಲಕ ಫೀಲ್ಡಿಗಿಳಿದಿದ್ದರು. ಬಳಿಕ ಆರೋಪಿ ಫಯಾಜ್​​ನ ಮತ್ತಷ್ಟು ಆತಂಕಕಾರಿ ವಿಷಯಗಳು ಬೆಳಕಿಗೆ ಬಂದಿತ್ತು. ಕೊಲೆ ಮಾಡುವ ಕೆಲವು ದಿನಗಳ ಮುನ್ನ ಆರೋಪಿ ಫಯಾಜ್​​ ನೇಹಾ ಹಿರೇಮಠ ಮನೆ ಬಳಿಯೇ ಓಡಾಡಿದ್ದಾನೆ. ಆ ಮೂಲಕ ನೇಹಾ ಚಲನವಲನವನ್ನು ಗಮನಿಸಿದ್ದ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Tue, 30 April 24

‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ