ಧಾರವಾಡ: ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ; ಅಕ್ಕಾಬಿಕ್ಕಿಯಾದ ಅಧಿಕಾರಿಗಳು
ಧಾರವಾಡದ ಮಿನಿ ವಿಧಾನಸೌಧದಲ್ಲಿರುವ ಹತ್ತಕ್ಕೂ ಹೆಚ್ಚು ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಯಾವುದೇ ನೇಮಕಾತಿ ಆದೇಶವಿಲ್ಲದೆಯೇ ಅನಧೀಕೃತವಾಗಿ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಿಕ್ಕಿಬಿದ್ದರು.
ಧಾರವಾಡ: ಇಂದು (ಸೆ.04) ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ (Lokayukta) ಪೊಲೀಸರು ಫೀಲ್ಡಿಗೆ ಇಳಿದ್ದಿದ್ದು ಮಿನಿ ವಿಧಾನಸೌಧದಲ್ಲಿರುವ (Vidhansoudha) ಹಿಂದುಳಿದ ವರ್ಗಗಳ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದರು. ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ದಾಳಿಗೆ ಅಧಿಕಾರಿಗಳು ಬೆಚ್ಚಿಬಿದ್ದಿದ್ದರು. ಕಚೇರಿ ಸಮಯವಾದರೂ ಕಚೇರಿಗೆ ಬರದ ಅನೇಕ ಅಧಿಕಾರಿಗಳು, ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ತರಾಟೆಗೆ ತೆಗೆದುಕೊಂಡರು.
ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಾಜರಿ ಪುಸ್ತಕದಲ್ಲಿ ಸಿಬ್ಬಂದಿ ತಿಂಗಳು ಕಳೆದರೂ ಸಹಿ ಮಾಡದೆ ಇರುವುದು ಪತ್ತೆಯಾಗಿದೆ. ಇನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ಸಹಾಯಕ ಆಯುಕ್ತರ ಕಚೇರಿ ಮೇಲೆ ದಾಳಿ ಮಾಡಿದ ವೇಳೆ ಯಾವುದೆ ಆದೇಶವಿಲ್ಲದೆಯೇ ಅನಧೀಕೃತವಾಗಿ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಿಕ್ಕಿಬಿದ್ದರು.
ಇದನ್ನೂ ಓದಿ: 12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್, ರೆವಿನ್ಯೂ ಇನ್ಸ್ಪೆಕ್ಟರ್
ಈ ವೇಳೆ ಅಧಿಕಾರಿಗಳು ನೀವು ಏಕೆ ಸರಕಾರಿ ಕಚೇರಿಯಲ್ಲಿ ಕೆಲಸ ಮಾಡುವುದು ಎಂದು ಪ್ರಶ್ನಿಸಿದಾಗ, ಸಿಬ್ಬಂದಿ ಉತ್ತರಿಸಲಾಗದೇ ಪರದಾಡಿದರು. ದಾಳಿ ವೇಳೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ಪಡಿತರ ಚೀಟಿ ಸೇರಿದಂತೆ ಅನೇಕ ಸಮಸ್ಯೆಗಳ ದೂರು ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ