AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ನಿಲ್ದಾಣದಲ್ಲಿ ಗುಟ್ಕಾ, ಪಾನ್ ಬೀಡಾ ಉಗುಳಿದರೆ ಚಾಲಕ-ನಿರ್ವಾಹಕರಿಗೂ ದಂಡ: NWKRTCಯಿಂದ ಹೊಸ ನಿಯಮ

ತಂಬಾಕು, ಗುಟ್ಕಾ ಜಗಿದು ಬಸ್ ನಿಲ್ದಾಣಗಳಲ್ಲಿ ಉಗುಳುವ ಚಾಲಕ ಮತ್ತು ನಿರ್ವಾಹಕರಿಗೆ ದಂಡ ವಿಧಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ತೀರ್ಮಾನಿಸಿದೆ. ಸ್ವಚ್ಛತೆ ಕಾಪಾಡಲು ಸಿಬ್ಬಂದಿಗೆ 200 ರೂ. ಹಾಗೂ ಸಾರ್ವಜನಿಕರಿಗೆ 100 ರೂ. ದಂಡ ನಿಗದಿಪಡಿಸಲಾಗಿದೆ. ಭದ್ರತಾ ವಿಭಾಗದ ಸಿಬ್ಬಂದಿ ಮತ್ತು ಸಂಸ್ಥೆಯ ಅಧಿಕಾರಿಗಳು ನಿಯಮ ಉಲ್ಲಂಘಿಸುವ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸಲಿದ್ದಾರೆ ಎನ್ನಲಾಗಿದೆ.

ಬಸ್ ನಿಲ್ದಾಣದಲ್ಲಿ ಗುಟ್ಕಾ, ಪಾನ್ ಬೀಡಾ ಉಗುಳಿದರೆ ಚಾಲಕ-ನಿರ್ವಾಹಕರಿಗೂ ದಂಡ: NWKRTCಯಿಂದ ಹೊಸ ನಿಯಮ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on:Aug 19, 2026 | 5:06 PM

Share

ಮುಖ್ಯಾಂಶಗಳು

  • ಬಸ್ ನಿಲ್ದಾಣದಲ್ಲಿ ಗುಟ್ಕಾ, ಪಾನ್ ಬೀಡಾ ಉಗುಳಿದರೆ ದಂಡ
  • ಸಾರ್ವಜನಿಕರ ಜೊತೆಗೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೂ ಫೈನ್​​
  • ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೊಸ ನಿಯಮ

ಹುಬ್ಬಳ್ಳಿ, ಆಗಸ್ಟ್ 19: ಬಸ್ ನಿಲ್ದಾಣಗಳಲ್ಲಿ ಗುಟ್ಕಾ, ತಂಬಾಕು (Tobacco) ಉತ್ಪನ್ನಗಳು ಹಾಗೂ ಪಾನ್ ಬೀಡಾ ಜಗಿದು ಉಗುಳುವ ಪ್ರವೃತ್ತಿಗೆ ಕಡಿವಾಣ ಹಾಕಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಬಸ್ ನಿಲ್ದಾಣ ಆವರಣ ಅಥವಾ ಕರ್ತವ್ಯದ ವೇಳೆ ತಂಬಾಕು ಉತ್ಪನ್ನಗಳನ್ನು ಜಗಿದು ಉಗುಳುವ ಚಾಲಕರು ಮತ್ತು ನಿರ್ವಾಹಕರಿಗೂ ದಂಡ ವಿಧಿಸಲು ಸಂಸ್ಥೆ ಮುಂದಾಗಿದೆ. ಬಸ್ ನಿಲ್ದಾಣಗಳು ಹಾಗೂ ಸಂಸ್ಥೆಯ ಬಸ್‌ಗಳಲ್ಲಿ ಉಗುಳುವ ಪ್ರಕರಣಗಳಿಂದ ಸ್ವಚ್ಛತೆಗೆ ಧಕ್ಕೆಯಾಗುತ್ತಿದೆ ಎಂಬ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಪ್ರಯಾಣಿಕರು ಮತ್ತು ಸಾರ್ವಜನಿಕರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿತ್ತು. ಈಗ ಸಂಸ್ಥೆಯ ಸಿಬ್ಬಂದಿಯನ್ನೂ ನಿಯಮದ ವ್ಯಾಪ್ತಿಗೆ ತರಲು ತೀರ್ಮಾನಿಸಲಾಗಿದೆ.

ಈ ಕುರಿತು ಕರಡು ಅಧಿಸೂಚನೆ ಬಹುತೇಕ ಸಿದ್ಧವಾಗಿದ್ದು, ಭದ್ರತಾ ವಿಭಾಗದ ಸಿಬ್ಬಂದಿ ಮತ್ತು ಸಂಸ್ಥೆಯ ಅಧಿಕಾರಿಗಳು ನಿಯಮ ಉಲ್ಲಂಘಿಸುವ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸಲಿದ್ದಾರೆ. ಮರು ಉಲ್ಲಂಘನೆ ಮಾಡುವವರ ವಿರುದ್ಧದ ಹೆಚ್ಚುವರಿ ದಂಡ ಮತ್ತು ಶಿಸ್ತು ಕ್ರಮಗಳನ್ನು ಮುಂದಿನ ಕೆಲವೇ ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಎನ್‌ಡಬ್ಲ್ಯೂಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗಾ ಎಂ. ತಿಳಿಸಿದ್ದಾರೆ.

ಇದನ್ನೂ ಓದಿ: KSRTC, BMTC ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ‌ದರ ಏರಿಕೆ ಫಿಕ್ಸ್: ಎಷ್ಟು, ಯಾವಾಗಿನಿಂದ?

ಮೊದಲ ತಪ್ಪಿಗೆ ರೂ.200 ದಂಡ

ಎನ್‌ಡಬ್ಲ್ಯೂಕೆಆರ್‌ಟಿಸಿಯ ವ್ಯಾಪ್ತಿಯಲ್ಲಿರುವ ಎಲ್ಲ ಚಾಲಕರು ಮತ್ತು ನಿರ್ವಾಹಕರಿಗೆ ಈ ನಿಯಮ ಅನ್ವಯವಾಗಲಿದೆ. ಪ್ರಯಾಣಿಕರಿಗೆ ಅನ್ವಯಿಸುವ ಸ್ವಚ್ಛತಾ ನಿಯಮಗಳನ್ನು ಸಿಬ್ಬಂದಿಯೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಉದ್ದೇಶದಿಂದ ಈ ಕ್ರಮ ಜಾರಿಯಾಗುತ್ತಿದೆ. ಸಂಸ್ಥೆಯು ದಂಡದ ಮೊತ್ತವನ್ನೂ ಪರಿಷ್ಕರಿಸಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ ಚಾಲಕ ಅಥವಾ ನಿರ್ವಾಹಕನಿಗೆ ರೂ.200 ದಂಡ ವಿಧಿಸಲಾಗುತ್ತದೆ. ಮರು ಉಲ್ಲಂಘನೆ ಮಾಡಿದರೆ ಹೆಚ್ಚಿನ ದಂಡ ಹಾಗೂ ಶಿಸ್ತು ಕ್ರಮಗಳನ್ನು ಜಾರಿಗೆ ತರಲು ಸಂಸ್ಥೆ ಚಿಂತನೆ ನಡೆಸಿದೆ.

ಸಾರ್ವಜನಿಕರಿಗೆ ರೂ.100 ದಂಡ

ಪ್ರಯಾಣಿಕರು ಮತ್ತು ಸಾರ್ವಜನಿಕರು ಬಸ್ ನಿಲ್ದಾಣ ಅಥವಾ ಬಸ್‌ನಲ್ಲಿ ತಂಬಾಕು ಉತ್ಪನ್ನಗಳನ್ನು ಜಗಿದು ಉಗುಳಿದರೆ ರೂ.100 ದಂಡ ವಿಧಿಸಲಾಗುತ್ತದೆ. ಬಸ್ ನಿಲ್ದಾಣ ನಿಯಂತ್ರಕರು, ಭದ್ರತಾ ಸಿಬ್ಬಂದಿ ಹಾಗೂ ಸಂಸ್ಥೆಯ ಅಧಿಕಾರಿಗಳು ದಂಡ ವಿಧಿಸುವ ಅಧಿಕಾರ ಹೊಂದಿರುತ್ತಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:04 pm, Wed, 19 August 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ