ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಟ್ಟಡ ಕಾರ್ಮಿಕರಿಗೆ ಅತಿ ಹೆಚ್ಚು ಉಚಿತ ಪಾಸ್ ವಿತರಣೆ

ಸುಮಾರು 38 ಲಕ್ಷ ಕಾರ್ಮಿಕರು ರಾಜ್ಯ ಸರ್ಕಾರದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದು, ಅವರೆಲ್ಲರೂ ಉಚಿತ ಬಸ್ ಪಾಸ್‌ಗೆ ಅರ್ಹರಾಗಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಟ್ಟಡ ಕಾರ್ಮಿಕರಿಗೆ ಅತಿ ಹೆಚ್ಚು ಉಚಿತ ಪಾಸ್ ವಿತರಣೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 21, 2022 | 4:50 PM

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ಕಟ್ಟಡ ಕಾರ್ಮಿಕರಿಗೆ ಅತಿ ಹೆಚ್ಚು ಉಚಿತ ಬಸ್ ಪಾಸ್ (free bus pass) ವಿತರಿಸಿದೆ. ಇತರ ನಿಗಮಗಳಿಗೆ ಹೋಲಿಸಿದರೆ, ಎನ್‌ಡಬ್ಲ್ಯುಕೆಆರ್‌ಟಿಸಿ 54,150 ಉಚಿತ ಬಸ್ ಪಾಸ್‌ಗಳನ್ನು ನೀಡುವ ಮೂಲಕ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಕೆಎಸ್‌ಆರ್‌ಟಿಸಿ (29,190 ಪಾಸ್‌ಗಳೊಂದಿಗೆ) ಮತ್ತು ಎನ್‌ಇಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) 16,662 ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ. ಉಚಿತ ಬಸ್ ಪಾಸ್ ವಿತರಿಸುವ ಸರ್ಕಾರದ ಕ್ರಮವನ್ನು ಕಾರ್ಮಿಕರು ಸ್ವಾಗತಿಸಿದ್ದಾರೆ. ಈ ಯೋಜನೆಯು ಕಾರ್ಮಿಕರ ಮೇಲೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು ಬಸ್ ಟಿಕೆಟ್ ಖರ್ಚನ್ನು ಉಳಿಸುತ್ತದೆ. ಸುಮಾರು 38 ಲಕ್ಷ ಕಾರ್ಮಿಕರು ರಾಜ್ಯ ಸರ್ಕಾರದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದು, ಅವರೆಲ್ಲರೂ ಉಚಿತ ಬಸ್ ಪಾಸ್‌ಗೆ ಅರ್ಹರಾಗಿದ್ದಾರೆ. ಉಚಿತ ಬಸ್ ಪಾಸ್ ಹೊಂದಿದವರುರು ಸರ್ಕಾರಿ ಬಸ್ ಹತ್ತುವ ಸ್ಥಳದಿಂದ 45 ಕಿಮೀ ಪ್ರಯಾಣಿಸಬಹುದು. ಧಾರವಾಡದಲ್ಲಿ 16,521, ಬೆಳಗಾವಿಯಲ್ಲಿ 10,613, ಹಾವೇರಿಯಲ್ಲಿ 8,687, ಗದಗದಲ್ಲಿ 8,056, ಬಾಗಲಕೋಟೆಯಲ್ಲಿ 6,752 ಮತ್ತು ಕಾರವಾರದಲ್ಲಿ 3,521 ಜನರಿಗೆ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಲಭ್ಯವಿರುವ ಅಂಕಿಅಂಶಗಳು ತಿಳಿಸುತ್ತವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಕಾರ್ಮಿಕ ಇಲಾಖೆಯ ಈ ಯೋಜನೆಗೆ ವ್ಯಾಪಕ ಪ್ರಚಾರ ನೀಡಿದ್ದೇವೆ. ನಾವು ಎಲ್ಲಾ ಆರು ಜಿಲ್ಲೆಗಳಲ್ಲಿ ಕಾರ್ಮಿಕ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸಿದ್ದು ಪ್ರಮುಖ ನಗರಗಳಲ್ಲಿ ಶಿಬಿರಗಳನ್ನು ನಡೆಸಿದ್ದೇವೆ. ನಾವು ಕಾರ್ಮಿಕ ಸಂಘಟನೆಗಳು ಮತ್ತು ಪೌರ ನಿರ್ಮಾಣ ಕಾರ್ಮಿಕರ ಸಂಘಗಳಿಗೆ ಸಂವಹನ ನಡೆಸಿದ್ದೇವೆ. ಸೇವಾ ಸಿಂಧು ಮೂಲಕ ಇಲಾಖೆಗೆ ಬಂದಿರುವ ಅರ್ಜಿಗಳ ಆಧಾರದ ಮೇಲೆ ಬಸ್ ಪಾಸ್ ವಿತರಿಸುತ್ತಿದ್ದೇವೆ ಎಂದು ಹುಬ್ಬಳ್ಳಿಯ ಎನ್‌ಡಬ್ಲ್ಯುಕೆಆರ್‌ಟಿಸಿ ಎಂಡಿ ಭರತ್ ಎಸ್ ಹೇಳಿದ್ದಾರೆ.

1 ಲಕ್ಷ ಜನರಿಗೆ ಬಸ್ ಪಾಸ್ ನೀಡಿದ ನಂತರ ಸರ್ಕಾರ ಅದನ್ನು ನಿಲ್ಲಿಸಿತು. ಇತರ ದೊಡ್ಡ ಕೈಗಾರಿಕೆಗಳ ಅನೇಕರು ಉಚಿತ ಬಸ್ ಪಾಸ್‌ಗಳನ್ನು ಪಡೆಯಲು ಕಾರ್ಮಿಕ ಇಲಾಖೆಯಿಂದ ನಕಲಿ ಕಾರ್ಡ್‌ಗಳನ್ನು ಬಳಸುತ್ತಾರೆ ಎಂದು ಕರ್ನಾಟಕ ರಾಜ್ಯ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದ್ದಾರೆ.

ರಾಜ್ಯವು ಪಾಸ್‌ಗಳನ್ನು ವಿತರಿಸಲು ಪ್ರಾರಂಭಿಸಬೇಕು. ನಿಜವಾದ ಕಾರ್ಮಿಕರು ಇವುಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಕಾರ್ಮಿಕ ಇಲಾಖೆಯ ಮೂಲಗಳ ಪ್ರಕಾರ, ಪ್ರತಿಕ್ರಿಯೆಯನ್ನು ವಿಶ್ಲೇಷಿಸಲು ಕೇವಲ 1 ಲಕ್ಷ ಪಾಸ್‌ಗಳನ್ನು ನೀಡಲು ಮಂಡಳಿಯು ಅನುಮೋದನೆ ನೀಡಿದೆ. ಮಂಡಳಿಯಿಂದ ಅನುಮೋದನೆಯ ನಂತರ ವಿತರಣೆಯು ಮತ್ತೆ ಪ್ರಾರಂಭವಾಗುತ್ತದೆ ಎಂದು ಮೂಲಗಳು ಹೇಳಿವೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್