ಹಳೇ ಹುಬ್ಬಳ್ಳಿ ಗಲಭೆ ಕೇಸ್​: ಮೂವರನ್ನ ಹೊರತುಪಡಿಸಿ 105 ಜನರಿಗೆ ಜಾಮೀನು ಮಂಜೂರು

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು‌ ಕೋಮುಗಳ ನಡುವೆ ಗಲಾಟೆಯಾಗಿತ್ತು.

ಹಳೇ ಹುಬ್ಬಳ್ಳಿ ಗಲಭೆ ಕೇಸ್​: ಮೂವರನ್ನ ಹೊರತುಪಡಿಸಿ 105 ಜನರಿಗೆ ಜಾಮೀನು ಮಂಜೂರು
ಹಳೇ ಹುಬ್ಬಳ್ಳಿ ಗಲಭೆ (ಸಂಗ್ರಹ ಚಿತ್ರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 16, 2024 | 6:48 PM

ಹುಬ್ಬಳ್ಳಿ, ಫೆಬ್ರವರಿ 16: ಹಳೇ ಹುಬ್ಬಳ್ಳಿ (Hubballi) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು‌ ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ ಕಲ್ಲು ಎಸೆದಿದ್ದರು. ಅಲ್ಲದೇ ಪೊಲೀಸ್ ಠಾಣೆ ಮುಂಭಾಗದಲ್ಲಿ ಬಂದು ಗಲಾಟೆ ಮಾಡಿದ್ದರು. ಪೊಲೀಸ್ ವಾಹನಗಳನ್ನ ಜಖಂ ಮಾಡಿದ್ದರು. ಏಪ್ರೀಲ್ 16-2022 ರಂದು ಡಿಜೆ ಹಳ್ಳಿ ಕೆಜಿ ಹಳ್ಳಿ ಮಾದರಿಯಲ್ಲಿ ಗಲಾಟೆ ನಡೆದಿತ್ತು. ಒಟ್ಟು 152 ಜನರ ಬಂಧನವಾಗಿತ್ತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು ದಾಖಲಾಗಿದ್ದವು.

ಇಂದು 105 ಜನ ಯುವಕರಿಗೆ ಜೈಲಿನಿಂದ ಮುಕ್ತಿ ನೀಡಲಾಗಿದೆ. ಇನ್ನು ಮೂವರ ಪ್ರಕರಣ ಸುಪ್ರೀಂ ಕೋರ್ಟ್ ವಿಚಾರಣೆ ಹಂತದಲ್ಲಿರುವುದರಿಂದ ಜಾಮೀನು ವಿಳಂಬವಾಗಿದೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್: ಅಂಜುಮನ್ ಸಂಸ್ಥೆ ಚುನಾವಣೆಗೆ ಬಂಧಿತ ಆರೋಪಿಗಳ ಪೋಷಕರಿಂದ ಅಡ್ಡಿ, ಗಲಾಟೆ

ಗಲಾಟೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ವಾಹನ ಜಖಂ ಆಗಿದ್ದವು. ಗಲಭೆಕೋರರು ಪೊಲೀಸ್ ಇನ್ಸಪೆಕ್ಟರ್ ಸೇರಿ ಏಳು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಈ ಹಿಂದೆ 152 ಜನರಲ್ಲಿ ಕೆಲ ಬಾಲಾಪರಾಧಿಗಳು ಸೇರಿ 10 ಕ್ಕೂ ಹೆಚ್ಚು ಜನರಿಗೆ ಜಾಮೀನು ಮಂಜೂರ ಮಾಡಲಾಗಿತ್ತು. ನಂತರ ಅಂದರೆ ಕಳೆದ ಎರಡೂ ‌ತಿಂಗಳ ಹಿಂದೆ 35 ಜನರಿಗೆ ಸುಪ್ರೀಂ ಕೋರ್ಟ್​ನಲ್ಲಿ ಜಾಮೀನು ಮಂಜೂರಾಗಿತ್ತು. ಈಗ ಮೂವರನ್ನ ಹೊರತುಪಡಿಸಿ ಉಳಿದವರೆಲ್ಲರಿಗೂ ಜಾಮೀನು ನೀಡಲಾಗಿದೆ.

ಫೆ. 5 ರಂದು ಅಂಜುಮನ್ ಸಂಸ್ಥೆಯ ಚುನಾವಣೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮಕ್ಕಳಿಗಾಗಿ ಕುಟುಂಬಸ್ಥರು ಕಣ್ಣೀರು ಹಾಕಿದ್ದರು. ನಮ್ಮ‌ ಮಕ್ಕಳನ್ನ ಜೈಲಿನಿಂದ ಬಿಡುಗಡೆ ಮಾಡಿ ನಂತರ ನೀವು ಚುನಾವಣೆ ಮಾಡಿ. ನಮ್ಮ ಮಕ್ಕಳು ಜೈಲಿನಲ್ಲಿದ್ದಾರೆ. ಈ ಸಮಯದಲ್ಲಿ ಚುನಾವಣೆ ಬೇಡ ಎಂದು ಮುಸ್ಲಿಂ ಸಮುದಾಯದ ಮುಖಂಡರನ್ನ ಪೋಷಕರು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್: ಶ್ರೀಕಾಂತ್​ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು, ಬಿಡುಗಡೆ ಅನುಮಾನ

ಬಂಧಿತರನ್ನು ಜೈಲಿನಿಂದ ಬಿಡುಗಡೆಗೊಳಿಸುವ ಜವಾಬ್ದಾರಿಯನ್ನು ಅಂಜುಮನ್ ಸಂಸ್ಥೆ ಹೊತ್ತುಕೊಂಡಿದೆ. 152 ಬಂಧಿತರ ಪೈಕಿ 44 ಮಂದಿಗೆ ಈಗಾಗಲೇ ಜಾಮೀನು ಕೊಡಿಸಿದೆ. ಇನ್ನೂ 108 ಮಂದಿ ಜೈಲಿನಲ್ಲಿದ್ದು, ಇವರನ್ನು ಬಿಡುಗಡೆಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದರು.

ಹಳೆ ಹುಬ್ಬಳ್ಳಿಯ ಪತೇಶಾ ವಲಿ ದರ್ಗಾದಲ್ಲಿ ಪೂಜೆ 

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಹಿನ್ನೆಲೆ ಹಳೆ ಹುಬ್ಬಳ್ಳಿಯ ಪತೇಶಾ ವಲಿ ದರ್ಗಾದಲ್ಲಿ ಮಾಜಿ ಸಚಿವ ಎಎಂ ಹಿಂಡಸಗೇರಿ ನೇತೃತ್ವದಲ್ಲಿ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮುಸ್ಲಿಂ ಬಾಂಧವರು ದರ್ಗಾದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರು, ಎಐಎಂಐಎಂ ಪಾಲಿಕೆ ಸದಸ್ಯ ನಜೀರ್ ಅಹ್ಮದ್ ಹೊನ್ನಾಳ್ ಮತ್ತಿತರರು ಭಾಗಿ ಆಗಿದ್ದರು.

ನ್ಯಾಯಾಲಯದಿಂದ ಕೊನೆಗೂ ನಮಗೆ ನ್ಯಾಯ ಸಿಕ್ಕಿದೆ. ಹಿಂದಿನ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡಿದ್ದು, ರಾಷ್ಟ್ರ ದ್ರೋಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಇದೀಗ ಹೈಕೋರ್ಟ್​ನಿಂದ 107 ಜನರಿಗೆ ಬೇಲ್ ಸಿಕ್ಕಿದೆ. ಬೇಲ್ ಸಿಕ್ಕಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Fri, 16 February 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್