AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಣಂ ವಿಶೇಷ: ಹುಬ್ಬಳ್ಳಿ-ಬೆಂಗಳೂರು-ಕೇರಳ ಮಧ್ಯೆ ವಿಶೇಷ ರೈಲು

ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರ ಹೆಚ್ಚಾಗಲಿದೆ. ಹೀಗಾಗಿ ಹುಬ್ಬಳ್ಳಿ-ಬೆಂಗಳೂರು-ಕೇರಳ ನಡುವೆ ನೈಋತ್ಯ ರೈಲ್ವೆ ವಲಯ ವಿಶೇಷ ರೈಲು ಓಡಿಸಲಿದೆ. ಹಾಗಿದ್ದರೆ ರೈಲು ಯಾವ ದಿನಾಂಕ, ಸಮಯದಲ್ಲಿ ಸಂಚರಿಸಲಿದೆ? ಇಲ್ಲಿದೆ ಮಾಹಿತಿ.

ಓಣಂ ವಿಶೇಷ: ಹುಬ್ಬಳ್ಳಿ-ಬೆಂಗಳೂರು-ಕೇರಳ ಮಧ್ಯೆ ವಿಶೇಷ ರೈಲು
ಹುಬ್ಬಳ್ಳಿ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on: Sep 11, 2024 | 10:04 AM

Share

ಹುಬ್ಬಳ್ಳಿ, ಸೆಪ್ಟೆಂಬರ್​ 11: ಓಣಂ ಹಬ್ಬದ (Onam Festival) ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ನಿಲ್ದಾಣಗಳ ನಡುವೆ ವಿಶೇಷ ರೈಲು ಓಡಿಸಲಿದೆ. ವಿಶೇಷ ರೈಲು ಸಂಚರಿಸುವ ಸಮಯ, ದಿನಾಂಕ ಇಲ್ಲಿದೆ.

ರೈಲುಗಳ ಸಂಖ್ಯೆ 07333/07334 ಎಸ್ಎಸ್ಎಸ್ ಹುಬ್ಬಳ್ಳಿ-ಕೊಚುವೇಲಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್​​ಪ್ರೆಸ್ ಸಂಚರಲಿದೆ.

  • ರೈಲು ಸಂಖ್ಯೆ 07333 ಸೆಪ್ಟೆಂಬರ್ 13 ರಂದು ಬೆಳಿಗ್ಗೆ 06:55ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಕೊಚುವೇಲಿ ತಲುಪಲಿದೆ.
  • ರೈಲು ಸಂಖ್ಯೆ 07334 ಸೆಪ್ಟೆಂಬರ್ 14 ರಂದು ಮಧ್ಯಾಹ್ನ 12:50ಕ್ಕೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50ಕ್ಕೆ ಎಸ್‌ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ತಲುಪಲಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ಎಸ್‌ಎಂಎಂ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪೂರು, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗಣ್ಣೂ‌ರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ: ದಸರಾ ಹಬ್ಬದ ನಿಮಿತ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು

ಈ ವಿಶೇಷ ರೈಲಿನಲ್ಲಿ ಎರಡು ಎಸಿ-2, ನಾಲ್ಕು ಎಸಿ -3, ಹತ್ತು ಸ್ವೀಪರ್ ಕ್ಲಾಸ್, ಎರಡು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್‌ಆರ್/ ಡಿ ಬೋಗಿಗಳು ಸೇರಿದಂತೆ ಒಟ್ಟು 20 ಬೋಗಿಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ