ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ, ಹಾಗಾಗಿ PFI ಬ್ಯಾನ್ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

PFI Ban: ಈ ನಿಟ್ಟಿನಲ್ಲಿ ಪಿಎಫ್ ಐ ಬ್ಯಾನ್ ಗೆ ಕೇಂದ್ರ ಗೃಹ ಇಲಾಖೆ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಚರ್ಚೆ ನಡೆಸಿದ್ದರು. ದೇಶ ವಿರೋಧಿ ಕೃತ್ಯದಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂಘಟನೆಯನ್ನು ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ, ಹಾಗಾಗಿ PFI ಬ್ಯಾನ್ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ, ಹಾಗಾಗಿ PFI ಬ್ಯಾನ್ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 28, 2022 | 5:41 PM

ಪಿಎಫ್‌ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.‌

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ (National Security priority) ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಲ್ಹಾದ್ ಜೋಶಿ (Pralhad Joshi) ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಿಎಸ್ ಐ ಅಕ್ರಮ ಚಟುವಟಿಕೆಗಳ ಬಗ್ಗೆ ಈ ಹಿಂದೆಯೇ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್ ಐ ಕೈವಾಡ ಇರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಪ್ರಕರಣದಲ್ಲಿ ಪಿಎಫ್ ಐ ಸಂಘಟನೆ ಕೈವಾಡವಿರುವ ಕುರಿತು ತನಿಖೆ ತೀವ್ರಗೊಳಿಸುವಂತೆ ಸೂಚಿಸಿದ್ದರು. ಪಿಎಫ್ ಐ, ಎಸ್.ಡಿ.ಪಿ.ಐ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ಮಾಹಿತಿಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಹಂಚಿಕೊಂಡಿದ್ದರು.‌

ಈ ನಿಟ್ಟಿನಲ್ಲಿ ಪಿಎಫ್ ಐ ಬ್ಯಾನ್ ಗೆ ಕೇಂದ್ರ ಗೃಹ ಇಲಾಖೆ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಚರ್ಚೆ ನಡೆಸಿದ್ದರು. ದೇಶ ವಿರೋಧಿ ಕೃತ್ಯದಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂಘಟನೆಯನ್ನು ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.

ಪಿಎಫ್ ಐ ಮೇಲೆ ಸಂಘಟಿತ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾದಳ, ಇಡಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ನೂರಾರು ಪಿಎಫ್ ಐ, ಎಸ್.ಡಿ.ಪಿಐ ಕಾರ್ಯಕರ್ತರನ್ನ ಬಂಧಿಸಿತ್ತು. ಪಿಎಫ್ ಐ ಸಂಘಟನೆ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ಹಲವು ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪಿಎಫ್ ಐ ಸಂಘಟನೆಯನ್ನ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ಬ್ಯಾನ್ ಮಾಡಿದೆ.

Published On - 3:07 pm, Wed, 28 September 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ