Hubballi News: ತಾನಿದ್ದ ರೂಂ ನಲ್ಲಿಯೇ ನೇಣಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ಕಾನ್ಸ್​ಟೇಬಲ್​​ಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಡಿಗೇರಿ ಪೊಲೀಸ್​​ ಠಾಣೆಯಲ್ಲಿ ಪೇದೆಯಾಗಿದ್ದ ಮಲ್ಲಿಕಾರ್ಜುನ ರುದ್ರಾಪುರ(26) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

Hubballi News: ತಾನಿದ್ದ ರೂಂ ನಲ್ಲಿಯೇ ನೇಣಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ
ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 11:53 AM

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ(Constable) ತಾನಿದ್ದ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ರುದ್ರಾಪೂರ(26) ಮೃತ ರ್ದುದೈವಿ. ಇತ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ.ಇದ್ದಕ್ಕಿದ್ದಂತೆ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಭರಮಗಿರಿ ಕ್ರಾಸ್​ ಬಳಿ ಬೈಕ್​ಗೆ ಲಾರಿ ಡಿಕ್ಕಿ, ಸವಾರ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಭರಮಗಿರಿ ಕ್ರಾಸ್​ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸೋಮಶೇಖರ್(25) ಮೃತ ವ್ಯಕ್ತಿ. ಬೆಂಗಳೂರಿಂದ ಬಾಗಲಕೋಟೆಗೆ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ಇನ್ನು ಮೃತ ಸೋಮಶೇಖರ್ ಬೆಂಗಳೂರಿನ ಕಾಲ್ ಸೆಂಟರ್​ನಲ್ಲಿ ಕೆಲಸ ಮಾಡುತ್ತಿದ್ದ. ಊರಿಗೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್​​​ ದಾಖಲಾಗಿದೆ.

ಇದನ್ನೂ ಓದಿ:Jharkhand: ಹಣೆಯಲ್ಲಿ ಬಿಂದಿ ಇಟ್ಟುಕೊಂಡಿದ್ದಕ್ಕೆ ಥಳಿಸಿದ ಶಿಕ್ಷಕ, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಹಾಡುಹಾಗಲೇ ಮನೆಯಲ್ಲಿ ಕಳ್ಳತನ; ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲಿಗೆರೆ ಗ್ರಾಮದ ಚಂದ್ರಮ್ಮ ಎಂಬುವರ ಮನೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿಟ್ಟಿದ್ದ ಬರೊಬ್ಬರಿ 25 ಗ್ರಾಂ ಚಿನ್ನದ ಓಲೆ, 3 ಚಿನ್ನದ ಉಂಗುರ ಹಾಗೂ 80 ಸಾವಿರ ನಗದು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆಕಸ್ಮಿಕ ಬೆಂಕಿ, ಸುಟ್ಟು ಭಸ್ಮವಾದ ಗುಡಿಸಲು

ತುಮಕೂರು: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ಕೆ.ರಂಗನಹಳ್ಳಿಯಲ್ಲಿ ನಡೆದಿದೆ. ಶಂಕರ್ ನಾಗ್ ಕೋಂ ಜುಂಜಣ್ಣ ಎಂಬುವವರಿಗೆ ಸೇರಿದ್ದ ಗುಡಿಸಲು ಇದಾಗಿದ್ದು, ಮನೆಯಲ್ಲಿದ್ದ ಧಾನ್ಯಗಳು, ಬಟ್ಟೆ ಬರೆ, ಆಭರಣಗಳು ಸುಟ್ಟು ನಾಶವಾಗಿದೆ. ಮನೆ ಮಂದಿ ಕೂಲಿ ಕೆಲಸಕ್ಕೆ ಹೋದ ಸಂದರ್ಭ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಹೊತ್ತಿಗೆ ಗುಡಿಸಲು ಸಂಪೂರ್ಣ ಸುಟ್ಟು ಹೋಗಿದೆ. ಈ ಘಟನೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ