AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಪ್ರಧಾನಿ ಕರೆ; ಮಣ್ಣಿನ ಹಣತೆ ಖರೀದಿಸುವ ಮೂಲಕ ಸಚಿವ ಪ್ರಹ್ಲಾದ್​ ಜೋಶಿ ಭಾಗಿ

ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಪ್ರಧಾನಿ ಕರೆ; ಮಣ್ಣಿನ ಹಣತೆ ಖರೀದಿಸುವ ಮೂಲಕ ಸಚಿವ ಪ್ರಹ್ಲಾದ್​ ಜೋಶಿ ಭಾಗಿ
ಪ್ರಹ್ಲಾದ್​ ಜೋಶಿ
ಕಿರಣ್ ಹನುಮಂತ್​ ಮಾದಾರ್
|

Updated on: Nov 14, 2023 | 5:13 PM

Share

ಹುಬ್ಬಳ್ಳಿ, ನ.14: ದೀಪಾವಳಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್(Vocal For Local) ಅಭಿಯಾನದಲ್ಲಿ ಭಾಗವಹಿಸಿ, ದೀಪಗಳ ಹಬ್ಬ ದೀಪಾವಳಿ ಆಚರಿಸಿದೆನು ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ(Pralhad Joshi)ಯವರು ಟ್ವೀಟ್​ ಮಾಡಿದ್ದಾರೆ. ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದಿದ್ದಾರೆ.

ವೋಕಲ್ ಫಾರ್ ಲೋಕಲ್’ಗೆ ಪ್ರಧಾನಿ ಕರೆ

ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯ ಸಂದರ್ಭದಲ್ಲಿ ನಾವೆಲ್ಲರೂ ಸ್ಥಳೀಯ ಕರಕುಶಲಕರ್ಮಿಗಳಿಂದ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದರು. ಜೊತೆಗೆ ಅವರ ವಸ್ತುಗಳನ್ನು ಖರೀದಿಸಿ ತಯಾರಿಸಿದವರ ಜೊತೆಯಲ್ಲಿಯೇ ಸೆಲ್ಪಿ ತೆಗೆದುಕೊಂಡು ನಮೋ ಆ್ಯಪ್​ನಲ್ಲಿ ಹಂಚಿಕೊಳ್ಳುವಂತೆ ಕರೆ ನೀಡಿದ್ದರು. ಈ ಮೂಲಕ ಸ್ಥಳೀಯ ಗುಡಿ ಕೈಗಾರಿಕೆಗಳು, ಕುಶಲಕರ್ಮಿಗಳನ್ನು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ:ಯೂಟ್ಯೂಬರ್​​​ಗಳೊಂದಿಗೆ ಮೋದಿ ಮಾತು; ಸ್ವಚ್ಛತೆ, ಡಿಜಿಟಲ್ ಪಾವತಿ, ವೋಕಲ್ ಫಾರ್ ಲೋಕಲ್ ಬಗ್ಗೆ ಮಾತನಾಡಿದ ಪ್ರಧಾನಿ

ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ

ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವಂತಹ ಸ್ಪೂರ್ತಿದಾಯಕ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ದೇಶಾದ್ಯಂತ ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ. ಇದರ ಜೊತೆಗೆ ಅನುಕರಣೆಯ ವೇಗವನ್ನೂ ಪಡೆಯುತ್ತಿದೆ  ಎಂದು ಹೇಳಿದ್ದರು. “ವೋಕಲ್‌ ಫಾರ್‌ ಲೋಕಲ್‌ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ