AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್

ವಿಧಾನಸಭೆಯಲ್ಲಿ ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ದಿನವೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಎಗ್ ರೈಸ್, ಗೋಬಿ ಮಂಚೂರಿ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on: Sep 25, 2021 | 10:39 AM

Share

ಧಾರವಾಡ: ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಅಣ್ಣಿಗೇರಿ ತಾಲೂಕಿನಲ್ಲಿ ಘಟನೆ ನಡೆದಿತ್ತು. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು, ಬಾಲಕಿಯನ್ನು ಕೌನ್ಸಲಿಂಗ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಮಕ್ಕಳ ರಕ್ಷಣಾ ಘಟಕದ ಕೌನ್ಸಲಿಂಗ್ ವೇಳೆ ಬಾಲಕಿ ಅಧಿಕಾರಿಗಳಿಗೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಳು. ಬಾಲಕಿ ಮಾಹಿತಿ ಆಧರಿಸಿ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ದಿನವೇ ಈ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿ ಕಮಲಾ ಅವರು ದೂರು ದಾಖಲಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದರು.

ಮಹಾರಾಷ್ಟ್ರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಳೆದ 8 ತಿಂಗಳಲ್ಲಿ 15 ವರ್ಷದ ಬಾಲಕಿಯನ್ನು ಇಬ್ಬರು ಅಪ್ರಾಪ್ತರು ಸೇರಿದಂತೆ 24 ಜನರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಾಲಕಿಯ ದೂರಿನ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, 22 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಎಲ್ಲಾ ಆರೋಪಿಗಳನ್ನು ರಿಮಾಂಡ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಲ್ಯಾಣ್ ವಿಭಾಗ) ದತ್ತಾತ್ರಯ್ ಕರಾಳೆ ಹೇಳಿದರು. ಪೊಲೀಸರ ಪ್ರಕಾರ, 9 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಅಪ್ರಾಪ್ತ ವಯಸ್ಸಿನ ಆಕೆಯ ಸ್ನೇಹಿತ ಜನವರಿಯಲ್ಲಿ ಅತ್ಯಾಚಾರ ಮಾಡಿದ್ದಾನೆ.

ಇದನ್ನೂ ಓದಿ

ವಿಜಯಪುರ: ಪತ್ನಿಗೆ ಸಂಬಂಧಿಯ ಜೊತೆ ಅಕ್ರಮ ಸಂಬಂಧ; ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಇಂದಿನಿಂದ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ; ಬೆಳಗಾವಿಯಲ್ಲಿ ತಟ್ಟಲಿದೆ ರೈತರ ಪ್ರತಿಭಟನೆಯ ಬಿಸಿ!

(Police have arrested a man accused of raping a girl in Dharwad)