ನುಗ್ಗಿಕೇರಿ ಧರ್ಮ ವ್ಯಾಪಾರ ಗಲಾಟೆ ವಿಚಾರ; ಯುವ ಕಾಂಗ್ರೆಸ್‌ನಿಂದ ನಬಿಸಾಬ್‌ಗೆ 25 ಸಾವಿರ ರೂ. ನೆರವು

ಧಾರವಾಡದ ನುಗ್ಗಿಕೇರಿ ಗ್ರಾಮದಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಾರಿ ನಬಿಸಾಬ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ₹ 10 ಸಾವಿರ ನೆರವು ನೀಡಿದ್ದಾರೆ.

ನುಗ್ಗಿಕೇರಿ ಧರ್ಮ ವ್ಯಾಪಾರ ಗಲಾಟೆ ವಿಚಾರ; ಯುವ ಕಾಂಗ್ರೆಸ್‌ನಿಂದ ನಬಿಸಾಬ್‌ಗೆ 25 ಸಾವಿರ ರೂ. ನೆರವು
ಕಲ್ಲಂಗಡಿ ಹಣ್ಣಿನ ಅಂಗಡಿಕಾರ ವ್ಯಾಪಾರಿ ನಬಿಸಾಬ್‌
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 10, 2022 | 4:37 PM

ಧಾರವಾಡ: ನುಗ್ಗಿಕೇರಿ (Nuggikeri) ಧರ್ಮ ವ್ಯಾಪಾರ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್‌ನಿಂದ ಹಾನಿಗೀಡಾದ ಕಲ್ಲಂಗಡಿ ಹಣ್ಣಿನ ಅಂಗಡಿಕಾರ ವ್ಯಾಪಾರಿ ನಬಿಸಾಬ್‌ಗೆ 25 ಸಾವಿರ ರೂ. ನೆರವು ನೀಡಲಾಗಿದೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ, ರಾಜ್ಯಾಧ್ಯಕ್ಷ ಹ್ಯಾರೀಸ್ ನಲಪಾಡ್‌ರಿಂದ ಹಣ ವಿತರಣೆ ಮಾಡಲಾಗಿದೆ. ಬಳಿಕ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿಕೆ ನೀಡಿದ್ದು, ಮೊದಲಿಗೆ ಹಿಜಾಬ್ ಗಲಾಟೆ ಆಯ್ತು. ಅದು ಕೋರ್ಟ್‌ಗೆ ಹೋಯ್ತು. ಬಳಿಕ ಹಿಂದೂಯೇತರ ವ್ಯಾಪಾರ ವಿಷಯ ಬಂದಿದೆ. ಹಣ್ಣಿನ ವ್ಯಾಪಾರಿಗಳ ಮೇಲೆ ಬಂದಿದ್ದಾರೆ. ಮಾವು, ಕಲ್ಲಂಗಡಿ ಹಣ್ಣು ಯಾವುದೇ ಇರಲಿ ಅದು ನೇರವಾಗಿ ರೈತರ ಮೇಲೆ ಮಾಡುವ ದಾಳಿಯಾಗಿದೆ. ಸರ್ಕಾರ ಇದಕ್ಕೆಲ್ಲ‌ ಕುಮ್ಮಕ್ಕು ಕೊಡುತ್ತಿದೆ. ಇವರ ಪಕ್ಷದ ನಾಯಕರು ಅದೇ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನೇರವಾಗಿ ರೈತರಿಗೆ ಹೊಡೆತ ಬೀಳುತ್ತದೆ. ಇದನ್ನು ಸರ್ಕಾರ ಮತ್ತು ವಿವಾದ ಮಾಡುವವರು ಗಮನಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ ಕೊಡುವುದು ತಪ್ಪು. ಅದು ಬಿಜೆಪಿಯ ಉದ್ದೇಶವೂ ಅಲ್ಲ’ ಎಂದು ಬಿಜೆಪಿ ನಾಯಕ ಮತ್ತು ಸಂಸದ ಈರಣ್ಣ ಕಡಾಡಿ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಿರುಕುಳ ನೀಡುವವರಿಗೆ ಬಿಜೆಪಿ ಪಕ್ಷದ ಬೆಂಬಲ ಇರುವುದಿಲ್ಲ. ಯಾವುದೇ ಸಮುದಾಯದ ವ್ಯಾಪಾರಿಗಳಿಗೆ ತೊಂದರೆ ಕೊಡುವುದು ತಪ್ಪು ಎಂದು ತಿಳಿಸಿದರು. ಹೈಕೋರ್ಟ್ ಆದೇಶ ಪಾಲಿಸದೆ ಉದ್ಧಟತನದ ವರ್ತನೆಯನ್ನು ಕೆಲವರು ತೋರುತ್ತಿದ್ದಾರೆ. ಕ್ರಿಯೆಗೆ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದರು. ಇಂಥ ಸಂಗತಿಗಳು ಕರ್ನಾಟಕದಲ್ಲಿ ಮುಂದುವರಿಯಬಾರದು.

ಧಾರವಾಡದ ನುಗ್ಗಿಕೇರಿ ಗ್ರಾಮದಲ್ಲಿ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಾರಿ ನಬಿಸಾಬ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ₹ 10 ಸಾವಿರ ನೆರವು ನೀಡಿದ್ದಾರೆ. ಗಲಾಟೆಯಲ್ಲಿ ವ್ಯಾಪಾರಿಯ ಕಲ್ಲಂಗಡಿ ಹಣ್ಣುಗಳನ್ನು ಹಾಳುಗೆಡವಲಾಗಿತ್ತು. ಧಾರವಾಡದ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಶ್ರೀರಾಮಸೇನೆಯವರು ನಡೆಸಿರುವ ಪುಂಡಾಟವನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಖಂಡಿಸಿದ್ದಾರೆ. ಇದು ಹೇಯ ಮತ್ತು ಹೀನ ಕೃತ್ಯ. ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ, ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ? ಶ್ರೀರಾಮಸೇನೆಯವರು ನಡೆಸಿದ ದಾಂದಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌ ಶ್ರೀರಾಮಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂದಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

‘ಗಟ್ಟಿಮೇಳ’ ಧಾರಾವಾಹಿಯ ಕಿಶನ್​ ಈಗ ಸಿನಿಮಾ ಹೀರೋ; ‘ನಾನೇ ನರರಾಕ್ಷಸ’ ಎಂದ ನಟ ರಾಜ್​ ಮನೀಶ್​

ಹರಿಹರ ಪೀಠದ ಸ್ವಾಮೀಜಿ ಬೆನ್ನು ಹತ್ತಿದರೆ ಸಿಎಂ ಬೊಮ್ಮಾಯಿ ಕೂಡ ಸೋಲು ಕಾಣಬೇಕಾಗುತ್ತದೆ: ಯತ್ನಾಳ್ ಹೇಳಿಕೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್