Pariksha Pe Charcha 2023: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಪ್ರಲ್ಹಾದ ಜೋಶಿ :ವಿದ್ಯಾರ್ಥಿಗಳಿಗೆ ಸಾಥ್ ನೀಡಿದ ಕೇಂದ್ರ ಸಚಿವರು

| Updated By: ಸಾಧು ಶ್ರೀನಾಥ್​

Updated on: Jan 27, 2023 | 2:08 PM

Pralhad Joshi: ಪ್ರಧಾನಿಗಳ ಕಾರ್ಯಕ್ರಮದ ನಂತರ ಸಭಾಭವನದಲ್ಲಿ ನೆರೆದಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಧಾನಿಗಳು ಬರೆದ ಎಕ್ಸಾಮ್ ವಾರಿಯರ್ಸ್ ಪುಸ್ತಕವನ್ನು ವಿತರಿಸಿದರು. ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಇದೇ ವೇಳೆ ಆಶಿಸಿದರು.

Pariksha Pe Charcha 2023: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಪ್ರಲ್ಹಾದ ಜೋಶಿ :ವಿದ್ಯಾರ್ಥಿಗಳಿಗೆ ಸಾಥ್ ನೀಡಿದ ಕೇಂದ್ರ ಸಚಿವರು
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಪ್ರಲ್ಹಾದ ಜೋಶಿ
Follow us on

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಯವರ (Narendra Modi) ನೇತೃತ್ವದಲ್ಲಿ ನಡೆಯುತ್ತಿರುವ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ವಿದ್ಯಾರ್ಥಿಗಳ (Students) ಮಧ್ಯೆ ಕುಳಿತು ವೀಕ್ಷಣೆ ಮಾಡಿದರು. ಹುಬ್ಬಳ್ಳಿಯ (Hubballi) ಸವಾಯಿ ಗಂಧರ್ವ ಹಾಲ್ ನಲ್ಲಿ ವಿದ್ಯಾರ್ಥಿಗಳ ಪರೀಕ್ಷೆಗೆ ಅಣಿಗೊಳಿಸುವ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ವೀಕ್ಷಣೆಗೆ ಅಗತ್ಯ ವ್ಯವಸ್ಥೆಗಳೊಂದಿಗೆ ಅವಕಾಶ ಕಲ್ಪಿಸಲಾಗಿತ್ತು. ಸವಾಯಿ ಗಂಧರ್ವ ಹಾಲ್ ಗೆ ಆಗಮಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಳಿತು ಪರೀಕ್ಷಾ ಪೇ ಚರ್ಚಾ (Examination) ಕಾರ್ಯಕ್ರಮ ವೀಕ್ಷಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪರೀಕ್ಷೆಗಳ ಬಗ್ಗೆ ಭಯಪಡದೆ ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು, ಉತ್ತಮ ತಯಾರಿ ಹಾಗೂ ಆತ್ಮಸ್ಥೈರ್ಯದಿಂದ ಯಾವುದೇ ಪರೀಕ್ಷೆಯನ್ನು ಕೂಡ ಯಶಸ್ವಿಯಾಗಿ ಎದುರಿಸಬಹುದು ಎಂಬ ಸ್ಪೂರ್ತಿದಾಯಕ ನುಡಿಗಳನ್ನಾಡಿ ವಿದ್ಯಾರ್ಥಿಗಳಲ್ಲಿ ಸ್ಥೈರ್ಯ ತುಂಬಿದರು.

ಪ್ರಧಾನಿಗಳ ಕಾರ್ಯಕ್ರಮದ ನಂತರ ಸಭಾಭವನದಲ್ಲಿ ನೆರೆದಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಧಾನಿಗಳು ಬರೆದ ಎಕ್ಸಾಮ್ ವಾರಿಯರ್ಸ್ ಪುಸ್ತಕವನ್ನು ವಿತರಿಸಿದರು. ಭಾರತದ ಭವಿಷ್ಯವಾದ ಈ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅನುಭವ ತುಂಬಾ ಆನಂದ ನೀಡಿತು. ಈ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಪ್ರಲ್ಹಾದ ಜೋಶಿಯವರು ಇದೇ ವೇಳೆ ಆಶಿಸಿದರು.

ಸುಮಾರು ಐದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ಪ್ರಲ್ಹಾದ ಜೋಶಿಯವರು ವಿದ್ಯಾರ್ಥಿಗಳ ಜೊತೆ ಕುಳಿತು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸುವಾಗ ರಾಜ್ಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ಸಾಥ್ ನೀಡಿದರು‌.

ಸವಾಯಿ ಗಂಧರ್ವ ಹಾಲ್ ನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಣೆಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಪರೀಕ್ಷಾ ಪೆ ಚರ್ಚಾ ಕುರಿತು ಮತ್ತಷ್ಟು ಸುದ್ದಿಗಳಿಗಾಗಿ  ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Fri, 27 January 23