ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ನೌಕರರಿಗೆ ನೋಟಿಸ್; ಹಿಂದೂಪರ ಸಂಘಟನೆಗಳಿಂದ ಆಕ್ರೋಶ

ಗಣೇಶ ಹಬ್ಬ ಮುಗಿದ ಮೇಲೆ ಹುಬ್ಬಳ್ಳಿಯಲ್ಲಿ ವಿವಾದದ ಕಿಡಿಯೊಂದು ಹೊತ್ತುಕೊಂಡಿದೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿದ ಸರ್ಕಾರಿ ನೌಕರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿ ಇಎಸ್​ಐ ಆಸ್ಪತ್ರೆಯಲ್ಲಿ ಗಣೇಶ ವಿವಾದದ ಹಿಂದೆ ಹಲವಾರು ಅನುಮಾನ ಹುಟ್ಟಿಕೊಳ್ಳುತ್ತಿವೆ. ಆಸ್ಪತ್ರೆ ಅಧೀಕ್ಷಕರ ನಡೆ, ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ನೌಕರರಿಗೆ ನೋಟಿಸ್; ಹಿಂದೂಪರ ಸಂಘಟನೆಗಳಿಂದ ಆಕ್ರೋಶ
ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ನೌಕರರಿಗೆ ನೋಟಿಸ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 25, 2024 | 10:46 PM

ಹುಬ್ಬಳ್ಳಿ, ಸೆ.25: ಈ ಬಾರಿ ರಾಜ್ಯದಲ್ಲಿ ವಿವಿಧ ಕಡೆ ಗಣೇಶ ಹಬ್ಬದಲ್ಲಿ ಗಲಾಟೆಯಾಗಿದೆ. ಕೆಲವು ಕಡೆ ವಿವಾದ ಸಹ ಆಗಿದೆ. ಆದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಮಾತ್ರ ಅತ್ಯಂತ ಶಾಂತಿಯುತವಾಗಿ ಗಣೇಶ ಹಬ್ಬ ನಡೆದಿದೆ. ಈಗ ಹಬ್ಬ ಮುಗಿದ ಮೇಲೆ ಗಣೇಶನ ವಿವಾದದ ಕಿಡಿ ಎದ್ದಿದೆ. ಈ ಬಾರಿ ಗಣೇಶ ಚತುರ್ಥಿಯಂದು ಸುಖಾಸುಮ್ಮನೆ ವಿವಾದ ಮೈಮೇಲೆ ಎಳೆದುಕೊಂಡಿದ್ದ, ಹುಬ್ಬಳ್ಳಿ ಇಎಸ್​ಐ ಆಸ್ಪತ್ರೆ(ESI Hospital) ಆಡಳಿತ ಮಂಡಳಿ ಈಗ ಮತ್ತೆ ವಿವಾದಾತ್ಮಕ ನಡೆಯಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಹೌದು, ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ  ಗಣೇಶ ಮೂರ್ತಿ ಪ್ರತಿಷ್ಠಾಪನೆಗೆಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಮೂರ್ತಿ ಪ್ರತಿಷ್ಠಾಪನೆ ಅವಕಾಶ ನೀಡದ ಹಿನ್ನೆಲೆ, ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು. ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ, ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ, ಹಿಂದೂಪರ ಸಂಘಟನೆಗಳು, ಬಿಜೆಪಿ ಸದಸ್ಯರು ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು. ಅಲ್ಲದೆ ಅಧೀಕ್ಷಕ ನಜ್ಮಿಗೆ ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ:ಗದಗ: ಪುಟಾಣಿಯ ಹಠಕ್ಕೆ ಮನಸೋತು ಮುಸ್ಲಿಂ ವ್ಯಕ್ತಿ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ

ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿಗಳಿಗೆ ನೊಟೀಸ್​

ಬಳಿಕ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ. ಈಗ ಆಸ್ಪತ್ರೆ ಅಧೀಕ್ಷಕ ನಜ್ಮಿ ಮತ್ತೊಂದು ವರ್ತನೆ ತೋರಿದ್ದಾರೆ. ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ಕೋಮು ಗಲಭೆಯ ಸೃಷ್ಟಿಸುವ ಪ್ರಯತ್ನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರದ ಸಿಬ್ಬಂದಿಯಾಗಿ ಹಿಂದೂಪರ ಸಂಘಟನೆಗಳ ಜೊತೆಗೆ ಸೇರಿ ಗಣೇಶ ಮೂರ್ತಿ ಕೂರಿಸಿದ್ದಿರಿ, ನಿಮ್ಮ ಮೇಲೆ ಯಾಕೆ ಕ್ರಮವಾಗಬಾರದು ಎಂದು ಶುಶ್ರೂಷಾಧಿಕಾರಿಗೆ ಜಗದೀಶ್ ಹೆಚ್ ಎನ್ನುವರಿಗೆ ಈ ತಿಂಗಳ 20 ರಂದು ನೋಟಿಸ್ ನೀಡಲಾಗಿದ್ದು, ಏಳು ದಿನ ಉತ್ತರ ನೀಡಲು ಅವಕಾಶ ನೀಡಲಾಗಿದೆ.  ಈ ವಿಷಯ ಹೊರಗಡೆ ಬಾರದ್ದಂತೆ ಎಚ್ಚರಿಕೆ ಸಹ ನೀಡಲಾಗಿದೆಯಂತೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧೀಕ್ಷಕ ನಜ್ಮಿ ಸಂಪರ್ಕಿಸಿದಾಗ, ‘ಇದು ನಮ್ಮ ಆಡಳಿತಾತ್ಮಕ ವಿಷಯ, ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳತ್ತಾರೆ.

ಇನ್ನು ಈ ನೋಟಿಸ್ ವಿಚಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕ ಅಧಿಕಾರಿಯನ್ನು ಏಕವಚನದಲ್ಲಿ ತರಾಟೆಗೆ ತಗೆದುಕೊಂಡಿದ್ದಾರೆ. ಕೋಮುಗಲಭೆ ಆಗುತ್ತೆ ಎಂದು ಅವನಿಗೆ ಏನ ಗೊತ್ತು ಅಂದಿದ್ದಾರೆ. ಒಟ್ಟಿನಲ್ಲಿ ಇಎಸ್​ಐ ಆಸ್ಪತ್ರೆ ಅಧೀಕ್ಷಕ ನಜ್ಮಿ ನಡೆ ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಹಬ್ಬದ ಆಚರಣೆ ಮಾಡಿದ ಸಿಬ್ಬಂದಿಗೆ ಧರ್ಮ ಸಂಕಟ ಎದುರಾಗಿದೆ. ಈ ನೋಟಿಸ್ ಮತ್ಯಾವ ರೂಪಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!