ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್
ಕಳ್ಳರು ಅಕ್ಟೊಬರ್ 24 ರಂದು ಕಚೇರಿಯ ಶೌಚಾಲಯದ ಕಿಟಕಿ ಮೂಲಕ ಒಳ್ಳ ನುಗ್ಗಿ, ಸೇಫ್ಟಿ ರೂಮಿನ ಕೀಲಿ ಮುರಿದು 1.24 ಕೋಟಿ ರೂ. ಕಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ರಾಯಾಪುರ ಠಾಣೆ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡ ನ.02: ನಗರದ ರಾಯಾಪೂರ (Rayapura) ಬಡಾವಣೆಯಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಕಚೇರಿಯಲ್ಲಿ (SKDRPD) ನಡೆದಿದ್ದ ಕಳ್ಳತನ ಪ್ರಕರಣವನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬೇಧಿಸಿದ್ದಾರೆ. 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 79,89,870 ರೂ., ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಡಿಸೈರ್ ಕಾರು, ಎರಡು ದ್ವಿ-ಚಕ್ರವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳರು ಅಕ್ಟೊಬರ್ 24 ರಂದು ಕಚೇರಿಯ ಶೌಚಾಲಯದ ಕಿಟಕಿ ಮೂಲಕ ಒಳ್ಳ ನುಗ್ಗಿ, ಸೇಫ್ಟಿ ರೂಮಿನ ಕೀಲಿ ಮುರಿದು 1.24 ಕೋಟಿ ರೂ. ಕಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ರಾಯಾಪುರ ಠಾಣೆ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕಳ್ಳತನದಲ್ಲಿ ಸಂಸ್ಥೆಯ ಮೂವರು ಸಿಬ್ಬಂದಿ ಶಾಮೀಲಾಗಿದ್ದರು ಎಂಬುವುದು ಆಘಾತಕಾರಿ ಅಂಶವಾಗಿದೆ.
ಇದನ್ನೂ ಓದಿ: ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ
ಕುಶಾಲಕುಮಾರ ಸವಣೂರು, ಬಸವರಾಜ ಬಾಬಜಿ, ಮಹಾಂತೇಶ ಹಿರಗಣ್ಣವರ್ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಇನ್ನುಳಿದ ಜಿಲಾನಿ, ಪರಶುರಾಮ, ರಂಗಪ್ಪ, ಮಂಜುನಾಥ, ಕಿರಣ, ರಜಾಕ ಅಜ್ಯದ ಮತ್ತು ವೀರೇಶ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ