ಹುಬ್ಬಳ್ಳಿ, ಏ.30: ಹುಬ್ಬಳ್ಳಿಯ(Hubli) ಕೆಎಎಲ್ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ (Neha Hiremath murder case) ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು, ಈ ಹಿನ್ನಲೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರು ದಿನಗಳ ಕಾಲ ವಿಚಾರಣೆಗೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಇಂದು(ಏ.30) ಮರಳಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.
ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದ. ಇದಾದ ಬಳಿಕ ಒಂದು ಗಂಟೆಯಲ್ಲಿಯೇ ಆತನನ್ನ ಬಂಧಿಸಲಾಗಿತ್ತು. ನಂತರ ಹುಬ್ಬಳ್ಳಿಯ ಒಂದನೇ JMFC ಕೋರ್ಟ್, ಫಯಾಜ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿತ್ತು. ಈ ಮದ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನಲೆ ಫಯಾಜ್ನನ್ನ ಆರು ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ವಿವಿಧ ಆಯಾಮಗಳಲ್ಲಿ ಫಯಾಜ್ ವಿಚಾರಣೆ ನಡೆಸಲಾಗಿದೆ.
ಇದನ್ನೂ ಓದಿ:ನೇಹಾ ಕೊಲೆ ಪ್ರಕರಣ; ಫಯಾಜ್ ವಿರುದ್ದ ವಕಾಲತ್ತು ವಹಿಸಬಾರದೆಂದು ವಕೀಲರ ಸಂಘಕ್ಕೆ ಮನವಿ
ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಆರೋಪಿ ಫಯಾಜ್ ಜೊತೆಗೆ ಕ್ರೈಂ ನಡೆದ ಸ್ಥಳದಲ್ಲಿ ಮಹಜರು ಮಾಡುವ ಮೂಲಕ ಫೀಲ್ಡಿಗಿಳಿದಿದ್ದರು. ಬಳಿಕ ಆರೋಪಿ ಫಯಾಜ್ನ ಮತ್ತಷ್ಟು ಆತಂಕಕಾರಿ ವಿಷಯಗಳು ಬೆಳಕಿಗೆ ಬಂದಿತ್ತು. ಕೊಲೆ ಮಾಡುವ ಕೆಲವು ದಿನಗಳ ಮುನ್ನ ಆರೋಪಿ ಫಯಾಜ್ ನೇಹಾ ಹಿರೇಮಠ ಮನೆ ಬಳಿಯೇ ಓಡಾಡಿದ್ದಾನೆ. ಆ ಮೂಲಕ ನೇಹಾ ಚಲನವಲನವನ್ನು ಗಮನಿಸಿದ್ದ ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:58 pm, Tue, 30 April 24