ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಪ್ರಕ್ರಿಯೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ
ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭವಾಗುತ್ತದೆ. ಭತ್ತ ಖರೀದಿ ನೇರವಾಗಿ ಸರ್ಕಾರವೆ ಮಾಡಲಿದೆ. ಜತೆಗೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಭತ್ತ ಖರೀದಿ ಕೇಂದ್ರ ಆರಂಭಿಸಿ ಎಂಬ ಬೇಡಿಕೆ ಇತ್ತು. ಅದರಲ್ಲೂ ಭತ್ತ ಹೆಚ್ಚಾಗಿ ಬೆಳೆಯುವ ರಾಯಚೂರು, ಕೊಪ್ಪಳ ಭಾಗ ಸೇರಿದಂತೆ ರಾಜ್ಯದ ರೈತರು ಈ ಬಗ್ಗೆ ಪದೇ ಪದೇ ಮನವಿ ಮಾಡಿದ್ದರು. ಹೀಗಾಗಿಎಂಎಸ್.ಪಿ ದರಲ್ಲಿ ಭಕ್ತ ಖರೀದಿಸಲು ಸರ್ಕಾರದ ತೀರ್ಮಾನಿಸಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ತಿಳಿಸಲಾಗಿದೆ. ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭವಾಗುತ್ತದೆ. ಭತ್ತ ಖರೀದಿ ನೇರವಾಗಿ ಸರ್ಕಾರವೆ ಮಾಡಲಿದೆ. ಜತೆಗೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ದೀಪಾವಳಿ ಹಬ್ಬ ಆಚರಣೆಗೆ ಹುಬ್ಬಳ್ಳಿಗೆ ತೆರಳಿದ ಸಿಎಂ ಬೊಮ್ಮಾಯಿ ಇಂದು (ನವೆಂಬರ್ 3) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ತೆರಳಿದ್ದಾರೆ. ಇನ್ನು ಮೂರು ದಿನಗಳ ಕಾಲ ಸಿಎಂ ಹುಬ್ಬಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ದೀಪಾವಳಿ ಹಬ್ಬ ಆಚರಣೆಗೆ ಊರಿಗೆ ತೆರಳಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಸಿಎಂ ಹೊರಟಿದ್ದಾರೆ.
ಪ್ರತಿ ವರ್ಷ ಹುಬ್ಬಳ್ಳಿಯಲ್ಲೇ ದೀಪಾವಳಿ ಆಚರಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿ ವರ್ಷ ಹುಬ್ಬಳ್ಳಿಯಲ್ಲೇ ದೀಪಾವಳಿ ಆಚರಿಸುತ್ತೇವೆ. ಹೀಗಾಗಿ ಈ ಬಾರಿಯೂ ಹುಬ್ಬಳ್ಳಿಗೆ ಬಂದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ. ಬಳಿಕ ಮಾತನಾಡಿದ ಅವರು ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ನಿರ್ಧಾರ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಯ ಕೆಲಸವೇ ಅವರನ್ನು ಕಾಪಾಡಿದೆ: ಹಾನಗಲ್ ಹಿನ್ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Published On - 12:08 pm, Wed, 3 November 21