ಭೂ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವಾಗ ಅಧಿಕಾರಿಗಳು ಎಡವಟ್ಟು: ರೈತರ ಪರದಾಟ

ಸರಕಾರಿ ನೌಕರರು ಮಾಡುವ ಕೆಲಸಗಳು ಒಮ್ಮೊಮ್ಮೆ ಎಂಥವರನ್ನೂ ಕೂಡ ಫಜೀತಿಗೆ ಬೀಳಿಸಿ ಬಿಡುತ್ತವೆ. ಅದರಲ್ಲೂ ಭೂಮಿಯ ವಿಚಾರಕ್ಕೆ ಕಂದಾಯ ಇಲಾಖೆಯಲ್ಲಿ ಮಾಡುವ ನಿರ್ಲಕ್ಷತನದಿಂದಾಗಿ ರೈತರು ನಿತ್ಯವೂ ಕಷ್ಟ ಅನುಭವಿಸಬೇಕಾಗಿ ಬರುತ್ತದೆ.

ಭೂ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವಾಗ ಅಧಿಕಾರಿಗಳು ಎಡವಟ್ಟು: ರೈತರ ಪರದಾಟ
ನೊಂದ ರೈತರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 19, 2022 | 1:03 PM

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ, ಕಲ್ಲೆ ಸೇರಿದಂತೆ ವಿವಿಧ ಗ್ರಾಮಗಳ ರೈತರು ತಮ್ಮ ಪೂರ್ವಜರಿಂದ ಬಂದಿರುವ ಭೂಮಿಯಲ್ಲಿ ಕೃಷಿ ಮಾಡುತ್ತಾ ಬಂದಿದ್ದಾರೆ. ಪೂರ್ವಜರಿಂದ ಬಂದಿದ್ದ ಭೂಮಿಯ ದಾಖಲೆಗಳಲ್ಲಿ ಇದೇ ರೈತರ ಹೆಸರುಗಳು ಇದ್ದವು. ಆದರೆ ಕೆಲ ವರ್ಷಗಳ ಹಿಂದೆ ರಾಜ್ಯದಲ್ಲಿ ಎಲ್ಲ ಭೂ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವಾಗ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಸುಮಾರು 120 ರೈತರ ನೂರಾರು ಎಕರೆ ಭೂಮಿಯ ಪಹಣಿಯ ಜಮೀನಿನ ಮಾಲಿಕತ್ವದ ಕಾಲಂನಲ್ಲಿ ಸರಕಾರ ಎಂದು ನಮೂದಾಗಿ ಬಿಟ್ಟಿದೆ. ಹೀಗೆ ನಮೂದಾಗಿ ಎಷ್ಟೋ ವರ್ಷಗಳ ಬಳಿಕ ಈ ವಿಚಾರ ರೈತರ ಗಮನಕ್ಕೆ ಬಂದಿದೆ. ಯಾರೋ ಒಬ್ಬ ರೈತ ತಮ್ಮ ಭೂಮಿಯನ್ನು ಮಾರಾಟ ಮಾಡಲು ಹೋದಾಗ ಪಹಣಿಯಲ್ಲಿ ಸರಕಾರಕ್ಕೆ ಸೇರಿದ ಜಮೀನು ಅಂತಾ ನಮೂದಾಗಿದ್ದು ಗೊತ್ತಾಗಿದೆ. ಕೂಡಲೇ ಈ ವಿಚಾರ ಎಲ್ಲ ರೈತರಿಗೆ ಗೊತ್ತಾಗಿ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಇದೆಲ್ಲಾ ಹಲವಾರು ವರ್ಷಗಳೇ ಕಳೆದರೂ ಇದುವರೆಗೂ ರೈತರಿಗೆ ನ್ಯಾಯ ಸಿಕ್ಕಿಲ್ಲ.

ಕೆಲ ವರ್ಷಗಳ ಹಿಂದೆ ಎಲ್ಲ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡುವಾಗ ಮಾಲಿಕರ ಹೆಸರನ್ನು ನಮೂದಿಸದೇ ಸರಕಾರ ಅಂತಾ ನಮೂದಿಸಿದ್ದೇ ಈ ಸಮಸ್ಯೆಗೆ ಕಾರಣವಾಗಿದೆ. ಇದರ ಪರಿಣಾಮ ಕಳೆದ ಹತ್ತು ವರ್ಷಗಳಿಂದ ರೈತರಿಗೆ ಆಗುತ್ತಿದೆ. ಪಹಣಿಯಲ್ಲಿ ರೈತರ ಹೆಸರು ಇಲ್ಲದ್ದಕ್ಕೆ ಇವರಿಗೆ ಬೆಳೆ ಪರಿಹಾರ, ಬೆಳೆ ವಿಮೆ ಸೇರಿದಂತೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಇನ್ನು ಬ್ಯಾಂಕುಗಳಿಗೆ ಹೋಗಿ ಬೆಳೆ ಸಾಲ ತೆಗೆದುಕೊಳ್ಳೋಣ ಅಂದರೆ ಅಲ್ಲಿಯೂ ಸಾಲ ಸಿಗುತ್ತಿಲ್ಲ. ಇದರಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಇನ್ನು ಆಪತ್ಕಾಲಕ್ಕೆ ಹೊಲವನ್ನು ಮಾರಾಟ ಮಾಡಬೇಕೆಂದರೆ ಆಗದ ಪರಿಸ್ಥಿತಿ ರೈತರದ್ದಾಗಿದೆ. ಈ ಕುರಿತು ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ರೈತರು ಹೋಗಿ ತಹಶೀಲ್ದಾರ್ ಕಚೇರಿ ಮುಂದೆ ನಿಲ್ಲುವುದಕ್ಕೂ ಆಗುತ್ತಿಲ್ಲ. ಇದರಿಂದಾಗಿ ರೈತರು ಮುಂದೆ ಏನು ಮಾಡಬೇಕು ಎಂದು ಗೊತ್ತಾಗದೆ ಪರದಾಡುತ್ತಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಕೇಳಿದರೆ, ಈ ಸಮಸ್ಯೆ ಬಗ್ಗೆ ಇದೀಗ ನನಗೆ ಗೊತ್ತಾಗಿದೆ. ಕೂಡಲೇ ಎಲ್ಲ ಸರ್ವೆ ಮಾಡಿ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಒಂದು ವಾರದಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಯಾರೋ ಮಾಡುವ ತಪ್ಪಿಗೆ ಇಲ್ಲಿನ ರೈತರು ಪರದಾಡುವಂತಾಗಿದೆ. ಆದಷ್ಟು ಬೇಗ ಜಿಲ್ಲಾಡಳಿತ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕಾಗಿದೆ.

ವರದಿ: ನರಸಿಂಹಮೂರ್ತಿ ಪ್ಯಾಟಿ ಟಿವಿ9, ಧಾರವಾಡ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?