AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ; ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಾತು

ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರ್ತಾ ಇವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದರು.

ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ; ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಾತು
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಶಿವಕುಮಾರ್ ಪತ್ತಾರ್
| Edited By: |

Updated on: Sep 11, 2023 | 11:28 AM

Share

ಹುಬ್ಬಳ್ಳಿ, ಸೆ.11: ಕಾಂಗ್ರೆಸ್ ವಿರುದ್ಧ ಜಯ ಸಾಧಿಸಲು 2024ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ(BJP JDS Alliance) ಮಾಡಿಕೊಂಡಿದೆ ಎಂಬ ಬಗ್ಗೆ ಚರ್ಚೆಗಳಾಗುತ್ತಿದ್ದು ಈ ವಿಚಾರವನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜಕಾರಣ ನಿಂತ ನೀರಲ್ಲ. ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ ಎಂದು ಮಾಜಿ ಸಿಎಂ ಬೊಮ್ಮಾಯಿ ಮೈತ್ರಿ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ. ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ಮುಂದುವರಿದರೆ ರಾಜ್ಯ ಅಧೋಗತಿಗೆ ಹೋಗುತ್ತೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ ಇದೆ. ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರ್ತಾ ಇವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿವಿಯ ಕರ್ಮಕಾಂಡ ಬಯಲಿಗೆ, ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿಗೆ ಅವಕಾಶ

ಇನ್ನು ಇದೇ ವೇಳೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ? ಆಗ ಇಬ್ಬರೂ ಅಸಹಾಯಕರಿದ್ದರಾ? ಎಂದರು.

ಈ ಸರ್ಕಾರಕ್ಕೆ ರೈತರ ಸಂಕಷ್ಟ ನೆರವು ನೀಡುವ ಮನಸಿಲ್ಲ

ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡ ಅಡ್ಡಿ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಬರ ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಕುಂಟು ನೆಪ ಹೇಳ್ತಿದೆ. ಬರ ಘೋಷಣೆ ಸಂಬಂಧ ಹಿಂದಿನಿಂದಲೂ ಇದೇ ನಿಯಮ ಇದೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಕೂಡ ಕೇಂದ್ರದ ಅನುದಾನಕ್ಕಿಂತ ಹೆಚ್ಚಿನ ಹಣ ನೀಡಿದ್ದೆವು. ನಾವೇನಾದರು ನಿಯಮ ಬದಲಾವಣೆಗಾಗಿ ಕಾದು ಕುಳಿತಿದ್ವಾ? ಬರ ಪರಿಹಾರದ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಿ ಹಣ ಹಂಚಿದ್ದೇವೆ. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ಈ ಸರ್ಕಾರಕ್ಕೆ ರೈತರ ಸಂಕಷ್ಟ ನೆರವು ನೀಡುವ ಮನಸಿಲ್ಲ. ಸರ್ಕಾರ ಕೂಡಲೇ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಈಗಲಾದರೂ ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಸಲಿ

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ವಿಚಾರಕ್ಕೆ ಸಂಬಂಧಿಸಿ ಖಾಸಗಿ ಸಾರಿಗೆ ಸಮಸ್ಯೆ ಪರಿಹರಿಸುತ್ತೇವೆಂದು ಸಭೆ ಮಾಡಿದ್ರು. ಆದರೆ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಇದರಿಂದ ಸರ್ಕಾರದ ಬಗ್ಗೆ ಒಕ್ಕೂಟವು ವಿಶ್ವಾಸ ಕಳೆದುಕೊಂಡಿದೆ. ಈಗಲಾದರೂ ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಸಲಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ