Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2023: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಷರತ್ತುಬದ್ಧ ಅವಕಾಶ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಹುಬ್ಬಳ್ಳಿಯ ರಾಣಿ ಚನ್ನಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಅವಕಾಶ ನೀಡಿದೆ.

Holi 2023: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಷರತ್ತುಬದ್ಧ ಅವಕಾಶ
ಹುಬ್ಬಳ್ಳಿ ಈದ್ಗಾ ಮೈದಾನ
Follow us
ಆಯೇಷಾ ಬಾನು
|

Updated on:Mar 09, 2023 | 7:15 AM

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆ(Ganesha Utsav), ಟಿಪ್ಪು ಜಯಂತಿ(Tipu Jayanti) ಆಚರಣೆ ಸೇರಿದಂತೆ ಪ್ರತಿ ಹಬ್ಬ ಹರಿದಿನಗಳಲ್ಲಿ ವಿವಾದದ ಸುಳಿಗೆ ಸಿಕ್ಕಿಕೊಳ್ಳುವ ಹುಬ್ಬಳ್ಳಿಯ ರಾಣಿ ಚನ್ನಮ ಈದ್ಗಾ ಮೈದಾನದಲ್ಲಿ(Hubballi Idgah Maidan) ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ(Holi Celebration) ಅವಕಾಶ ಸಿಕ್ಕಿದೆ. ಹೋಳಿ ಹಬ್ಬ ಹಿನ್ನೆಲೆಯಲ್ಲಿ ಕಾಮಣ್ಣನ‌ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಆದೇಶವನ್ನು ಹೊರಡಿಸಿದ್ದಾರೆ.

10,000 ರೂ ಶುಲ್ಕ, ಷರತ್ತು ವಿಧಿಸಿ ಇಂದಿನಿಂದ 3 ದಿನಗಳ ಕಾಲ ಕಾಮಣ್ಣನ‌ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮದ ವೇಳೆ ಯಾವುದೇ ಗಲಭೆಗೆ ಅವಕಾಶ ನೀಡಬಾರದು. ಒಂದು ವೇಳೆ ಗಲಾಟೆಯಾಗಿ ಆಸ್ತಿ ಪಾಸ್ತಿ ಹಾನಿಯಾದ್ರೆ ಆಯೋಜಕರೇ ಜವಾಬ್ದಾರರೆಂದು ಹು-ಧಾ ಪಾಲಿಕೆ ಷರತ್ತು ವಿಧಿಸಿದೆ.

ಈ ಹಿಂದೆ ಗಜಾನನ ಉತ್ಸವ ಮಹಾಮಂಡಳಿ ಗಣೇಶ ಉತ್ಸವಕ್ಕೆ ಅನುಮತಿ ಕೇಳಿತ್ತು. ಅದೇ ರೀತಿ ಈ ಬಾರಿ ಕೂಡ ಅಧ್ಯಕ್ಷ ಸಂಜಯ್ ಬಡಾಸ್ಕರ್ ನೇತೃತ್ವದಲ್ಲಿ ರಂಗ ಪಂಚಮಿ ಪ್ರಯುಕ್ತ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಮಾಡಿದ ಹು-ಧಾ ಪಾಲಿಕೆ, ವಿವಿಧ ನಿಯಮಗಳನ್ನು ವಿಧಿಸಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ. ಮಾರ್ಚ್ 9ರಿಂದ 11ರ ವರೆಗೂ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮತ್ತು ಮೂರ್ತಿ ದಹನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ನವಲಗುಂದದಲ್ಲಿದೆ ಇಷ್ಟಾರ್ಥ ಸಿದ್ದಿಸುವ ಕಾಮಣ್ಣನ ದೇವಸ್ಥಾನ; ಇಲ್ಲಿದೆ ಫೋಟೋಸ್​

ವಿಮಾನ ಆಯ್ತು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ಮಾಡಿದ ಸಹ ಪ್ರಯಾಣಿಕ

ಹುಬ್ಬಳ್ಳಿ: ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿಚಾರ (Pee-gate) ಇತ್ತೀಚೆಗೆ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ (KSRTC Bus) ಅಂಥದ್ದೇ ವಿಲಕ್ಷಣ ವಿದ್ಯಮಾನ ನಡೆದಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಹುಬ್ಬಳ್ಳಿ (Hubballi) ತಲುಪಿದಾಗ ಘಟನೆ ನಡೆದಿದೆ. ನಾನ್​ ಎಸಿ ಸ್ಲೀಪರ್​ ಬಸ್​​ ಅನ್ನು ಹುಬ್ಬಳ್ಳಿ ಸಮೀಪದ ಕಿರೇಸೂರು ಢಾಬಾದಲ್ಲಿ ನಿಲುಗಡೆ ಮಾಡಲಾಗಿತ್ತು. ಆಗ ಯುವತಿ ಸೀಟ್​​ನ ಬಳಿ ಬಂದ ಸುಮಾರು 32 ವರ್ಷ ವಯಸ್ಸಿನ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಚಲಿತಗೊಂಡ ಯುವತಿ ಕಿರುಚಿದ್ದಾರೆ. ಇದನ್ನು ಕೇಳಿದ ಸಹ ಪ್ರಹಯಾಣಿಕರು, ಬಸ್ ಸಿಬ್ಬಂದಿ ಅತ್ತ ಧಾವಿಸಿ ಯುವಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಆತನನ್ನು ಅಲ್ಲಿಯೇ ಕೆಳಗಳಿಸಿ ಪ್ರಯಾಣ ಮುಂದುವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಯುವತಿಯು ಪೊಲೀಸರಿಗೆ ದೂರು ನೀಡಲು ನಿರಾಕರಿಸಿದರು. ಹೀಗಾಗಿ ಪ್ರಯಾಣವನ್ನು ಮುಂದುವರಿಸಿದೆವು ಎಂದು ಕೆಎಸ್​ಆರ್​​ಟಿಸಿ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:08 am, Thu, 9 March 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು