ಶ್ರೀಕಾಂತ್ ಪೂಜಾರಿ ಮನೆಗೆ ವಿಪಕ್ಷ ನಾಯಕ ಭೇಟಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಆರ್​ ಅಶೋಕ್

1992ರ ಅಯೋಧ್ಯೆ ಹೋರಾಟದ ಹಿಂಸಾಚಾರ ಪ್ರಕರಣದಲ್ಲಿ 31 ವರ್ಷಗಳ ಬಳಿಕ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನ ಬಂಧಿಸಲಾಗಿದೆ. ಸದ್ಯ ಇಂದು ಹುಬ್ಬಳ್ಳಿಯ ಚನ್ನಪೇಟೆಯಲ್ಲಿರುವ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭೇಟಿ ಕುಟುಂಬಸ್ಥರಿಗೆ ಧೈರ್ಯ ತುಂಬಿದಿದ್ದಾರೆ. ಜ.‌9ರೊಳಗೆ ಶಹರ ಠಾಣೆ ಇನ್ಸ್​ಪೆಕ್ಟರ್ ಅಮಾನತಾಗಬೇಕು ಎಂದು ಆಗ್ರಹಿಸಿದ್ದಾರೆ.

Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 03, 2024 | 7:02 PM

ಹುಬ್ಬಳ್ಳಿ, ಜನವರಿ 03: 1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರ ಶ್ರೀಕಾಂತ್ ಪೂಜಾರಿ ಮನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಬುಧವಾರ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಚನ್ನಪೇಟೆಯಲ್ಲಿರುವ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದಿದ್ದಾರೆ. ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್

ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್​ ಜ.‌9ರೊಳಗೆ ಶಹರ ಠಾಣೆ ಇನ್ಸ್​ಪೆಕ್ಟರ್ ಅಮಾನತಾಗಬೇಕು. ಸಸ್ಪೆಂಡ್​ ಮಾಡದಿದ್ರೆ ಜ.9ಕ್ಕೆ ಮತ್ತೆ ಹುಬ್ಬಳ್ಳಿಗೆ ಬಂದು ದೊಡ್ಡ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧ್ವಜ ಮಾದರಿ ಹೋರಾಟ ಮಾಡುತ್ತೇವೆ. ಇಡಿ ರಾಜ್ಯಕ್ಕೆ ವ್ಯಾಪಿಸುವಂತೆ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾವಣ ಸಂಸ್ಕೃತಿಯವರು

ಶ್ರೀಕಾಂತ್ ಪೂಜಾರಿ ಸಮಾಜಘಾತುಕ ಅಂತಾ ಸಿಎಂ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾವಣ ಸಂಸ್ಕೃತಿಯವರು. ಸಮಾಜಘಾತುಕ ಪದ ಬಳಸಿದ್ದಾರೆ, ಸಿಎಂರನ್ನು ಇವತ್ತು ಒಪ್ಪಿದ್ದೇನೆ. ಹೆರಾಲ್ಡ್ ಹಗರಣದಲ್ಲಿ ಐದು ಸಾವಿರ ರೂ. ಕೋಟಿ ನುಂಗಿದ್ರಲ್ವಾ? ಜಾಮೀನಿನ ಮೇಲೆ ಇದ್ದೀರಲ್ವಾ?, ನಿಮಗೆ ರಾಮ ಕ್ಷಮಿಸುತ್ತಾನಾ? ದೇಶದ ಹಣ ಲೂಟಿ ಹೊಡೆದವರನ್ನು ಶ್ರೀರಾಮ ಕ್ಷಮಿಸುತ್ತಾನಾ? ಶ್ರೀಕಾಂತ್ ಬಡ ಆಟೋ ಡ್ರೈವರ್, ಈತನನ್ನು ರಾಮ ಕ್ಷಮಿಸಲ್ವಾ ಎಂದು ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬರಬಾರದಿತ್ತು: ಬಿಜೆಪಿ ವಿರುದ್ಧ ಸಿಎಂ ಕಿಡಿ

ಪ್ರತಿಭಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮ ಪ್ರತಿಭಟನೆಯ ಬಗ್ಗೆ ಮಾತನಾಡುವ ನೈತಿಕತೆ ಸಿಎಂಗೆ ಇಲ್ಲ. ಸಿದ್ದರಾಮಯ್ಯರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ತಿರುಗೇಟು

ಭಾರತ ಹಿಂದೂ ದೇಶವಲ್ಲವೆಂದು ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿ, ಹಾಗಾದ್ರೆ ಭಾರತ ಯಾವ ದೇಶ ಆಗಬೇಕೆಂದು ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ಸಿಗರು ದೇಶ ಒಡೆಯುವವರು, ಇವರಿಂದ ದೇಶ ಉಳಿಸಲು ಸಾಧ್ಯವಾ? ರಾಮಾಯಣವೇ ನಡೆದಿಲ್ಲ ಅಂದಿದ್ರು, ರಾಮನ ಬರ್ತ್‌ಸರ್ಟಿಫಿಕೇಟ್ ಕೇಳಿದ್ರು. ನಾವು ಅಲ್ಲಾ, ಯೇಸುವಿನ ಬರ್ತ್ ಸರ್ಟಿಫಿಕೇಟ್ ಕೇಳಿದ್ವಾ?

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

ನಾವು ಎಲ್ಲರನ್ನೂ ಗೌರವಿಸುತ್ತೇವೆ, ಭಾರತ ಹಿಂದೂ ರಾಷ್ಟ್ರ. ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ, ಯಾರಿಂದಲೂ ತಡೆಯಲೂ ಆಗಲ್ಲ ಎಂದಿದ್ದಾರೆ.

ನನ್ನ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ಕೊಟ್ಟಿದ್ದಾರೆ: ಶ್ರೀಕಾಂತ್ ಪತ್ನಿ ಅಂಬಿಕಾ

ಆರ್​.ಅಶೋಕ್​ ಭೇಟಿ ಬಳಿಕ ಶ್ರೀಕಾಂತ್ ಪತ್ನಿ ಅಂಬಿಕಾ ಹೇಳಿಕೆ ನೀಡಿದ್ದು, ನನ್ನ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಆರ್​.ಅಶೋಕ್​ ನನಗೆ ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್