ಹುಬ್ಬಳ್ಳಿ, (ಮೇ 21): ಪೊಲೀಸ್ ಕಾನ್ಸ್ಟೇಬಲ್ (Police Constable) ಒಬ್ಬರು ಮಹಿಳೆಯೊಂದಿಗೆ(Woman) ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ(Hubballi) ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ.ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
ಇದನ್ನೂ ಓದಿ: ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ (Farmer) ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಸಾಲದ ಹೊರೆಗೆ ರೈತ ಮೃತಪಟ್ಟಿದ್ದಾನೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 4:06 pm, Tue, 21 May 24