ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ, ಇಲ್ಲಿದೆ ವೇಳಾಪಟ್ಟಿ
ಹುಬ್ಬಳ್ಳಿ ಜನರ ಬಹು ನಿರೀಕ್ಷಿತ ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ.
ಹುಬ್ಬಳ್ಳಿ, ಸೆಪ್ಟೆಂಬರ್ 16: ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ (Hubblli-Pune Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಸೋಮವಾರ (ಸೆ.16) ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಮಯ, ಯಾವ್ಯಾವ ದಿನದಂದು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ.
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ.
ಯಾವ್ಯಾವ ದಿನದಂದು ರೈಲು ಸಂಚರಿಸುತ್ತದೆ
ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ಹೊರಟು ಅದೇ ದಿನ ಪುಣೆ ತಲುಪುತ್ತದೆ. ಪುಣೆಯಿಂದ ಗುರುವಾರ, ಶನಿವಾರ ಮತ್ತು ಸೋಮವಾರ ಹೊರಟು ಹುಬ್ಬಳ್ಳಿ ತಲಪುತ್ತದೆ. ಈ ರೈಲು ಒಟ್ಟು 8 ಬೋಗಿಗಳೊಂದಿಗೆ ಸಂಚರಿಸಲಿದ್ದು, 52 ಎಕ್ಸಿಕ್ಯೂಟಿವ್ ಕ್ಲಾಸ್ ಸೀಟ್ಗಳು ಮತ್ತು 478 ಚೇರ್ ಕಾರ್ ಸೀಟುಗಳು ಇರಲಿವೆ. ಒಟ್ಟು 530 ಆಸನಗಳನ್ನು ಹೊಂದಿದೆ.
ಇದನ್ನೂ ಓದಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ತುಮಕೂರಲ್ಲೂ ನಿಲ್ಲುತ್ತೆ, ವೇಳಾಪಟ್ಟಿ ಇಲ್ಲಿದೆ
Get ready to experience seamless travel with the Tri-Weekly #VandeBharatExpress ! Connecting Hubballi and Pune with unparalleled comfort and convenience, this prestigious train service will be inaugurated by the Hon’ble Prime Minister of India via video link on September 16,… pic.twitter.com/DG6DbnEhB4
— South Western Railway (@SWRRLY) September 15, 2024
ರೈಲು ಸಮಯ
- ರೈಲು ಸಂಖ್ಯೆ 20669: ಎಸ್‌ಎಸ್‌ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸೆಪ್ಟೆಂಬರ್ 18 ರಿಂದ ಜಾರಿಗೆ ಬರುವಂತೆ ಪ್ರತಿ (ಬುಧವಾರ, ಶುಕ್ರವಾರ ಮತ್ತು ಭಾನುವಾರ) ಹುಬ್ಬಳ್ಳಿಯಿಂದ 05.00 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 1.30ಕ್ಕೆ ಪುಣೆ ತಲುಪುತ್ತದೆ.
- ರೈಲು ಸಂಖ್ಯೆ 20670: ಪುಣೆ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಂದೇ ಭಾರತ್ ರೈಲು ಸೆಪ್ಟೆಂಬರ್ 19 ರಿಂದ ಜಾರಿಗೆ ಬರುವಂತೆ ಪ್ರತಿ (ಗುರುವಾರ, ಶನಿವಾರ ಮತ್ತು ಸೋಮವಾರ) ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು ಅದೇ ದಿನ ರಾತ್ರಿ 10.45ಕ್ಕೆ ಹುಬ್ಬಳ್ಳಿ ತಲುಪಲಿದೆ.
- ಇಂದು (ಸೆ.16) 4.15ಕ್ಕೆ ಪುಣೆಯಿಂದ ಹೊರಟು ರಾತ್ರಿ 11.40ಕ್ಕೆ ಹುಬ್ಬಳ್ಳಿ ತಲುಪುತ್ತದೆ.
ನಿಲುಗಡೆ
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಧಾರವಾಡ, ಸತಾರಾ, ಸಾಂಗ್ಲಿ, ಮೀರಜ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ವಂದೇ ಭಾರತ್ ಸ್ವದೇಶಿ ರೈಲಾಗಿದೆ. “ಮೇಕ್ ಇನ್ ಇಂಡಿಯಾ”ದ ಪ್ರತೀಕವಾಗಿದೆ. ಮೊದಲ ವಂದೇ ಭಾರತ್ ರೈಲನ್ನು 2019ರ ಫೆಬ್ರವರಿ 15 ರಂದು ಉದ್ಘಾಟಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:50 am, Mon, 16 September 24