ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ
ದೆಹಲಿಯಲ್ಲಿ ಬಂಧಿತರಾಗಿರುವ ಮೂವರು ಐಸಿಸ್ ಉಗ್ರರ ಪೈಕಿ ಒಬ್ಬನಿಗೆ ಧಾರವಾಡದ ನಂಟುImage Credit source: PTI
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on:Oct 03, 2023 | 11:57 AM

ಧಾರವಾಡ, ಅ.3: ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಐಸಿಸ್‌ ಜಾಲವನ್ನು ಹತ್ತಿಕ್ಕುವ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಮೂವರು ಶಂಕಿತ ಉಗ್ರರ ಪೈಕಿ ಓರ್ವನಿಗೆ ಧಾರವಾಡದ (Dharwad) ನಂಟು ಹೊಂದಿದ್ದು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಮಾಹಿತಿ ತಿಳಿದುಬಂದಿದೆ. ಸದ್ಯ ದೆಹಲಿ ಪೊಲೀಸರ ಮಾಹಿತಿಯಿಂದ ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ನಿನ್ನೆ ಮೂವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದ್ದು, ಆ ಪೈಕಿ ಪ್ರಮುಖ ಶಹನವಾಜ್‌ಗೆ ಧಾರವಾಡದ ನಂಟು ಹೊಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ತರಬೇತಿ ಆಗಿರುವ ಬಗ್ಗೆ ದೆಹಲಿ ಪೊಲೀಸ್ ವಿಶೇಷ ದಳದಿಂದಲೇ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹು-ಧಾ ಪೊಲೀಸರಿಗೆ ಅಧಿಕೃತ ಮಾಹಿತಿ ಬಂದಿಲ್ಲ.

ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ; ಇವರಲ್ಲಿಬ್ಬರು ಎಂಜಿನಿಯರ್, ಒಬ್ಬ ಪಿಎಚ್‌ಡಿ: ಪೊಲೀಸ್

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಮತ್ತು ಎಸ್​ಪಿಗೆ ಈ ಬಗ್ಗೆ ಮಾಹಿತಿ ಇದುವರೆಗೆ ತಿಳಿದಬಂದಿಲ್ಲ. ಹತ್ತು ವರ್ಷದ ಹಿಂದೆಯೂ ಶಂಕಿತ ಉಗ್ರರ ತರಬೇತಿ ತಾಣವಾಗಿದ್ದು, ಸಿಮಿ ಸಂಘಟನೆಯ ಶಂಕಿತ ಉಗ್ರರರಿಗೆ ಧಾರವಾಡ ಹೊರವಲಯದ ಅರಣ್ಯದಲ್ಲಿ ತರಬೇತಿ ನೀಡಲಾಗಿತ್ತು. ಇದೀಗ ಶಂಕಿತ ಐಸಿಸ್ ಉಗ್ರರಿಂದಲೂ ಇಲ್ಲೇ ತರಬೇತಿ ನೀಡಲಾಗಿದೆ.

ಆ ಮೂಲಕ ಹುಬ್ಬಳ್ಳಿ ಧಾರವಾಡ ಉಗ್ರ ಚಟುವಟಿಕೆಗಳ ತರಬೇತಿ ತಾಣವಾಗುತ್ತಿದೆಯಾ ಎಂಬ ಆತಂಕ ಸೃಷ್ಟಿಯಾಗಿದೆ. ಸದ್ಯ ದೆಹಲಿ ಪೊಲೀಸರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಭಾಗದ ಜನರಲ್ಲಿ ಆತಂಕದ ಆರಂಭವಾಗಿದೆ.

ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿ ಹು-ಧಾ ಪೊಲೀಸರು

ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಹುಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ. ನಾವು ನಿನ್ನೆ ನ್ಯೂಸ್ ಅಲ್ಲಿ ನೋಡಿದ ಮೇಲೆ ನಾವು ದೆಹಲಿ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ. ನ್ಯೂಸ್​ನಲ್ಲಿ ಯಾವದೂ ನಿಖರವಾಗಿ ಸ್ಥಳದ ಮಾಹಿತಿ ನೀಡಿಲ್ಲ. ಆದರೆ ಅಧಿಕೃತವಾಗಿ‌ ಇಲ್ಲಿ ತರಬೇತಿ ಅಥವಾ ಅವರು ಇಲ್ಲಿಯವರು ಅನ್ನೋ ಮಾಹಿತಿ ಇಲ್ಲ. ನಮ್ಮ ಜೊತೆ ಪೊಲೀಸರು ಯಾವದೂ ಮಾಹಿತಿ ಹಂಚಿಕೊಂಡಿಲ್ಲ ಎಂದಿದ್ದಾರೆ.

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದ ಕುರಿತು ಸರ್ಕಾರ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಅದನ್ನು ನಾವು ಮಾತಾಡಲು ಆಗಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 3 October 23

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ