Narendra Modi: ಯುವಜನೋತ್ಸವ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆ ಸಿದ್ಧತಾ ಕಾರ್ಯ ಪರಿಶೀಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Pralhad Joshi: ಕೇಂದ್ರ ಸಚಿವ ಜೋಶಿಯವರು ಪ್ರಧಾನಿ ನರೇಂದ್ರ ಮೋದಿ ಬಂದಿಳಿಯುವ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ರೈಲ್ವೆ ಮೈದಾನದವರೆಗೆ, ಖುದ್ದಾಗಿ ಸಂಪೂರ್ಣ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳು ಮಾಡಬೇಕಾದ ತಯಾರಿಯ ಬಗ್ಗೆ ಮಾರ್ಗದರ್ಶನ ಮಾಡಿದರು.
ಇದೇ ಜನವರಿ 12ರಂದು ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ (26th National Youth Festival) ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಹುಬ್ಬಳ್ಳಿಗೆ (Hubballi) ಆಗಮಿಸುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಅಧಿಕಾರಿಗಳ ಜೊತೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ರೈಲ್ವೆ ಮೈದಾನದವರೆಗೆ ಸಂಪೂರ್ಣ ಸ್ಥಳ ಪರಿಶೀಲನೆ ನಡೆಸಿದರು. ಕಾರ್ಯಕ್ರಮದ ಸಿದ್ಧತೆಯ ಕುರಿತು ಅಧಿಕಾರಿಗಳೊಂದಿಗೆ ಅವರು ಸುದೀರ್ಘ ಸಮಾಲೋಚನೆ ನಡೆಸಿದರು.
ಜನವರಿ 12 ರಿಂದ ಆರಂಭವಾಗುವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಸಮಾರಂಭದ ಸಿದ್ಧತೆ ಹಾಗೂ ಪ್ರಧಾನಿಗಳ ಸ್ವಾಗತಕ್ಕೆ ನಡೆಸುವ ತಯಾರಿಯ ಕುರಿತು ಜೋಶಿಯವರು ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.
ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು -ಸಚಿವ ಪ್ರಲ್ಹಾದ ಜೋಶಿ ಕರೆ
ಈ ರಾಷ್ಟ್ರೀಯ ಮಟ್ಟದ ಉತ್ಸವವು ಅವಳಿ ನಗರದಲ್ಲಿ ನಡೆಯುತ್ತಿರುವುದು ಹೆಮ್ಮೆಯ ಎಂದಿರುವ ಪ್ರಲ್ಹಾದ ಜೋಶಿಯವರು, ಎಲ್ಲ ಕಾರ್ಯಕ್ರಮಗಳನ್ನು ಅಚ್ಚು ಕಟ್ಟಾಗಿ ನಿರ್ವಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದಿದ್ದಾರೆ.
ಉಲ್ಲಾಸ ಹಾಗೂ ಉತ್ಸಾಹ ತುಂಬಿದ ಉತ್ಸವಕ್ಕಾಗಿ ಸಜ್ಜಾಗಿದೆ ಅವಳಿ ನಗರ.
ಬನ್ನಿ, ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಿ
ಉತ್ಸವದಲ್ಲಿ ಪಾಲ್ಗೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳಿ https://t.co/o6NPGOBE95
— Pralhad Joshi (@JoshiPralhad) January 8, 2023
ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯ ಪ್ರಯುಕ್ತ ಜನವರಿ 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಮೊದಲ ದಿನ ಅಂದರೆ 12ನೇ ತಾರೀಖು ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡು ನಂತರ 16ನೇ ತಾರೀಖಿನವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯುವಕರು ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕರೆ ನೀಡಿದ್ದಾರೆ.
ಯುವಜನೋತ್ಸವದಲ್ಲಿ ಭಾಗವಹಿಸಲು ಇಚ್ಛಿಸುವ ಯುವಕರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳಬಹುದಾಗಿದೆ. www.nyfhubballidharwad2023.in
ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಲಾಂಛನವನ್ನು ವರ್ಚುವಲ್ ಮೂಲಕ ಕೇಂದ್ರ ಯುವ ಸಬಲೀಕರಣ ಸಚಿವರಾದ ಅನುರಾಗ್ ಠಾಕೂರ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಚಿವರು ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಿದ್ದರು.
ಇಂದು ಸಹ ಸಮಾರಂಭದ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿಯುವ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ರೈಲ್ವೆ ಮೈದಾನದವರೆಗೆ, ಖುದ್ದಾಗಿ ಸಂಪೂರ್ಣ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳು ಮಾಡಬೇಕಾದ ತಯಾರಿಯ ಬಗ್ಗೆ ಪೂರ್ಣ ಮಾರ್ಗದರ್ಶನ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ