ಗ್ರಾಮೀಣ ಮಹಿಳಾ ಸಂಘಗಳ ಉತ್ಪನ್ನಗಳಿಗೆ ಆನ್‌ಲೈನ್ ಮಾರ್ಕೆಟ್ : ಸಂಜೀವಿನಿ ಪೋರ್ಟಲ್ ಮೂಲಕ ಉತ್ಪನ್ನಗಳ ಮಾರಾಟ

ಈ ಬಗ್ಗೆ ಟಿವಿ-9 ಡಿಜಿಟಲ್ ಜೊತೆ ಮಾತನಾಡಿದ ಜಿಪಂ ಉಪಕಾರ್ಯದರ್ಶಿ ಬಿ.ಎಸ್‌. ಮೂಗನೂರಮಠ, ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಂಘಗಳು ತಮ್ಮದೇ ಬ್ರಾಂಡ್‌ ಹೆಸರಿನಲ್ಲಿ ಹತ್ತು ಹಲವು ವಸ್ತುಗಳನ್ನು ಉತ್ಪಾದಿಸುತ್ತಿವೆ. ಆದರೆ, ಸರಿಯಾದ ಮಾರುಕಟ್ಟೆ ಇಲ್ಲದೇ ತೊಂದರೆಗೆ ಒಳಗಾಗಿದ್ದವು. ಇದೀಗ ಉತ್ಪಾದಕರಿಗೂ ಹಾಗೂ ಗ್ರಾಹಕರಿಗೂ ಅನುಕೂಲವಾಗುವ ಸಂಜೀವಿನಿ ಪೋರ್ಟಲ್‌ ಸಿದ್ಧವಾಗುತ್ತಿದೆ ಎಂದರು.

ಗ್ರಾಮೀಣ ಮಹಿಳಾ ಸಂಘಗಳ ಉತ್ಪನ್ನಗಳಿಗೆ ಆನ್‌ಲೈನ್ ಮಾರ್ಕೆಟ್ : ಸಂಜೀವಿನಿ ಪೋರ್ಟಲ್ ಮೂಲಕ ಉತ್ಪನ್ನಗಳ ಮಾರಾಟ
ಗ್ರಾಮೀಣ ಮಹಿಳಾ ಸಂಘಗಳ ಉತ್ಪನ್ನಗಳಿಗೆ ಆನ್‌ಲೈನ್ ಮಾರ್ಕೆಟ್
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on: Oct 06, 2023 | 2:34 PM

ಇಷ್ಟು ದಿನಗಳ ಕಾಲ ತಾವು ಸಿದ್ಧಪಡಿಸಿದ ಉತ್ಪನ್ನಗಳನ್ನು ಸಭೆ-ಸಮಾರಂಭ, ಜಾತ್ರೆ ಹಾಗೂ ವಿವಿಧ ವಸ್ತು ಪ್ರದರ್ಶನಗಳಲ್ಲಿ ಮಾರಾಟ ಮಾಡುತ್ತಿದ್ದ ಸ್ವಾವಲಂಬಿ ಮಹಿಳೆಯರು ಇನ್ಮು ಮುಂದೆ ಆನ‌್ಲೈನ್‌ ಮೂಲಕ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಿದ್ದಾರೆ. ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರು ಮಾಡಿದ ಉತ್ಪನ್ನಗಳನ್ನು ಮಾರಾಟ ಮಾಡಲು (Online Market, Rural Women) ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾಗಿರುವ ‘ಸಂಜೀವಿನಿ’ ಮೂಲಕವೇ ಒಂದು ಆನ್‌ಲೈನ್‌ ಪೋರ್ಟಲ್‌ (Sanjeevini portal) ಸ್ಥಾಪನೆಯಾಗುತ್ತಿದೆ. ಆನ್‌ಲೈನ್ ಮಾರುಕಟ್ಟೆ ಮೂಲಕ ತಮ್ಮ ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿ ಮಾರಾಟ ಮಾಡಬಹುದಾಗಿದೆ.

ಅಷ್ಟಕ್ಕೂ ಏನಿದು ಸಂಜೀವಿನಿ..?

ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸಲು ಹಾಗೂ ಬಡತನ ನಿರ್ಮೂಲನೆ ಮಾಡಿ ಮಹಿಳೆಯರಿಗೆ ಸ್ವಾವಲಂಬನೆ ಜೀವನ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಡಿ ಸಂಜೀವಿನಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅನ್ವಯ ರಾಜ್ಯದ ಪ್ರತಿ ಜಿಲ್ಲೆಗಳ, ಪ್ರತಿ ಗ್ರಾಮಗಳಲ್ಲೂ ಸ್ವ-ಸಹಾಯ ಗುಂಪುಗಳನ್ನು ರಚಿಸಿಕೊಂಡು ಅವರಿಗೆ ಔದ್ಯೋಗಿಕ ತರಬೇತಿ ನೀಡಿ ಅವರು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಕೂಡ ಒದಗಿಸಿಕೊಡುವುದು ಸಂಜೀವಿನಿ ಯೋಜನೆ ಉದ್ದೇಶ.

ಇಷ್ಟು ದಿನಗಳ ಕಾಲ ಅಲ್ಲಲ್ಲಿ ಮಾರುಕಟ್ಟೆ ಸೌಲಭ್ಯ ಇದ್ದರೂ ಅಷ್ಟೊಂದು ಪರಿಣಾಮಕಾರಿ ಆಗಿರಲಿಲ್ಲ. ಇದೀಗ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮೂಲಕ ಸಂಜೀವಿನಿ ಪೋರ್ಟಲ್‌ ಸ್ಥಾಪಿಸಲಾಗುತ್ತಿದ್ದು ಕೆಲವೇ ದಿನಗಳಲ್ಲಿ ಆನ್‌ಲೈನ್ ಮೂಲಕ ತಮ್ಮ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡಬಹುದಾಗಿದೆ.

ಆರ್ಥಿಕ ಸಬಲತೆಗಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪನೆಯಾಗಿರುವ ಸ್ವ-ಸಹಾಯ ಸಂಘಗಳ ಮಹಿಳೆಯರು ಸಿದ್ಧಪಡಿಸಿದ ಕರಕುಶಲ ವಸ್ತುಗಳು, ಕಸೂತಿ ವಸ್ತ್ರಗಳು, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬಿದಿರಿನ ಬುಟ್ಟಿ, ಗೊಂಬೆ, ಪರಿಶುದ್ಧ ಗಾಣದ ಎಣ್ಣೆ, ವಸ್ತ್ರವಿನ್ಯಾಸಗಳು ಸೇರಿದಂತೆ ಜನೋಪಯೋಗಿ ಉತ್ಪನ್ನಗಳನ್ನು ಈ ಮೊದಲು ತಾತ್ಕಾಲಿಕವಾಗಿ ಸೃಷ್ಟಿಯಾದ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು. ಇದೀಗ ಅವರಿಗೆ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಉಚಿತವಾಗಿ ತಮ್ಮ ಉತ್ಪನ್ನಗಳು ಮಾರಾಟ ಮಾಡಬಹುದು. ಪೋರ್ಟಲ್‌ ಅಂತಿಮ ಹಂತದಲ್ಲಿದ್ದು ಸದ್ಯದಲ್ಲಿಯೇ ಕಾರ್ಯೋನ್ಮುಖವಾಗಲಿದೆ.

ಈ ಕುರಿತು ಟಿವಿ-9 ಡಿಜಿಟಲ್‌ಗೆ ಮಾಹಿತಿ ನೀಡಿದ ಸಂಜೀವಿನಿ ಯೋಜನೆ ಜಿಲ್ಲಾ ವ್ಯವಸ್ಥಾಪಕ ವಿನೋದ ಕಂಠಿ, ಧಾರವಾಡ ಜಿಲ್ಲೆಯಲ್ಲಿ 8261 ಸಂಘಗಳಿದ್ದು ಈ ಪೈಕಿ ಇತ್ತೀಚೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟದಲ್ಲಿ 100ಕ್ಕೂ ಹೆಚ್ಚು ಸಂಘಗಳು ಪ್ರಾಯೋಗಿಕವಾಗಿ ತಮ್ಮ ಉತ್ನನ್ನಗಳನ್ನು ತಂದಿದ್ದರು. ಅವುಗಳ ಮಾಹಿತಿ ಹಾಗೂ ಫೋಟೋ, ದರವನ್ನು ಪಡೆಯಲಾಗಿದ್ದು ಕೆಲವೇ ದಿನಗಳಲ್ಲಿ ಸಂಜೀವಿನಿ ಪೋರ್ಟಲ್‌ ಮೂಲಕ ಮಾರಾಟದ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ಸಂಘಗಳು ಬಲವರ್ಧನೆಗೊಳ್ಳಲಿವೆ ಎಂದು ಹೇಳಿದರು.

ಈ ಬಗ್ಗೆ ಟಿವಿ-9 ಡಿಜಿಟಲ್ ಜೊತೆ ಮಾತನಾಡಿದ ಜಿಪಂ ಉಪಕಾರ್ಯದರ್ಶಿ ಬಿ.ಎಸ್‌. ಮೂಗನೂರಮಠ, ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಂಘಗಳು ತಮ್ಮದೇ ಬ್ರಾಂಡ್‌ ಹೆಸರಿನಲ್ಲಿ ಹತ್ತು ಹಲವು ವಸ್ತುಗಳನ್ನು ಉತ್ಪಾದಿಸುತ್ತಿವೆ. ಆದರೆ, ಸರಿಯಾದ ಮಾರುಕಟ್ಟೆ ಇಲ್ಲದೇ ತೊಂದರೆಗೆ ಒಳಗಾಗಿದ್ದವು. ಇದೀಗ ಉತ್ಪಾದಕರಿಗೂ ಹಾಗೂ ಗ್ರಾಹಕರಿಗೂ ಅನುಕೂಲವಾಗುವ ಸಂಜೀವಿನಿ ಪೋರ್ಟಲ್‌ ಸಿದ್ಧವಾಗುತ್ತಿದ್ದು, ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿಶೋ ರೀತಿಯಲ್ಲಿ ಈ ಸಂಜೀವಿನಿ ಪೋರ್ಟಲ್‌ ಮೂಲಕ ಆನ್‌ಲೈನ್‌ ಮಾರುಕಟ್ಟೆ ಸೃಷ್ಟಿಸಲಾಗುತ್ತಿದೆ ಎನ್ನುತ್ತಾರೆ.

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್