ಹುಬ್ಬಳ್ಳಿ: ಆಕಾಶ ಬುಟ್ಟಿ ಹಬ್ಬ; ಆಗಸದೆತ್ತರಕ್ಕೆ ಹಾರಿದ ಬೆಳಕನ್ನು ಕಂಡು ಸಂಭ್ರಮಿಸಿದ ಜನತೆ

ಈ ಹಬ್ಬದ ಅಂಗವಾಗಿ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆಕಾಶ ಬುಟ್ಟಿ ತಯಾರಿಕೆ ಸ್ಪರ್ಧೆ ಕೂಡ ಏರ್ಪಡಿಸಲಾಗಿತ್ತು. ಬೆಳಿಗ್ಗೆಯಿಂದಲೇ ಮಕ್ಕಳು ಬಣ್ಣ ಬಣ್ಣದ ನಕ್ಷತ್ರ, ದೀಪ, ಚೌಕಾಕಾರ ಸೇರಿದಂತೆ ವಿವಿಧ ಬಗೆಯ ಆಕಾಶ ಬುಟ್ಟಿಗಳನ್ನು ತಯಾರಿಸಿ, ತಾವು ತಯಾರಿಸಿದ ಆಕಾಶ ಬುಟ್ಟಿಗಳನ್ನು ಆಕಾಶದಲ್ಲಿ ಹಾರಿಸಿಬಿಟ್ಟು ಸಂಭ್ರಮಿಸಿದರು.

ಹುಬ್ಬಳ್ಳಿ: ಆಕಾಶ ಬುಟ್ಟಿ ಹಬ್ಬ; ಆಗಸದೆತ್ತರಕ್ಕೆ ಹಾರಿದ ಬೆಳಕನ್ನು ಕಂಡು ಸಂಭ್ರಮಿಸಿದ ಜನತೆ
ಆಕಾಶ ಬುಟ್ಟಿ
Follow us
TV9 Web
| Updated By: preethi shettigar

Updated on: Nov 15, 2021 | 8:23 AM

ಹುಬ್ಬಳ್ಳಿ: ನಗರದ ಮೂರು ಸಾವಿರ ಮಠದ ಶಾಲಾ ಆವರಣದಲ್ಲಿ ಹುಬ್ಬಳ್ಳಿ ಆಕಾಶ‌ಬುಟ್ಟಿ ಹಬ್ಬ(Skylight festival) ಸಮೀತಿ ವತಿಯಿಂದ ಆಯೋಜಿಸಲಾಗಿದ್ದ ಆಕಾಶ ಬುಟ್ಟಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತ್ತು. ದೀಪಾವಳಿ ಮತ್ತು ಕಾರ್ತಿಕ ಮಾಸದ ಅಂಗವಾಗಿ ಅಲ್ಲಿಯ ಯುವಕರು ಹುಬ್ಬಳ್ಳಿ ಆಕಾಶಬುಟ್ಟಿ ಹಬ್ಬ ಹಮ್ಮಿಕೊಂಡಿದ್ದರು. ಇನ್ನು ಈ ಕಾರ್ಯಕ್ರಮಕ್ಕೆ ನಗರದ ಹಲವು ಗಣ್ಯರು ಆಕಾಶಬುಟ್ಟಿ ಹಾರಿಸುವ ಮೂಲಕ ಚಾಲನೆ ನೀಡಿದರು. ಈ ಹಬ್ಬದ ಅಂಗವಾಗಿ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆಕಾಶ ಬುಟ್ಟಿ ತಯಾರಿಕೆ ಸ್ಪರ್ಧೆ ಕೂಡ ಏರ್ಪಡಿಸಲಾಗಿತ್ತು. ಬೆಳಿಗ್ಗೆಯಿಂದಲೇ ಮಕ್ಕಳು ಬಣ್ಣ ಬಣ್ಣದ ನಕ್ಷತ್ರ, ದೀಪ, ಚೌಕಾಕಾರ ಸೇರಿದಂತೆ ವಿವಿಧ ಬಗೆಯ ಆಕಾಶ ಬುಟ್ಟಿಗಳನ್ನು ತಯಾರಿಸಿ, ತಾವು ತಯಾರಿಸಿದ ಆಕಾಶ ಬುಟ್ಟಿಗಳನ್ನು ಆಕಾಶದಲ್ಲಿ ಹಾರಿಸಿಬಿಟ್ಟು ಸಂಭ್ರಮಿಸಿದರು.

ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಬಗೆಬಗೆಯ ಬಣ್ಣದ ಆಕಾಶ ಬುಟ್ಟಿಗಳನ್ನು ಅತ್ಯಂತ ಸಂತಸದಿಂದ ಹಾರಿಸುವ ಮೂಲಕ ಹಿಂದೂ ಧರ್ಮದ ಹಲವು ಸಂಸ್ಕೃತಿ ಹಾಗೂ ಆಚರಣೆಗಳನ್ನು ಮಕ್ಕಳಿಗೆ ಮನಮುಟ್ಟುವಂತೆ ಆಚರಿಸಿದರು. ಇನ್ನು ಸಂಜೆಯಿಂದ ಸುರಿದ ಮಳೆರಾಯನ‌ ಅಡ್ಡಿಯಿಂದಾಗಿ ಕೆಲಕಾಲ ಸಾರ್ವಜನಿಕರಲ್ಲಿ‌ ನಿರಾಶೆಯುಂಟಾಯಿತ್ತಾದರೂ, ಮಳೆಯ ನಂತರ ಹಲವು ಚಿತ್ತಾಕರ್ಷಕ ಆಕಾಶ ಬುಟ್ಟಿಗಳನ್ನು ಆಗಸದೆತ್ತರಕ್ಕೂ ಹಾರಿಸುವ ಮೂಲಕ ಮಕ್ಕಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುತು ಎಂದು ಹುಬ್ಬಳ್ಳಿ ಆಕಾಶಬುಟ್ಟಿ ಸಮಿತಿಯ ಅಧ್ಯಕ್ಷ ರಾಜು ಜರತಾರಘರ್ ತಿಳಿಸಿದ್ದಾರೆ.

ಒಟ್ಟಾರೆ ಇಂದಿನ‌ ಮೊಬೈಲ್ ಯುಗದಲ್ಲಿ ಮುಳುಗಿರುವ ಮಕ್ಕಳಿಗೆ ಹಿಂದೂ ಸಾಂಪ್ರದಾಯಿಕ‌ ಹಬ್ಬ ಹರಿದಿನಗಳನ್ನು, ನಶಿಸಿ ಹೋಗುತ್ತಿರುವ ಹಲವು ಆಚರಣೆಗಳನ್ನು ನೆನಪಿಸುವ ಉದ್ದೇಶದಿಂದ ಆಯೋಜನೆ‌ ಮಾಡಲಾಗಿದ್ದ ಈ ಆಕಾಶ ಬುಟ್ಟಿ ಹಬ್ಬದ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡಿದ್ದು ಹಬ್ಬಕ್ಕೆ ಮತ್ತಷ್ಟು ಕಳೆ ತಂದುಕೊಟ್ಟಿತ್ತು.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ:

ಕೋಲಾರ: ಸ್ಮಶಾನ ಹಬ್ಬ; ಸಕಲ ಸಂತರ ದಿನದ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಕೆಜಿಎಫ್

ಕರಾವಳಿಯಲ್ಲಿ ದೀಪಾವಳಿ ಸಂಭ್ರಮ: ಜಾತಿ, ಧರ್ಮ ಬೇಧ ಮರೆತು ಖಾಸಗಿ ಕಾಲೇಜು ವಿದ್ಯಾರ್ಥಿನಿಯರಿಂದ ಹಬ್ಬ ಆಚರಣೆ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ