AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು

ಪೊಲೀಸ್ ಕಾನ್ಸ್​​ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹಿಳೆ ಮತ್ತು ಪೊಲೀಸ್ ಪೇದೆ ಒಟ್ಟಿಗೆ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಮನೆಯೊಂದರಲ್ಲಿ ಮಹಿಳೆಯೊಂದಿಗೆ ಪೊಲೀಸ್​ ಕಾನ್ಸ್​ಟೇಬಲ್​ ನೇಣಿಗೆ ಶರಣು
ಶಿವಕುಮಾರ್ ಪತ್ತಾರ್
| Edited By: |

Updated on:May 21, 2024 | 8:11 PM

Share

ಹುಬ್ಬಳ್ಳಿ, (ಮೇ 21): ಪೊಲೀಸ್ ಕಾನ್ಸ್​​ಟೇಬಲ್ (Police Constable) ಒಬ್ಬರು ಮಹಿಳೆಯೊಂದಿಗೆ(Woman)  ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ(Hubballi) ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30)  ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ  ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.

ಮಹೇಶ್​ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ​ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ.ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.

ಇದನ್ನೂ ಓದಿ: ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

ಬೆಳಗಾವಿಯಲ್ಲಿ ರೈತ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಸಾಲದ ಹೊರೆಗೆ ರೈತ ಮೃತಪಟ್ಟಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:06 pm, Tue, 21 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ