2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಪ್ರಲ್ಹಾದ್​​ ಜೋಶಿ

ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ.ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​​ ಜೋಶಿ ಪ್ರತಿಕ್ರಿಯಿಸಿದ್ದು, ಜೆಡಿಎಸ್​ ಜೊತೆ ಮೈತ್ರಿ ಬಗ್ಗೆ ಮಾಹಿತಿ ಇಲ್ಲ. ಯಾವುದೇ ಬೆಳವಣಿಗೆ ಇಲ್ಲ. ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಪ್ರಲ್ಹಾದ್​​ ಜೋಶಿ
ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2023 | 3:39 PM

ಹುಬ್ಬಳ್ಳಿ, ಸೆಪ್ಟೆಂಬರ್​ 8: ಜೆಡಿಎಸ್​ ಜೊತೆ ಮೈತ್ರಿ ಬಗ್ಗೆ ಮಾಹಿತಿ ಇಲ್ಲ, ಯಾವುದೇ ಬೆಳವಣಿಗೆ ಇಲ್ಲ. ಮೈತ್ರಿ ಬಗ್ಗೆ ಯಡಿಯೂರಪ್ಪ ಹೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತಾಗಿ ಕೇಂದ್ರದಲ್ಲಿ ಚರ್ಚೆ ಆಗಿರಬಹುದು. ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ, ಆದರೆ ಆ ರೀತಿ ಬೆಳವಣಿಗೆ ಆಗಿಲ್ಲ. ನಮ್ಮ ನಾಯಕ ಯಡಿಯೂರಪ್ಪ ಅಧಿಕೃತವಾಗಿ ಹೇಳಿದ್ದರೆ ಇರಬಹುದು ಎಂದು ಹೇಳಿದ್ದಾರೆ.

ಸನಾತನ ಧರ್ಮದ ಕುರಿತು ಎ ರಾಜಾ ಮಾತಾಡಿದ್ದಾರೆ. ಸೋ ಕಾಲ್ಡ್ INDIA ಘಟಬಂಧನ ಹಿಂದೂ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ಮೇಜರ್ ಪಕ್ಷ. ಆದರೆ ಕಾಂಗ್ರೆಸ್ ಏನೂ ಮಾಡುತ್ತಿಲ್ಲ. ವ್ಯವಸ್ಥಿತವಾಗಿ ಸೋ ಕಾಲ್ಡ್ INDIA ಘಟಬಂಧನ ಹಿಂದೂ ಭಾವನೆಗೆ ಧಕ್ಕೆ ತರಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ ಮೈತ್ರಿ: ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ ನಾಯಕರು ಹೇಳಿದ್ದೇನು?

ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆಗೆ ಅನುಮತಿ ಕೊಡಲೆಬೇಕು. ಕೊಡದೆ ಹೋದರೆ ನಾವು‌ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಜಗದೀಶ್ ಶೆಟ್ಟರ್ ವ್ಯಂಗ್ಯ

ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್​ ಮಾತನಾಡಿದ್ದು, ಇಬ್ಬರು ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟಿದ್ದು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ. ಮೈತ್ರಿ ವಿಚಾರದಲ್ಲಿ ಬಿಜೆಪಿ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ; ಬಿಎಸ್​ ಯಡಿಯೂರಪ್ಪ ಹೇಳಿದ್ದಿಷ್ಟು…

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ವಿರುದ್ಧ ಆರೋಪ ಮಾಡಿದ್ದರು. ಸಾವಿರಾರು ಕೋಟಿ ರೂ. ಹಗರಣ ಮಾಡಿದ್ದಾರೆಂದು ಆರೋಪ ಮಾಡಿದ್ದರು. ಒಂದೇ ತಿಂಗಳಲ್ಲಿ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು. ಇವತ್ತು ಟೀಕೆ, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ ಎಂದರು.

ಕರ್ನಾಟಕ ಬಿಜೆಪಿಗೆ ಹೆದರಿಕೆ ಶುರುವಾಗಿದೆ. ರಾಜ್ಯದಲ್ಲಿ ಜೆಡಿಎಸ್​ ವೀಕ್ ಆಗಿದೆ. ಜೊತೆಗೆ ಬಿಜೆಪಿಯೂ ವೀಕ್ ಆಗಿದೆ. ಲೋಕಸಭಾ ಚುನಾವಣೆ ವೇಳೆಗೆ ರಾಜಕೀಯ ಧ್ರುವೀಕರಣ ಆಗುತ್ತೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:38 pm, Fri, 8 September 23