ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು; ಹುಬ್ಬಳ್ಳಿಯಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನ ಸರಿಪಡಿಸಬೇಕು. ಇಲ್ಲವಾಗಿದ್ರೆ ಅದನ್ನ ತಿಳಿಸಿ. ಸುಮ್ನೆ ವಿವಾದ ಮಾಡೋದು ಸರಿಯಲ್ಲ. -ಜಗದೀಶ್ ಶೆಟ್ಟರ್

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು; ಹುಬ್ಬಳ್ಳಿಯಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Follow us
TV9 Web
| Updated By: ಆಯೇಷಾ ಬಾನು

Updated on: Jun 01, 2022 | 4:28 PM

ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಕಿತ್ತಾಟ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರೋಹಿತ್ ಚಕ್ರತೀರ್ಥ ಸಮಿತಿ ಹಲವು ಮಾರ್ಪಾಡುಗಳನ್ನು ಮಾಡಿರುವುದು ವಿವಾದಕ್ಕೆ ಕಾರಣವಾಗುತ್ತಿದೆ. ಇದೀಗ ಬಸವಣ್ಣನವರ ಕುರಿತಾದ ಪಠ್ಯ ಬದಲಾವಣೆ ಸಂಘರ್ಷಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಹಿರಿಯ ಸಾಹಿತಿಗಳು, ಮಠಾಧೀಶರ ಕೆಂಗಣ್ಣಿಗೆ ಗುರಿಯಾಗಿದೆ. ಬಸವಣ್ಣನವರ ಪಾಠದಲ್ಲಿ ಹಲವು ಅಂಶಗಳನ್ನು ಕೈ ಬಿಡಲಾಗಿದೆ ಅಂತಾ ಸಿಎಂಗೆ ಸಾಣೇಹಳ್ಳಿ ಶ್ರೀಗಳು ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ‌. ಬಸವಣ್ಣನವರ ಜನಮುಖಿ ಅಂಶ ಸೇರಿದಂತೆ ಅನೇಕ ಮಹತ್ವದ ಸಂಗತಿಗಳನ್ನೇ ತೆಗೆದು ತಮಗೆ ಬೇಕಾದಂತೆ ತಿರುಚಿದ್ದಾರೆ ಅಂತ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಪಠ್ಯಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಬೇಕು. ಮಠಾಧೀಶರು ಪತ್ರ ಬರೆಯುತ್ತಿದ್ದಾರಂದ್ರೆ ಗಂಭೀರವಾಗಿ ಪರಿಗಣಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನ ಸರಿಪಡಿಸಬೇಕು. ಇಲ್ಲವಾಗಿದ್ರೆ ಅದನ್ನ ತಿಳಿಸಿ. ಸುಮ್ನೆ ವಿವಾದ ಮಾಡೋದು ಸರಿಯಲ್ಲ. ಕೆಲವರು ವಿಷಯ ಗೊತ್ತಿಲ್ಲದೇ ಮಾತನಾಡ್ತಾರೆ. ನಾನೂ ಕೂಡಾ ಬಸವಣ್ಣನವರ ಕುರಿತು ಪಠ್ಯದಲ್ಲಿ ಏನಾಗಿದೆ ಎನ್ನೋದು ನೋಡಿಲ್ಲ. ಇವಾಗ ಆ ಪ್ರತಿ ತರಿಸೋಕೆ ಹೇಳಿದ್ದೇನೆ. ಅದರಲ್ಲಿ ತಪ್ಪಾಗಿದ್ರೆ ಖಂಡಿತ ಅದನ್ನ ಸರಿಪಡಿಸಬೇಕು. ಈ ಬಗ್ಗೆ ನಾನೂ ಕೂಡಾ ಸಿಎಂಗೆ ಹೇಳ್ತೇನೆ. ಮಠಾಧೀಶರ ಪತ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ಕಂಬದ ಮೇಲಿಂದ ಆಯತಪ್ಪಿ ಬಿದ್ದು ಚೆಸ್ಕಾಂ ನೌಕರ ಸಾವು, ಲಾರಿ ಡಿಕ್ಕಿ-ಬೈಕ್​ ಸವಾರರಿಬ್ಬರು ದುರ್ಮರಣ, ಅಶ್ಲೀಲ ಪೋಟೊ ಕಳಿಸ್ತಿದ್ದ ಆರೋಪಿ ಬಂಧನ

ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕಾಲಾನುಕ್ರಮೇಣ ಆಗಬೇಕು‌. ಅದು ಸಿಎಂ ಹಾಗೂ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಯಾಕೆ ತಡವಾಗ್ತಿದೆ ನಂಗೆ ಗೊತ್ತಿಲ್ಲ, ಈ ಬಗ್ಗೆ ಸಿಎಂ ಅವರೇ ಹೇಳಬೇಕು ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಶಿಕ್ಷಣ ಸಚಿವ ಮತ್ತು ರೋಹಿತ್ ವಿರುದ್ಧ ಭುಗಿಲೆದ್ದ ಕಿಚ್ಚು ಸಾಲು ಸಾಲು ವಿವಾದಗಳ ಬೆನ್ನಲ್ಲೇ ಶಿಕ್ಷಣ ಸಚಿವ ಬಿಸಿ ನಾಗೇಶ್ ಮತ್ತು ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ಫ್ರೀಡಂಪಾರ್ಕ್ನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ವು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ, ಪ್ರಗತಿಪರರು, ಸಾಹಿತಿಗಳು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವರು ತೀವ್ರ ಅಕ್ರೋಶ ವ್ಯಕ್ತಪಡಿಸಿದರು. ಹಾಗೇ ಶಿಕ್ಷಣ ಸಚಿವ ನಾಗೇಶ್ ತಕ್ಷಣ ರಾಜೀನಾಮೆ ನೀಡಬೇಕು. ಪರಿಷ್ಕೃತ ಪಠ್ಯಕ್ರಮ ರದ್ದುಗೊಳಿಸಿ, ಚಕ್ರತೀರ್ಥನನ್ನು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಕರವೇ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ರು. ಇದನ್ನೂ ಓದಿ: ಪಠ್ಯಕ್ರಮದ ಬಗ್ಗೆ ಲೇಖನ ಬರೆದಿದ್ದ ಶಿಕ್ಷಣ ತಜ್ಞ ಡಾ.ಸುಧಾಕರ್ ಹೊಸಳ್ಳಿಗೆ ಜೀವ ಬೆದರಿಕೆ

ಪ್ರಗತಿಪರರು, ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ಹಿರಿಯ ಸಾಹಿತಿ ಎಸ್.ಜಿ ರಾಮಕೃಷ್ಣ ಮಾತನಾಡಿ ಪಠ್ಯ ಪುಸ್ತಕ ಪರಿಷ್ಕರಣೆ ನ್ಯಾಯಬದ್ದವಾಗಿ ಆಗಿಲ್ಲ. ನನ್ನ ಲೇಖನ ಪಠ್ಯದಲ್ಲಿ ಸೇರುವುದಕ್ಕೆ ನನ್ನ ಸಂಪೂರ್ಣ ವಿರೋಧ ಇದೆ. ಇದು ಶಿಕ್ಷಣ ಕ್ಷೇತ್ರದ ಅವನತಿಯ ಹಾದಿ ಅಂದ್ರು.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್