ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ

Bengaluru-Dharwad Vande Bharat train : ಬಹು ನಿರೀಕ್ಷಿತ ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಓಡಾಟಕ್ಕೆ ಮುಹೂರ್ತ ನಿಗದಿಯಾಗಿದೆ.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಜೂ.26ಕ್ಕೆ ಚಾಲನೆ, ಯಾವ ಕಡೆ ಸಂಚಾರ? ಇಲ್ಲಿದೆ ವಿವರ
ವಂದೇ ಭಾರತ್ ರೈಲು
Follow us
ರಮೇಶ್ ಬಿ. ಜವಳಗೇರಾ
|

Updated on:Jun 15, 2023 | 2:17 PM

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್‌ ರೈಲು(Vande Bharat train) ಓಡಾಡಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಹೌದು.. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜೂನ್ 26ರಂದು ಒಟ್ಟು 5 ಹೊಸ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಬೆಂಗಳೂರು- ಹುಬ್ಬಳ್ಳಿ(Bengaluru-Dharwad) ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಕರ್ನಾಟಕದಲ್ಲಿ ವಂದೇ ಭಾರತ್‌ ರೈಲಿನ ಸಂಖ್ಯೆ 2ಕ್ಕೆ ಏರಲಿದೆ. ಈ ಮೊದಲು ಮೈಸೂರು-ಚೆನ್ನೈ ವಂದೇ ಭಾರತ್‌ ಆರಂಭಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ 2ನೆಯ ವಂದೇ ಭಾರತ್‌ ರೈಲು! ಜುಲೈಗೆ ಧಾರವಾಡ-ಬೆಂಗಳೂರು ವಂದೇ ಭಾರತ್‌ ಸಂಚಾರ ಆರಂಭ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು- ಹುಬ್ಬಳ್ಳಿ, ಮುಂಬೈ- ಗೋವಾ, ಪಟನಾ- ರಾಂಚಿ, ಭೋಪಾಲ್‌- ಇಂದೋರ್‌ ಮತ್ತು ಭೋಪಾಲ್‌- ಜಬ್ಬಲ್‌ಪುರ ಮಾರ್ಗಗಳಲ್ಲಿ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ಒಂದೇ ದಿನ 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ. 288 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬಳಿಕ ಮೊದಲ ಬಾರಿಗೆ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಾಗುತ್ತಿದ್ದು, ದುರಂತದ ಬಳಿಕ ಮುಂಬೈ ಮತ್ತು ಗೋವಾ ನಡುವಿನ ರೈಲು ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು. ಈಗ ಜೂನ್ 26ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಒಟ್ಟು 5 ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ದೇಶದಲ್ಲಿ ವಂದೇ ಭಾರತ್‌ ರೈಲುಗಳ ಸಂಖ್ಯೆ 24ಕ್ಕೆ ಏರಿಕೆಯಾಗಲಿದೆ.

ಬೆಂಗಳೂರು ಹುಬ್ಬಳ್ಳಿ ವಂದೇ ಭಾರತ್ ರೈಲು ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ಮಾತ್ರ ನಿಲ್ಲಲಿದೆ ಎಂದು ವರದಿಯಾಗಿದೆ. ಈಗಾಗಲೇ ಬೆಂಗಳೂರು-ಹುಬ್ಬಳ್ಳಿ ಮುಖ್ಯ ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಆಗಿದೆ.

ಬೆಂಗಳೂರು-ಧಾರವಾಡ ರಾಜ್ಯದ ಜನನಿಬಿಡ ಮಾರ್ಗವಾಗಿದೆ. ಹೀಗಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಕಡಿಮೆ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲಿನ ವೇಗ, ಟಿಕೆಟ್ ದರ ಮತ್ತು ರೈಲು ಸಮಯ ಇನ್ನೂ ಅಂತಿಮಗೊಂಡಿಲ್ಲ.

ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:06 pm, Thu, 15 June 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?