ಹಾಲಿ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ (Hubli-Dharwad Central Assembly constituency) ವಿಚಾರ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಇಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಜಗದೀಶ್ ಶೆಟ್ಟರ್ ಅವರ ಜೊತೆ ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಬಿಜೆಪಿ ಬಿಡುವ ಮಾತೇ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಜಗದೀಶ್ ಶೆಟ್ಟರ್ ಅವರ ಪಾತ್ರವೂ ಇದೆ. 30 ವರ್ಷಗಳಿಂದ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಬಿಜೆಪಿಗೆ ಶೆಟ್ಟರ್ ಅವರ ಸೇವೆ ಮುಂದೆಯೂ ಅಗತ್ಯವಾಗಿದೆ.
ಜಗದೀಶ್ ಶೆಟ್ಟರ್ ಜೊತೆ ಟಿಕೆಟ್ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದ ವರಿಷ್ಠರು ಸಹ ಚರ್ಚೆ ಮಾಡುತ್ತಿದ್ದಾರೆ. ಪಕ್ಷಕ್ಕಾಗಿ ಶೆಟ್ಟರ್ ಅವರ ಸೇವೆಯ ಅಗತ್ಯತೆ ಕುರಿತು ಅವರ ಜೊತೆ ಚರ್ಚಿಸಿದ್ದೇನೆ. ಹೈಕಮಾಂಡ್ ಕೂಡ ಅವರ ಪಕ್ಷ ಸೇವೆಯನ್ನ ಪರಿಗಣಿಸುವ ವಿಶ್ವಾಸವಿದೆ. ಶೆಟ್ಟರ್ ಅವರು ಪಕ್ಷದಲ್ಲಿ ಇರಲಿದ್ದಾರೆ. ಪಕ್ಷ ಬಿಡುವ ಮಾತೇ ಇಲ್ಲ ಎಂದು ಜೋಶಿ ಹೇಳಿದರು.
ಸುಮಾರು 30 ನಿಮಿಷಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿದ ಪ್ರಲ್ಹಾದ್ ಜೋಶಿ ಹೈಕಮಾಂಡ್ ಟಿಕೆಟ್ ನೀಡುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:33 pm, Sat, 15 April 23