ಮದುವೆ ದಿಬ್ಬಣದ ಕ್ರೂಸರ್​ ಅಪಘಾತದಲ್ಲಿ 9 ಜನ ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ

ಮಹಿಳೆಯರು, ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮೇರೆಗೆ  ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದರು. 

ಮದುವೆ ದಿಬ್ಬಣದ ಕ್ರೂಸರ್​ ಅಪಘಾತದಲ್ಲಿ 9 ಜನ ಸಾವು ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:May 22, 2022 | 6:46 PM

ಧಾರವಾಡ: ಮದುವೆ ದಿಬ್ಬಣದ ಕ್ರೂಸರ್​ ಅಪಘಾತದಲ್ಲಿ 9 ಜನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಧಾರವಾಡ ತಾಲೂಕಿನ ಬಾಡ ಬಳಿ ನಿನ್ನೆ ದುರಂತ ಸಂಭವಿಸಿತ್ತು. ಮಹಿಳೆಯರು, ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮೇರೆಗೆ  ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದರು.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ್ದು, ಅಪಘಾತದಲ್ಲಿ ಗಾಯಗೊಂಡಿರೋರ ಯೋಗಕ್ಷೇಮ ವಿಚಾರಿಸಿದ್ದಾರೆ. 9 ಜನ ಮೃತಪಟ್ಟು, 9 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವಾಡ್೯ಗಳಿಗೆ ಭೇಟಿ ನೀಡಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರೋರಿಗೆ ಧೈರ್ಯ ತುಂಬಿದರು. ಅಲ್ಲದೇ ಸೂಕ್ತ ಚಿಕಿತ್ಸೆ ನೀಡುವಂತಡ ಕಿಮ್ಸ್ ನಿರ್ದೇಶಕರಿಗೆ ಸೂಚನೆ‌ ನೀಡದರು.

ಧಾರವಾಡದಲ್ಲೊಂದು ಭೀಕರ ರಸ್ತೆ ದುರಂತ: 9 ಜನ ಸಾವು, 4 ಜನರ ಸ್ಥಿತಿ ಗಂಭೀರ

ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿರುವಂತಹ ಭೀಕರ ರಸ್ತೆ ಅಪಘಾತವು ತಾಲೂಕಿನ ಬಾಡ ಗ್ರಾಮದ ಬಳಿ ನಿನ್ನೆ (ಮೇ 21) ದುರ್ಘಟನೆ ಸಂಭವಿಸಿತ್ತು. ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟಿದ್ದರು. 4 ಜನರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ಹಿಂದಿರುಗುವಾಗ ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಭೀಕರ ಅಪಘಾತ ನಡೆದಿದ್ದು, ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿತ್ತು. ಮಳೆಯಿಂದಾಗಿ ಮನ್ಸೂರು ರೇವಣಸಿದ್ದೇಶ್ವರ ಮಠಕ್ಕೆ ಮದುವೆ ಸ್ಥಳಾಂತರಿಸಿದ್ದರು. ಮದುವೆ ಮುನ್ನ ದಿನ ನಿಶ್ಚಿತಾರ್ಥಕ್ಕೆ ಸಂಬಂಧಿಕರು ತೆರಳಿದ್ದರು. ಇಂದು ಮದುವೆ ನಡೆಯಬೇಕಾಗಿತ್ತು. ಆದರೆ ಆಘಾತದಿಂದ ಸಂಬಂಧಿಕರು ಕಲ್ಯಾಣ ಮಂಟಪದ ಕಡೆಗೆ ಬರುತ್ತಿಲ್ಲ. ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್​ಪಿ ಕೃಷ್ಣಕಾಂತ್​ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರವಾರು ತಾರತಮ್ಯ ಆರೋಪ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್

ಮುಗಿಲು ಮುಟ್ಟಿದ ಆಕ್ರಂದನ

ಮದುವೆಗೆ ಮುಂಚೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ನಡೆದ ಘಟನೆಯ ನೆನೆದು ಕಣ್ಣೀರು ಹಾಕಿದ್ದು ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳನ್ನು ನೆನೆದು ತಂದೆ ಬಸವರಾಜ್ ಕಣ್ಣೀರು ಹಾಕಿದ್ದರು. ಮೃತ ಮಹೇಶ್ವರ (11) ತಾಯಿ ಅನ್ನಪೂರ್ಣ ಕಣ್ಣೀರ ಕೊಡಿ ಹರಿಸಿದ್ದರು. ಇನ್ನೂ ಮೊಮ್ಮಗಳು ಅನನ್ಯ ನೆನೆದು ತಾತ ಗುರುಸಿದ್ದಪ್ಪ ಕಣ್ಣೀರು ಹಾಕಿದರು. ಇತ್ತೀಚಿಗೆ ಅನನ್ಯ ಯೋಗ ಪ್ರದರ್ಶನ ನೀಡಿದ್ದನ್ನು ಸ್ಮರಿಸಿ ಆಕ್ರಂದನ. ಪ್ರತಿಭಾವಂತೆ ಮೊಮ್ಮಗಳು ಅನನ್ಯ ಕಳಕೊಂಡು ಕುಟುಂಬ ಅನಾಥವಾಗಿದೆ. ಧಾರವಾಡ ಜಿಲ್ಲಾಸ್ಪತ್ರೆಯ ನಾಲ್ಕು ಮೃತದೇಹಗಳು ಶವಾಗಾರದಲ್ಲಿದ್ದು, ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:16 am, Sun, 22 May 22

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!