ಧಾರವಾಡ: ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ; ಅಕ್ಕಾಬಿಕ್ಕಿಯಾದ ಅಧಿಕಾರಿಗಳು

ಧಾರವಾಡದ ಮಿನಿ ವಿಧಾನಸೌಧದಲ್ಲಿರುವ ಹತ್ತಕ್ಕೂ ಹೆಚ್ಚು ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದರು. ಈ ವೇಳೆ ಯಾವುದೇ ನೇಮಕಾತಿ ಆದೇಶವಿಲ್ಲದೆಯೇ ಅನಧೀಕೃತವಾಗಿ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಿಕ್ಕಿಬಿದ್ದರು.

ಧಾರವಾಡ: ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ; ಅಕ್ಕಾಬಿಕ್ಕಿಯಾದ ಅಧಿಕಾರಿಗಳು
ಲೋಕಾಯುಕ್ತ ದಾಳಿ
Edited By: ವಿವೇಕ ಬಿರಾದಾರ

Updated on: Sep 04, 2023 | 12:49 PM

ಧಾರವಾಡ: ಇಂದು (ಸೆ.04) ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ (Lokayukta) ಪೊಲೀಸರು ಫೀಲ್ಡಿಗೆ ಇಳಿದ್ದಿದ್ದು ಮಿನಿ ವಿಧಾನಸೌಧದಲ್ಲಿರುವ (Vidhansoudha) ಹಿಂದುಳಿದ ವರ್ಗಗಳ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದರು. ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ದಾಳಿಗೆ ಅಧಿಕಾರಿಗಳು ಬೆಚ್ಚಿಬಿದ್ದಿದ್ದರು. ಕಚೇರಿ ಸಮಯವಾದರೂ ಕಚೇರಿಗೆ ಬರದ ಅನೇಕ ಅಧಿಕಾರಿಗಳು, ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ತರಾಟೆಗೆ ತೆಗೆದುಕೊಂಡರು.

ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಾಜರಿ ಪುಸ್ತಕದಲ್ಲಿ ಸಿಬ್ಬಂದಿ ತಿಂಗಳು ಕಳೆದರೂ ಸಹಿ ಮಾಡದೆ ಇರುವುದು ಪತ್ತೆಯಾಗಿದೆ. ಇನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ಸಹಾಯಕ ಆಯುಕ್ತರ ಕಚೇರಿ ಮೇಲೆ ದಾಳಿ ಮಾಡಿದ ವೇಳೆ ಯಾವುದೆ ಆದೇಶವಿಲ್ಲದೆಯೇ ಅನಧೀಕೃತವಾಗಿ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಿಕ್ಕಿಬಿದ್ದರು.

ಇದನ್ನೂ ಓದಿ: 12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್

ಈ ವೇಳೆ ಅಧಿಕಾರಿಗಳು ನೀವು ಏಕೆ ಸರಕಾರಿ ಕಚೇರಿಯಲ್ಲಿ ಕೆಲಸ ಮಾಡುವುದು ಎಂದು ಪ್ರಶ್ನಿಸಿದಾಗ, ಸಿಬ್ಬಂದಿ ಉತ್ತರಿಸಲಾಗದೇ ಪರದಾಡಿದರು. ದಾಳಿ ವೇಳೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ಪಡಿತರ ಚೀಟಿ ಸೇರಿದಂತೆ ಅನೇಕ ಸಮಸ್ಯೆಗಳ ದೂರು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us